Sunday, May 16, 2021

ಆಟವಾಡುತ್ತಿದ್ದ ಮಕ್ಕಳಿಗೆ ಸಿಡಿಲು ಬಡಿತ: ಇಬ್ಬರು ಬಾಲಕರ ಸಾವು..

ಹಳೆಯಂಗಡಿ: ಆಟವಾಡುತ್ತಿದ್ದಾಗ ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಮಕ್ಕಳಲ್ಲಿ ಓರ್ವ ಬಾಲಕ ಸಾವನ್ನಪ್ಪಿದ ಘಟನೆ ಮಂಗಳೂರು ಹಳೆಯಂಗಡಿ ಬಳಿ ಇಂದು ಬೆಳಗ್ಗೆ ನಡೆದಿದೆ.ಮನ್ಸೂರ್ ಎಂಬುವರ 5 ವರ್ಷದ ಮಗ ನಿಹಾನ್ ಹಾಗು ಗಂಗಾವತಿ ಮೂಲದ ದುರ್ಗಪ್ಪ ಎಂಬುವವರ 6 ವರ್ಷದ ಮಗ ಮಾರುತಿ ಸಿಡಿಲು ಬಡಿದು ಮೂರ್ಚೆ ಹೋಗಿ ಗಂಭೀರ ಸ್ಥಿತಿಯಲಿದ್ದರು.ಈ ಇಬ್ಬರು ಮಕ್ಕಳು ಕೂಡ ಮಂಗಳವಾರ ಸಂಜೆ ಇಂದಿರಾನಗರದ ಬೊಳ್ಳೂರು ಮಸೀದಿ ಹಿಂಭಾಗದಲ್ಲಿ ಇರುವ ತಮ್ಮ ಮನೆಯ ಮುಂದೆ ಆಡವಾಡುತ್ತಿದ್ದಾಗ ಸಿಡಿಲು ಬಡಿದಿದೆ.

ತಕ್ಷಣ ಸ್ಥಳೀಯರ ಸಹಾಯದಿಂದ ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳನ್ನು ಮುಕ್ಕ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.
ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಿಹಾನ್ ನನ್ನು ಕಂಕನಾಡಿ ಫಾದರ್ ಮುಲ್ಲರ್ ಅಸ್ಪತ್ರೆಗೆ ಹಾಗು ಮಾರುತಿ ಎಂಬ ಬಾಲಕನನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಗುತ್ತಿದೆ.

ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಿಹಾನ್ ನನ್ನು ಕಂಕನಾಡಿ ಫಾದರ್ ಮುಲ್ಲರ್ ಅಸ್ಪತ್ರೆಗೆ, ತರಲಾಯಿತು. ಆದ್ರೆ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಬೆಡ್ ಕೊರತೆಯಿದ್ದ ಕಾರಣ, ಕಂಕನಾಡಿ ಆಸ್ಪತ್ರೆಗೆ ತೆರಳಿದರು.

ಅಲ್ಲಿಯೂ ಬಾಲಕನನ್ನು ದಾಖಲು ಮಾಡಿಕೊಳ್ಳುವುದಕ್ಕೆ ಸಮಸ್ಯೆ ಎದುರಾಗಿದೆ.ಹೀಗಾಗಿ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಬಾಲಕನನ್ನು ದಾಖಲು ಮಾಡಲಾಗಿದೆ.ಬಾಲಕ ಮಾರುತಿ ಇದೀಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ .ಆದ್ರೆ ಕಂಕನಾಡಿ ಫಾದರ್ ಮುಲ್ಲರ್ ಅಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ  ನಿಹಾನ್ ಎಂಬ ಬಾಲಕ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

updates

ಸಿಡಿಲಾಘಾತಕ್ಕೆ ಜೀವನ್ಮರಣ ಹೋರಾಡುತ್ತಿದ್ದ ಪುಟಾಣಿ ಮಾರುತಿಯೂ ಬಲಿ

ಮಂಗಳೂರು ಹಳೆಯಂಗಡಿ ಬಳಿ ಆಟವಾಡುತ್ತಿದ್ದಾಗ ಸಿಡಿಲು ಬಡಿದು ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಮಕ್ಕಳಲ್ಲಿ ನಿಹಾನ್ ಬುಧವಾರ ಮೃತಪಟ್ಟಿದ್ದರೆ, ಗಂಬೀರ ಸ್ಥಿತಿಯಲ್ಲಿದ್ದ ಇನ್ನೋರ್ವ ಬಾಲಕ ಮಾರುತಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.

ಬುಧವಾರ ಮನ್ಸೂರ್ ಎಂಬವರ 5 ವರ್ಷದ ಮಗ ನಿಹಾನ್ ಹಾಗೂ ಗಂಗಾವತಿ ಮೂಲದ ದುರ್ಗಪ್ಪ ಎಂಬುವವರ 6 ವರ್ಷದ ಮಗ ಮಾರುತಿ ಸಿಡಿಲು ಬಡಿದು ಮೂರ್ಚೆ ಹೋಗಿ ಗಂಭೀರ ಸ್ಥಿತಿಯಲಿದ್ದರು.

ಈ ಇಬ್ಬರು ಮಕ್ಕಳು ಕೂಡ ಮಂಗಳವಾರ ಸಂಜೆ ಇಂದಿರಾನಗರದ ಬೊಳ್ಳೂರು  ಮಸೀದಿ ಹಿಂಭಾಗದಲ್ಲಿ ಇರುವ ತಮ್ಮ ಮನೆಯ ಮುಂದೆ ಆಡವಾಡುತ್ತಿದ್ದಾಗ ಸಿಡಿಲು ಬಡಿದಿದೆ.

ತಕ್ಷಣ ಸ್ಥಳೀಯರ ಸಹಾಯದಿಂದ ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳನ್ನು ಮುಕ್ಕ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.

ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿದ್ದ  ನಿಹಾನ್ ಎಂಬ ಬಾಲಕ ನಿನ್ನೆ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದ.

ಈ ನಡುವೆ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಮಾರುತಿ ಕೂಡ ಮೃತ ಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...