Connect with us

LATEST NEWS

ಚಿಕ್ಕಮಗಳೂರು : ಯುವಜನೋತ್ಸವಕ್ಕೆ ಹಾಕಿದ್ದ ಸಿ.ಟಿ. ರವಿ ಅವರ ಭಾವಚಿತ್ರದ ಫ್ಲೆಕ್ಸ್‌ಗೆ ಬ್ಲೇಡ್‌ ಗೀರಿದ ಕಿಡಿಗೇಡಿಗಳು..!

Published

on

ಚಿಕ್ಕಮಗಳೂರು ನಗರದ ಹನುಮಂತ ವೃತ್ತದಲ್ಲಿ ರಾಜ್ಯ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಹಾಕಿದ್ದ ಫ್ಲೆಕ್ಸ್‌ಗೆ ಕಿಡಿಗೇಡಿಗಳು ಬ್ಲೇಡಿನಿಂದ ಗೀರಿದ ಘಟನೆ ನಡೆದಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಹನುಮಂತ ವೃತ್ತದಲ್ಲಿ ರಾಜ್ಯ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಹಾಕಿದ್ದ ಫ್ಲೆಕ್ಸ್‌ಗೆ ಕಿಡಿಗೇಡಿಗಳು ಬ್ಲೇಡಿನಿಂದ ಗೀರಿದ ಘಟನೆ ನಡೆದಿದೆ.

ಸ್ಥಳೀಯ ಶಾಸಕರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತು ನಗರಸಭೆ ಅಧ್ಯಕ್ಷ ವೇಣುಗೋಪಾಲ್‌ ಸೇರಿದಂತೆ ಹಲವು ಮುಖಂಡತರ ಭಾವಚಿತ್ರಗಳಿಗೆ ಬ್ಲೇಡ್‌ ನಿಂದ ಗೀರಲಾಗಿದೆ.

ಡಿಸೆಂಬರ್‌ 17 ರಿಂದ ಎರಡು ದಿನಗಳ ಕಾಲ ಇಲ್ಲಿ ರಾಜ್ಯ ಮಟ್ಟದ ಯುವ ಜನೋತ್ಸವ ನಡೆಯಲಿದ್ದು, ಅದಕ್ಕೆ ಪೂರಕವಾಗಿ ನಗರವನ್ನು ಅಲಂಕರಿಸಲಾಗಿದೆ. ಸಿ.ಟಿ. ರವಿ ಸೇರಿದಂತೆ ಪ್ರಮುಖ ನಾಯಕರ ಹೆಸರಿನಲ್ಲಿ ಅಲ್ಲಲ್ಲಿ ಫ್ಲೆಕ್ಸ್‌ ಹಾಕಲಾಗಿದೆ.

ಗುರುವಾರ ರಾತ್ರಿ ದುಷ್ಕರ್ಮಿಗಳು ಸಿ.ಟಿ. ರವಿ ಸೇರಿದಂತೆ ಪ್ರಮುಖ ನಾಯಕರ ಚಿತ್ರಗಳಿಗೆ ಬ್ಲೇಡ್‌ ಹಾಕಿದ್ದಾರೆ.

ಸ್ಥಳಕ್ಕೆ ಪೊಲೀಸರು ಧಾವಿಸಿ ಹರಿದ ಫ್ಲೆಕ್ಸ್ ಗಳನ್ನು ವಶಕ್ಕೆ ಪಡೆದು ಠಾಣೆಗೆ ಒಯ್ದಿದ್ದು ದುಷ್ಕೃತ್ಯಮಾಡಿದ ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಫ್ಲೆಕ್ಸ್‌ ಗೀರಿದ ಪ್ರಕರಣ ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿದ್ದು ಈ ಕೃತ್ಯದಿಂದ ಹಿಂದಿರುವ ವ್ಯಕ್ತಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

DAKSHINA KANNADA

Mangaluru: ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!

Published

on

ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.

ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.

ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.

ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.

ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.

ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೆ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.

Continue Reading

DAKSHINA KANNADA

ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Published

on

ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.

ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Continue Reading

LATEST NEWS

Baindoor: ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ..!

Published

on

ಬೈಂದೂರು: ಬೈಂದೂರು- ಶಿರೂರು ನೆರೆಗುದ್ದೆ ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದ ಯುವಕನೊಬ್ಬನನ್ನು ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬಂದಿ ರಕ್ಷಿಸಿ ಪ್ರಾಣ ಉಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಗಾಯಾಳು ವ್ಯಕ್ತಿಯನ್ನು ರಾಜೇಶ್  (25)ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ 10 ಗಂಟೆಗೆ ರೈಲ್ವೆ ಇಲಾಖೆ ನೀಡಿದ ಮಾಹಿತಿಯ ಮೇರೆಗೆ ಆರೋಗ್ಯ ಕವಚ 108 ಸಿಬಂದಿ ಕಾರ್ಯಚರಣೆ ನಡೆಸಿದರು.

ರೈಲ್ವೇ ಸುರಂಗ ಮಾರ್ಗದೊಳಗೆ ಸುಮಾರು 3 ಕಿ.ಮೀ ನಡೆದು ಕೊಂಡು ಹೋಗಿ ಹಳಿಯ ಪಕ್ಕದಲ್ಲಿ ಮುಗುಚಿ ಬಿದ್ದಿದ್ದ ವ್ಯಕ್ತಿಯನ್ನು ಸ್ಟ್ರೆಚರ್ ನಲ್ಲಿ ಹಾಕಿ ಹೊತ್ತು ಹೊರತಂದು ಬೈಂದೂರು ಆಸ್ಪತ್ರೆಗೆ ದಾಖಲಿಸಿದರು.

ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಅಲ್ಲಿಂದ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ‌.

ಆ್ಯಂಬುಲೆನ್ಸ್‌ನ ಪೈಲೆಟ್ ಶರಣ ಬಸವ ಮತ್ತು ಇ ಎಂ ಟಿ ಪ್ರತಿಭಾ ಅವರು ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

Continue Reading

LATEST NEWS

Trending