Thursday, April 22, 2021

ಕೀಚಕ  ಪ್ರವೃತ್ತಿಯ ಚೈಲ್ಡ್ ಕೇರ್ ಟೇಕರ್ ಕುಂಪಲ ಯತೀಂಖಾನಾ (52) ಉಸ್ತಾದ್ ಆಯೂಬ್ ಬಂಧನ ..! 

 ಮಂಗಳೂರು: ಕುಂಪಲದಲ್ಲಿನ ಯತೀಂಖಾನಾ (ಅನಾಥಾಶ್ರಮ)ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ  ಆರೋಪಿ 52 ವರ್ಷದ ಉಸ್ತಾದ್ ಆಯುಬ್ ನನ್ನು  ಅಪ್ರಾಪ್ತ ಸಣ್ಣ ಮಕ್ಕಳಿಗೆ ಲೈಂಗಿಕ ಹಾಗೂ ದೈಹಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿಬಂಧಿಸಲಾಗಿದೆ.ಪೊಲೀಸ್ ಇಲಾಖೆ, ಕೆ.ಎಸ್. ಹೆಗ್ಡೆ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಕಲ್ಯಾಣ ಅಧಿಕಾರಿಗಳು ಮಂಗಳೂರು ನಗರ ಪೊಲೀಸ್ ಆಯುಕ್ತ ವ್ಯಾಪ್ತಿಯ ಮಕ್ಕಳ ಆರೈಕೆ ಕೇಂದ್ರ, ಅನಾಥಾಶ್ರಮಗಳ 480 ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ ನಡೆಸಲಾಗಿತ್ತು.ಪೊಲೀಸ್ ಇಲಾಖೆ, ಕೆ.ಎಸ್. ಹೆಗ್ಡೆ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಕಲ್ಯಾಣ ಅಧಿಕಾರಿಗಳು ಮಂಗಳೂರು ನಗರ ಪೊಲೀಸ್ ಆಯುಕ್ತ ವ್ಯಾಪ್ತಿಯ ಮಕ್ಕಳ ಆರೈಕೆ ಕೇಂದ್ರ, ಅನಾಥಾಶ್ರಮಗಳ 480 ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮವು ಗುಡ್‌ ಟಚ್‌ ಆಂಡ್‌ ಬ್ಯಾಡ್‌ ಟಚ್‌ ಬಗ್ಗೆ ಅರಿವು ಮೂಡಿಸಲು, ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಲು, ಮಗುವನ್ನು ಯಾವುದಾದರೂ ರೀತಿಯಲ್ಲಿ ದುರುಪಯೋಗಕ್ಕೆ ಒಳಪಡಿಸಲಾಗಿದೆಯೇ ಎಂದು ತಿಳಿಯಲು ಹಾಗೂ ಮಗುವಿನ ಜೊತೆ ಸಮಾಲೋಚನೆ ನಡೆಸುವ ಸಲುವಾಗಿ

”ಮಾರ್ಚ್ 28 ರಂದು ಮಕ್ಕಳ ಆರೈಕೆ ಮಾಡುವವರಿಗೆ ತಿಳಿಸದೆ ನಡೆಸಿದ ಕಾರ್ಯಕ್ರಮವು ಸಂಪೂರ್ಣವಾಗಿ ಗೌಪ್ಯವಾಗಿತ್ತು. ಇದು ಕೊರೊನಾ ಜಾಗೃತಿ ಕಾರ್ಯಕ್ರಮವಾಗಿದೆ ಎಂದು ಅವರಿಗೆ ತಿಳಿಸಲಾಗಿತ್ತು.ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳು ಏನನ್ನೂ ಹಂಚಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ ಎಂಬ ಕಾರಣಕ್ಕೆ ಟಿಎಂಎ ಪೈ ಹಾಲ್‌ನಲ್ಲಿ ಕಾರ್ಯಕ್ರಮ ನಡೆಸಲಾಯಿತು ಎಂದು ಪೊಲೀಸ್ ಆಯುಕ್ತ ಶಶಿಕುಮಾರ್‌ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ನಡೆಸಲಾದ ಸಮಾಲೋಚನೆಯಲ್ಲಿ ಕುಂಪಲದ ನೂರಾನಿ ಯತೀಂ ಖಾನಾ ದಾರುಲ್ ಮಸಕೀನ್ ನ 14 ವರ್ಷದ ಬಾಲಕನ ಮೇಲೆ ದೈಹಿಕ ಹಾಗೂ ಲೈಂಗಿಕ ಕಿರುಕುಳ ನೀಡಲಾಗಿದೆ ಎನ್ನುವ ಸತ್ಯ ಬಹಿರಂಗಗೊಂಡಿದೆ.  2ಸುತ್ತಿನ ಸಮಾಲೋಚನೆಯ ಬಳಿಕ ವಿಚಾರ ಬೆಳಕಿಗೆ ಬಂದಿದೆ.

ಆರು ಸಂಸ್ಥೆಗಳಲ್ಲಿ ಇಂತಹ 20 ನಿದರ್ಶನಗಳು ಬೆಳಕಿಗೆ ಬಂದಿವೆ ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯಕ್ತ ಎನ್ ಶಶಿಕುಮಾರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...