Connect with us

    LATEST NEWS

    Chikkaballapura: ಮಗನಿಗೆ ಬುದ್ಧಿವಾದ ಹೇಳಿದ ತಾಯಿ- ನೊಂದ ಯುವಕ ಆತ್ಮಹತ್ಯೆ..!

    Published

    on

    ಯುವಕನೋರ್ವ ರಾತ್ರಿ ತಡವಾಗಿ ಬಂದ ಕಾರಣ ತಾಯಿ ಬುದ್ದಿವಾದ ಹೇಳಿದಕ್ಕೆ ನೊಂದ ಯುವಕ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

    ಚಿಕ್ಕಬಳ್ಳಾಪುರ: ಯುವಕನೋರ್ವ ರಾತ್ರಿ ತಡವಾಗಿ ಬಂದ ಕಾರಣ ತಾಯಿ ಬುದ್ದಿವಾದ ಹೇಳಿದಕ್ಕೆ ನೊಂದ ಯುವಕ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

    ಮೃತ ಯುವಕನನ್ನು ಉಜ್ವಲ್ (18) ಎಂದು ಗುರುತಿಸಲಾಗಿದೆ.

    ಉಜ್ವಲ್ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣನಗೊಂಡ ಬಳಿಕ ಆತ ಮನೆಯಲ್ಲಿ ಮೌನವಾಗಿದ್ದು, ಹೆಚ್ಚಾಗಿ ಮೊಬೈಲ್‍ನಲ್ಲೇ ಕಾಲ ಕಳೆಯುತ್ತಿದ್ದ.

    ಹಾಗಾಗಿ ಅನೇಕ ಬಾರಿ ತಾಯಿ ಬುದ್ದಿವಾದ ಹೇಳುತ್ತಿದ್ದರು.

    ಉಜ್ವಲ್ ಬುಧವಾರದಂದು ರಾತ್ರಿ ಮನೆಗೆ ತಡವಾಗಿ ಬಂದ ಕಾರಣ ತಾಯಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿ ಬುದ್ದಿವಾದ ಹೇಳಿದ್ದರು.

    ಬಳಿಕ ಆತ ರಾತ್ರಿ ಊಟ ಮಾಡಿ, ತನ್ನ ಕೋಣೆಯ ಒಳಗೆ ಹೋಗಿದ್ದ.

    ಬೆಳಗ್ಗೆ 7 ಗಂಟೆಯಾದರೂ ಬಾಗಿಲು ತೆರೆಯದಿದ್ದಾಗ ಯುವಕನ ಸಹೋದರ ಬಾಗಿಲು ಬಡಿದಿದ್ದಾನೆ.

    ಬಳಿಕ ಬೀಗ ಹಾಕುವ ರಂಧ್ರದಲ್ಲಿ ಇಣುಕಿ ನೋಡಿದಾಗ ನೇಣು ಬಿಗಿದು ಕೊಂಡಿರುವುದು ಕಂಡು ಬಂದಿದೆ.

    ಕೂಡಲೇ ಸಹೋದರನು ತನ್ನ ಮಾವಂದಿರಿಗೆ ಮಾಹಿತಿ ನೀಡಿ, ಅಕ್ಕಪಕ್ಕದವರನ್ನು ಕರೆದು ಬಾಗಿಲು ತೆರೆಯಲು ಪ್ರಯತ್ನ ಮಾಡಿದ್ದಾರೆ.

    ಒಳಗಿನಿಂದ ಲಾಕ್ ಮಾಡಿದ್ದ ಕಾರಣ ತೆರೆಯಲು ಸಾಧ್ಯವಾಗಿಲ್ಲ. ಬಳಿಕ ಬಾಗಿಲನ್ನು ಒಡೆದಿದ್ದಾರೆ.

    ಈ ವೇಳೆ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ನಿಯಂತ್ರಣ ತಪ್ಪಿ ಬೈಕ್ ಗದ್ದೆಗೆ; ಸವಾರ ಸಾ*ವು

    Published

    on

    ತೆಕ್ಕಟ್ಟೆ : ನಿಯಂತ್ರಣ ತಪ್ಪಿ ಬೈಕ್ ಗದ್ದೆಗೆ ಉರುಳಿ ಬಿದ್ದು ಸವಾರ ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾದ ಘಟನೆ ಕುಂದಾಪುರ ತೆಕ್ಕಟ್ಟೆ ಸಮೀಪದ ಕೊಮೆಯಲ್ಲಿ ಸಂಭವಿಸಿದೆ.

    ಪಡುಕರೆ ನಿವಾಸಿ ಮಹೇಂದ್ರ (32) ಮೃತ ದುರ್ದೈವಿ.

    ಸಂಬಂಧಿಕರ ಮನೆಯಲ್ಲಿ ದೀಪಾವಳಿ ಹಬ್ಬದ ಕಾರ್ಯಕ್ರಮವನ್ನು ಮುಗಿಸಿ ತಡರಾತ್ರಿ ಬೈಕ್ ನಲ್ಲಿ ಮಹೇಂದ್ರ ಬರುತ್ತಿದ್ದ ವೇಳೆ ತೆಕ್ಕಟ್ಟೆ– ಕೊಮೆ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೈಕ್ ಸಹಿತ ರಸ್ತೆ ಬದಿಯ ಗದ್ದೆಗೆ ಆಯತಪ್ಪಿ ಬಿದ್ದಿದ್ದಾರೆ. ಗದ್ದೆಯಲ್ಲಿ ನೀರಿದ್ದುದರಿಂದ ಉಸಿರುಗಟ್ಟಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ ಎಂದು ಹೇಳಲಾಗಿದೆ.

    ಕೃಷಿಭೂಮಿಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ತುಂಬಿ ಕೊಂಡಿದ್ದು, ಬೈಕ್ ಚಾಲಕನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ಮಗುಚಿ ಬಿದ್ದಿದ್ದರಿಂದ ನೀರಿನಲ್ಲಿ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    Continue Reading

    DAKSHINA KANNADA

    ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನಿಂದ ಮೆಸೇಜ್; ಯುವಕರಿಂದ ಹಲ್ಲೆ

    Published

    on

    ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ಸುಬ್ರಹ್ಮಣ್ಯದ ಗುತ್ತಿಗರುವಿನಲ್ಲಿ ನಡೆದಿದೆ.

    ಥಳಿತಕ್ಕೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ‌ ಚಿಕಿತ್ಸೆ ಪಡೆಯುತ್ತಿದ್ದಾನೆ.

    ನಿಯಾಝ್ ಎಂಬಾತ ಹಲ್ಲೆಗೊಳಗಾದ ಯುವಕ.

    ಸ್ಥಳೀಯ ಯುವತಿಯೋರ್ವಳಿಗೆ ನಿಯಾಝ್ ಮೆಸೇಜ್ ಮಾಡುತ್ತಿರುವುದಾಗಿ ತಿಳಿದು ಬಂದ ಬಳಿಕ, ಅವನನ್ನು ಕರೆಸಿಕೊಂಡ ಯುವಕರ ತಂಡವೊಂದು ಹಲ್ಲೆ ನಡೆಸಿದ್ದಾರೆ.

    ಈ ಪ್ರಕರಣದ ಕುರಿತು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ

    Published

    on

    ಮಂಗಳೂರು/ರಾಮನಗರ : ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ನಿಖಿಲ್‌ ಕುಮಾರಸ್ವಾಮಿ ಬೈಕ್‌ನಿಂದ ಬಿದ್ದಿದ್ದಾರೆ.

    ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್‌ ಕಾರ್ಯಕರ್ತನ ಬೈಕ್‌ ಏರಿ ಪ್ರಚಾರ ನಡೆಸುತ್ತಿದ್ದರು. ಈ ಸಂದರ್ಭ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

    ಇದನ್ನೂ ಓದಿ : ಚಲಿಸುತ್ತಿದ್ದ ಬೈಕಿನಲ್ಲಿ ಪಟಾಕಿ ಸಿಡಿಸಿ ಪುಂಡಾಟ; ಇಬ್ಬರ ಬಂಧನ

    ತಕ್ಷಣವೇ ಸ್ಥಳೀಯ ಕಾರ್ಯಕರ್ತರು ನಿಖಿಲ್‌ ನೆರವಿಗೆ ಧಾವಿಸಿದ್ದಾರೆ. ಅವರನ್ನು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಸ್ವಲ್ಪಹೊತ್ತು ವಿಶ್ರಾಂತಿ ಪಡೆದ ಬಳಿಕ ಮತ್ತೆ ನಿಖಿಲ್‌ ಕುಮಾರಸ್ವಾಮಿ ಪ್ರಚಾರ ಕಾರ್ಯ ಮುಂದುವರಿಸಿದರು.

    Continue Reading

    LATEST NEWS

    Trending