Wednesday, October 5, 2022

ಲಿವ್‌-ಇನ್‌ ಸಂಬಂಧದಲ್ಲಿ ಜನಿಸಿದ ಮಕ್ಕಳಿಗೆ ತಂದೆಯ ಆಸ್ತಿ ಹಕ್ಕಿದೆ-ಸುಪ್ರೀಂ ಕೋರ್ಟ್

ಹೊಸದಿಲ್ಲಿ: ವಿವಾಹ ಮಾಡಿಕೊಳ್ಳದೆಯೇ ದೀರ್ಘಾವಧಿಯಿಂದ ಸಹ ಸಾಂಗತ್ಯದಲ್ಲಿಯೇ ಇದ್ದ ಜೋಡಿಗೆ ಜನಿಸಿದ ಮಕ್ಕಳಿಗೂ ಕೂಡಾ ತಂದೆಯ ಕುಟುಂಬಕ್ಕೆ ಸಂಬಂಧಿತ ಆಸ್ತಿಯಲ್ಲಿ ಪಾಲು ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.


ದೀರ್ಘಾವಧಿ ಲಿವ್-ಇನ್ ಸಂಬಂಧ ಎನ್ನುವುದು ವಿವಾಹದ ಬಳಿಕ ದಂಪತಿ ನಡೆಸುವ ಸಹಬಾಳ್ವೆಯಂತೆಯೇ ಸರಿ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

1940ರಲ್ಲಿ ಕೇರಳದ ದಾಮೋದರನ್ ಎಂಬುವವರು ಚಿರುತಾಕುಟ್ಟಿ ಎಂಬಾಕೆಯನ್ನು ವಿವಾಹವಾದರು ಎನ್ನಲಾಗಿದೆಯೇ ಹೊರತು ಅದಕ್ಕೆ ಯಾವುದೇ ಸೂಕ್ತ ದಾಖಲೆಗಳು ಹಾಗೂ ಸಾಕ್ಷ್ಯಗಳಿಲ್ಲ.

ಆದರೆ 1942 ಅವರಿಗೆ ಕೃಷ್ಣನ್ ಎಂಬ ಮಗ ಜನಿಸಿದ್ದ. ಆತನು ಕೂಡಾ ಆಸ್ತಿಗೆ ವಾರಸುದಾರ ಎಂಬ ವಾದವುಳ್ಳ ಪ್ರಕರಣ ಸಂಬಂಧ ಕೇರಳ ಹೈಕೋರ್ಟ್,

ಲಿವ್ ಇನ್‌ ಸಂಬಂಧದಿಂದ ಜನಿಸಿದ ಮಕ್ಕಳಿಗೆ ಆಸ್ತಿ ಹಕ್ಕು ನೀಡಲಾಗುವುದಿಲ್ಲ ಎಂದಿತ್ತು. ಈ ಆದೇಶವನ್ನು ಸುಪ್ರೀಂಕೋರ್ಟ್ ಪ್ರತಿವಾದಿಗಳು ಪ್ರಶ್ನಿಸಿದ್ದರು.

LEAVE A REPLY

Please enter your comment!
Please enter your name here

Hot Topics

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...