Wednesday, October 5, 2022

ಚಿಕ್ಕಮಗಳೂರು : ಹೃದಯಘಾತಕ್ಕೆ ಬಲಿಯಾದ 7ನೇ ತರಗತಿ ವಿದ್ಯಾರ್ಥಿ..!

ಚಿಕ್ಕಮಗಳೂರು: ಎರಡು ದಿನಗಳ ಹಿಂದೆ 16 ವರ್ಷದ ಪುತ್ತೂರಿನ ವಿದ್ಯಾರ್ಥಿನಿ ಹೃದಯಘಾತಕ್ಕೆ ಬಲಿಯಾದ ಘಟನೆ ಮನದಾಳದಿಂದ ಮಾಸುವ ಮುನ್ನವೇ ಇದೀಗ ಚಿಕ್ಕಮಗಳೂರಿನಲ್ಲೂ ಇಂತಹುದೇ  ಘಟನೆ ವರದಿಯಾಗಿದೆ.

7ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ.

ಮೃತ ಬಾಲಕನನ್ನು 12 ವರ್ಷದ ಸೋಹನ್ ರಾಮ್ ಎಂದು ಗುರುತಿಸಲಾಗಿದೆ. ಪಟ್ಟಣದ ಮೆಸ್ಕಾಂ ಕಚೇರಿ ಬಳಿ  ಬೆಳಗ್ಗೆ 7.30ರ ಸುಮಾರಿಗೆ ಸೈಕಲ್ ಓಡಿಸುತ್ತಿದ್ದ ವೇಳೆ ಬಾಲಕ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ.

ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡಿದ್ದು, ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಮೃತ ಬಾಲಕ ನಗರದ ಡಿಸಿಎಂಸಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದನು. ಸೋಹನ್ ರಾಮ್ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಪ್ರಸನ್ನ ಹಾಗೂ ಪದವಿ ಕಾಲೇಜಿನಲ್ಲಿ ಉಪನ್ಯಾಸಕಿ ರೂಪ ದಂಪತಿಯ ಪುತ್ರ.

ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ಇದೀಗ ಓರ್ವ ಪುತ್ರ ಸಾವನ್ನಪ್ಪಿರೋದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನು ಘಟನೆಯಿಂದ ತಾಲೂಕಿನ ಜನ ಸಹ ದಿಗ್ಭ್ರಾಂತರಾಗಿದ್ದಾರೆ. ಇಷ್ಟು ಚಿಕ್ಕ ವಯಸ್ಸಿಗೆ ಹೃದಯಾಘಾತ ಅಂದರೆ ಹೇಗೆ ಎಂದು ಜನ ಬಾಲಕನ ಸಾವಿಗೆ ಮರುಗಿದ್ದಾರೆ.

ಮಾರ್ಚ್ 22 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ 16 ವರ್ಷದ ಶ್ರೇಯಾ ಪಕ್ಕಳ ಹೃದಯಾಘಾತದಿಂದ ಸಾವನ್ನಪ್ಪಿದ್ದಳು.

ಎಳೆ ವಯಸ್ಸಿನವರಲ್ಲೇ ಹೃದಯಘಾತಗಳು ಹೆಚ್ಚುತ್ತಿರುವುವುದು ಮತ್ತು ಸಾವುಗಳು ಸಂಭವಿಸುತ್ತಿರುವುದು ಆತಂಕ ತಂದಿದೆ.

LEAVE A REPLY

Please enter your comment!
Please enter your name here

Hot Topics

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.