Tuesday, May 30, 2023

ಚಿಕ್ಕಮಗಳೂರು ಬೈಕ್ ಅಪಘಾತ : NSG ಬ್ಲ್ಯಾಕ್ ಕ್ಯಾಟ್ ಕಮಾಂಡೋ ಮೃತ್ಯು..!

ಬೈಕ್ ಅಪಘಾತದಲ್ಲಿ ಎನ್‌ಎಸ್‌ಜಿ ಯ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಯಡಿಯೂರು ಸಮೀಪದ ಹೇಮಾವತಿ ಕ್ರಾಸ್ ಬಳಿ ನಡೆದಿದೆ.

ಚಿಕ್ಕಮಗಳೂರು: ಬೈಕ್ ಅಪಘಾತದಲ್ಲಿ ಎನ್‌ಎಸ್‌ಜಿ ಯ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಯಡಿಯೂರು ಸಮೀಪದ ಹೇಮಾವತಿ ಕ್ರಾಸ್ ಬಳಿ ನಡೆದಿದೆ. 

ಮೃತನನ್ನು 22 ವರ್ಷದ ದೀಪಕ್ ಎಂದು ಗುರುತಿಸಲಾಗಿದೆ. ಮೃತ ದೀಪಕ್ ಮೂಲತಃ ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಹೋಬಳಿಯ ತಣಿಗೇಬೈಲು ಸಮೀಪದ ಜೈಪುರ ನಿವಾಸಿ.

2018ರಲ್ಲಿ ಇಂಡೋ ಟಿಬೆಟ್ ಬಾರ್ಡರ್ ಪೊಲೀಸ್ ಫೋರ್ಸ್ ಸೇರಿದ್ದ ದೀಪಕ್ ಇತ್ತೀಚೆಗೆ ಎನ್‌ಎಸ್‌ಜಿ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಆಗಿ ನೇಮಕವಾಗಿದ್ದರು.


2020ರಲ್ಲಿ ಮದುವೆಯಾಗಿದ್ದ ದೀಪಕ್ ಮುಂಬೈನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಒಂದು ತಿಂಗಳ ಮೇಲೆ ರಜೆಗೆ ಊರಿಗೆ ಬಂದಿದ್ದ ದೀಪಕ್ ಇತ್ತೀಚೆಗೆ ತಾವು ಖರೀದಿಸಿದ್ದ ಹೊಸ ಬೈಕ್‌ನಲ್ಲಿ ರಜೆ ಮುಗಿಸಿ ಕೆಲಸಕ್ಕೆ ತೆರಳಲು ಬೆಂಗಳೂರಿಗೆ ಹೋಗುತ್ತಿದ್ದಾಗ ಯಡಿಯೂರಿನ ಹೇಮಾವತಿ ಕ್ರಾಸ್ ಬಳಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಜೈಪುರ ಗ್ರಾಮದ ಕೃಷ್ಣಮೂರ್ತಿಯವರ ಮಗನಾದ ದೀಪಕ್ ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದು, ಓರ್ವ ಸಹೋದರಿ ಇದ್ದಾಳೆ.

ದೀಪಕ್ ಸಾವಿನಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ದೀಪಕ್ ಸಾವಿಗೆ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics