ಬೀಜಿಂಗ್: ಕೋವಿಡ್-19 ಮಹಾಮಾರಿಯಿಂದ ವಿಶ್ವವು ಚೇತರಿಸಿಕೊಂಡ ಐದು ವರ್ಷಗಳ ಬಳಿಕ, ಚೀನಾದಲ್ಲಿ ಮತ್ತೊಂದು ಮಹಾಮಾರಿ ಸೋಂಕು ಹಬ್ಬುತ್ತಿದೆ ಎಂಬ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
“ಹ್ಯೂಮನ್ ಮೆಟಾಪ್‌ನಿಯುಮೊ ವೈರಸ್ (HMPV)” ಚೀನಾದ ವಿವಿಧ ಪ್ರಾಂತ್ಯಗಳಲ್ಲಿ ಕಾಣಿಸಿಕೊಂಡಿದ್ದು, ಜನರ ಶ್ವಾಸಕೋಶದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎನ್ನಲಾಗಿದೆ. ಚೀನಾದ ಜನ ದಂಡು ದಂಡಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ದೃಶ್ಯದ ವೀಡಿಯೋಗಳು ಎಲ್ಲೆಡೆ ವೈರಲ್ ಆಗಿವೆ. ಈ ಸೋಂಕಿನ ಹರಡುವಿಕೆ ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳ ಜಾರಿಗೆ ಸರ್ಕಾರ ಮುಂದಾಗಿದೆ ಎಂಬ ಮಾತುಗಳು ಕೇಳಿಬಂದಿವೆ.
ಕೆಲವು ಬಳಕೆದಾರರು ಇನ್ಫ್ಲುಯೆನ್ಸ A, HMPV, ಮೈಕೋಪ್ಲಾಸ್ಮಾ ನ್ಯುಮೋನಿಯಾ, ಮತ್ತು ಕೋವಿಡ್-19 ಸೇರಿದಂತೆ ಅನೇಕ ವೈರಸ್‌ಗಳು ವ್ಯಾಪಿಸಿವೆ ಎಂದು ಪೋಸ್ಟ್‌ಗಳನ್ನು ಹರಿಬಿಟ್ಟಿದ್ದಾರೆ. ಕೊರೊನಾ ಸೋಂಕು ಹರಡುವಿಕೆ ತಡೆಗೆ ಅನುಸರಿಸಲಾಗಿದ್ದ ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ ಹಾಗೂ ಕೈಗಳನ್ನು ಸೋಪಿನಿಂದ ತೊಳೆದುಕೊಳ್ಳುವ ಪ್ರಕ್ರಿಯೆಗಳನ್ನು ತಪ್ಪದೇ ಪಾಲಿಸುವಂತೆ ಕ್ಸಿ ಜಿನ್‌ಪಿಂಗ್ ನೇತೃತ್ವದ ಸರ್ಕಾರವು ತನ್ನ ಪ್ರಜೆಗಳಿಗೆ ನಿರ್ದೇಶಿಸಿದೆ.
ಎಚ್‌ಎಂಪಿವಿ ವೈರಾಣು ಸೋಂಕು ಪ್ರಯೋಗಾಲಯದ ಪರೀಕ್ಷೆಯಲ್ಲಿ ಪತ್ತೆಯಾಗಲು 3-5 ದಿನಗಳು ಬೇಕು. ಸೀನುವುದು ಹಾಗೂ ಕೆಮ್ಮುವ ಮೂಲಕ ಹೊರಬೀಳುವ ದ್ರವದ ಮೂಲಕ ಸೋಂಕು ತೀವ್ರವಾಗಿ ಹರಡುತ್ತದೆ. ಚಳಿಗಾಲ ಹಾಗೂ ಬೇಸಿಗೆಯಲ್ಲಿಈ ಸೋಂಕು ಪ್ರಬಲವಾಗಲಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಧಿಪಟ್ಟಿದ್ದಾರೆ.
ಕೆಮ್ಮು, ಜ್ವರ, ಶ್ವಾಸಕೋಶದಲ್ಲಿ ಸಮಸ್ಯೆ, ಸೀನುವಿಕೆ ಲಕ್ಷಣಗಳು ಹೆಚ್ಚಿದ್ದರೆ ಎಚ್‌ಎಂಪಿವಿ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಚೀನಿ ಸರ್ಕಾರವು ಜನರಿಗೆ ಸೂಚನೆ ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಐದು ವರ್ಷಗಳ ಹಿಂದೆ ಕಾಣಿಸಿಕೊಂಡ ಕೋವಿಡ್-19 ಮಹಾಮಾರಿ ಇಡೀ ವಿಶ್ವವನ್ನು ತಲ್ಲಣಗೊಳಿಸಿತ್ತು. ಈ ಮಹಾಮಾರಿಯ ಆರಂಭ ಚೀನಾದಿಂದಲೇ ಆಗಿದ್ದು, ನಂತರ ಇಡೀ ವಿಶ್ವಕ್ಕೆ ಹಬ್ಬಿತ್ತು. ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಇಡೀ ವಿಶ್ವ ಒಗ್ಗಟ್ಟನ್ನು ಪ್ರದರ್ಶಿಸಿತ್ತು. ಅಲ್ಲದೇ ಲಾಕ್‌ಡೌನ್‌ನಂತಹ ಕ್ರಮಗಳ ಮೂಲಕ ಈ ಮಹಾಮಾರಿ ತಡೆಗೆ ಕ್ರಮ ಕೈಗೊಳ್ಳಾಗಿತ್ತು.
ಟೆಕ್ಸಾಸ್: ಡಲ್ಲಾಸ್ ಶಾಪಿಂಗ್ ಮಾಲ್ನಲ್ಲಿ ಸಂಭವಿಸಿದ ಬೆಂಕಿಯಲ್ಲಿ 500 ಕ್ಕೂ ಹೆಚ್ಚು ಪ್ರಾಣಿಗಳು, ಹೆಚ್ಚಾಗಿ ಸಣ್ಣ ಪಕ್ಷಿಗಳು ಸಾವನ್ನಪ್ಪಿವೆ.
ವರದಿಗಳ ಪ್ರಕಾರ, ಬೆಂಕಿಯಿಂದ ಯಾವುದೇ ಮನುಷ್ಯನಿಗೆ ಗಾಯಗಳಾಗಿಲ್ಲ ಮತ್ತು ಬೆಂಕಿಯ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ಲಾಜಾ ಲ್ಯಾಟಿನಾ ಶಾಪಿಂಗ್ ಸೆಂಟರ್ನ ಸಾಕುಪ್ರಾಣಿಗಳ ಅಂಗಡಿಯಲ್ಲಿ 579 ಪ್ರಾಣಿಗಳಿದ್ದವು. ಹೆಚ್ಚಾಗಿ ಸಣ್ಣ ಪಕ್ಷಿಗಳು ಹೊಗೆ ಉಸಿರಾಟದಿಂದಾಗಿ ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪುವ ಹೊತ್ತಿಗೆ ಕಟ್ಟಡವು ಬೆಂಕಿಗೆ ಆಹುತಿಯಾಗಿದ್ದು, ದಟ್ಟವಾದ ಹೊಗೆ ಗೋಚರಿಸುತ್ತಿದೆ ಎಂದು ಡಲ್ಲಾಸ್ ಅಗ್ನಿಶಾಮಕ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.
ಡಲ್ಲಾಸ್ ಅಗ್ನಿಶಾಮಕ ದಳದ ವಕ್ತಾರ ಜೇಸನ್ ಇವಾನ್ಸ್, “ಸಾಕುಪ್ರಾಣಿಗಳ ಅಂಗಡಿಗೆ ಬೆಂಕಿ ತಲುಪದಿದ್ದರೂ, ಹೆಚ್ಚಿನ ಪ್ರಮಾಣದ ಹೊಗೆ ಪ್ರವೇಶಿಸಿತು. ಡಿಎಫ್ಆರ್ ಸಿಬ್ಬಂದಿ ಶೋಧ ಮತ್ತು ರಕ್ಷಣೆಗೆ ಪ್ರಯತ್ನಿಸಿದರೆ, ದುರದೃಷ್ಟವಶಾತ್ ಅಂಗಡಿಯಲ್ಲಿದ್ದ ಎಲ್ಲಾ ಪ್ರಾಣಿಗಳು ಹೊಗೆ ಉಸಿರಾಟದಿಂದಾಗಿ ನಾಶವಾದವು” ಎಂದು ಎನ್ಬಿಸಿ ನ್ಯೂಸ್ ವರದಿ ಮಾಡಿದೆ.
ಬೆಂಕಿ ಪ್ರಾರಂಭವಾದಾಗ ಪ್ಲಾಜಾ ಲ್ಯಾಟಿನಾ ಶಾಪಿಂಗ್ ಸೆಂಟರ್ ಕಟ್ಟಡದಲ್ಲಿ ಮೂವರು ಇದ್ದರು. ಆದರೆ ಅಗ್ನಿಶಾಮಕ ದಳ ಎಚ್ಚರಿಕೆ ನೀಡಿದ ನಂತರ ಅವರೆಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಇವಾನ್ಸ್ ಹೇಳಿದ್ದಾರೆ.
ಭಾರತೀಯ ಕೋಸ್ಟ್ ಗಾರ್ಡ್‌ಗೆ ಸೇರಿದ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ALH) ಧ್ರುವ್ ಭಾನುವಾರ ಅಪಘಾತಕ್ಕೀಡಾಗಿದೆ. ಗುಜರಾತ್‌ನ ಪೋರಬಂದರ್‌ನಲ್ಲಿ ತರಬೇತಿ ಸಮಯದಲ್ಲಿ ಈ ಹೆಲಿಕಾಪ್ಟರ್ ಪತನಗೊಂಡಿದ್ದು, ಹಲಿಕಾಪ್ಟರ್‌ನಲ್ಲಿ ತರಬೇತಿ ಪಡೆಯುತ್ತಿದ್ದ ಮೂವರು ಯೋಧರ ಸಹಿತ ಐವರು ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಹೆಲಿಕಾಪ್ಟರ್ ಪತನದ ಬಗ್ಗೆ ANI ವರದಿ ಮಾಡಿದ್ದು, ಪೋರಬಂದರ್‌ನ ಕೋಸ್ಟ್ ಗಾರ್ಡ್ ಏರ್ ಎನ್‌ಕ್ಲೇವ್‌ನಲ್ಲಿ ಈ ಘಟನೆ ನಡೆದಿ ಎಂದು ಹೇಳಿದೆ. ಅಧಿಕಾರಿಗಳ ಪ್ರಕಾರ ಹೆಲಿಕಾಪ್ಟರ್‌ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನವಾಗಿದೆ.
ಭಾರತೀಯ ಕೋಸ್ಟ್ ಗಾರ್ಡ್ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಈ ಹಿಂದೆ ಕೂಡ ಸೆಪ್ಟೆಂಬರ್‌ನಲ್ಲಿ ಇದೇ ಮಾದರಿಯ ಹೆಲಿಕಾಫ್ಟರ್ ಒಂದು ಕೋರಬಂದರ್‌ನ ಸಮುದ್ರಕ್ಕೆ ಬಿದ್ದಿತ್ತು. ಇದು ಬೆಂಗಳೂರಿನ ಹೆಚ್‌ಎಲ್‌ಎ ಅಲ್ಲಿ ವಿನ್ಯಾಸಗೊಳಿಸಿದ ಹೆಲಿಕಾಫ್ಟರ್ ಆಗಿದೆ.
ಕನ್ನಡ ‘ಬಿಗ್ ಬಾಸ್’ ಸೀಸನ್ 11ರ ಆಟ ಇನ್ನೇನು ಕೆಲವೇ ದಿನಗಳಲ್ಲಿ ಮುಗಿಯಲಿದೆ. 97 ದಿನಗಳು ಪೂರೈಸಿರುವ ಬಿಗ್ ಬಾಸ್ ಆಟ ಇನ್ನೆಷ್ಟು ದಿನಗಳು ಇರಲಿದೆ ಎಂಬುದನ್ನು ಸುದೀಪ್ ದೊಡ್ಮನೆ ವೇದಿಕೆಯಲ್ಲಿ ತಿಳಿಸಿದ್ದಾರೆ. ಫಿನಾಲೆ ಬಗ್ಗೆ ಸುದೀಪ್ ಕ್ಲ್ಯಾರಿಟಿ ಕೊಟ್ಟಿದ್ದಾರೆ.
2024ರಲ್ಲಿ ಸೆ.29ರಂದು ‘ಬಿಗ್ ಬಾಸ್ ಕನ್ನಡ 11’ಕ್ಕೆ ಅದ್ಧೂರಿ ಚಾಲನೆ ನೀಡಲಾಗಿತ್ತು. 17 ಸ್ಪರ್ಧಿಗಳು ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟಿದ್ದರು. ಒಬ್ಬೊಬ್ಬರೇ ಎಲಿಮಿನೇಟ್ ಆಗಿ ಪ್ರಸ್ತುತ 9 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. 97 ದಿನಗಳು ಪೂರೈಸಿರುವ ಈ ಆಟಕ್ಕೆ ಅಂತ್ಯ ಯಾವಾಗ? ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ.
ಸುದೀಪ್ ವೇದಿಕೆಯಲ್ಲಿ ಹೇಳಿರುವಂತೆ ಇನ್ನೂ ಫಿನಾಲೆಗೆ ಇನ್ನು ಮೂರು ವಾರ ಇದೆ. ಅಂದರೆ ಇನ್ನು 21 ದಿನದಲ್ಲಿ ಫಿನಾಲೆ ನಡೆದು ಈ ಬಾರಿ ವಿನ್ನರ್ ಯಾರು ಎಂಬುದು ಖಾತ್ರಿ ಆಗಲಿದೆ. ಶೋ ಅಂತ್ಯವಾಗಲಿದೆ. ಈ ಸೀಸನ್ ಮೂಲಕ ಬಿಗ್ ಬಾಸ್ ಜೊತೆ ಸುದೀಪ್ ಅವರ ಪಯಣವೂ ಅಂತ್ಯವಾಗಲಿದೆ.
ಅಂದಹಾಗೆ, ಈ ವಾರ ಎಲಿಮಿನೇಷನ್ ಪ್ರಕ್ರಿಯೆ ನಡೆಯಲ್ಲ. ಫ್ಯಾಮಿಲಿ ರೌಂಡ್ ಆಗಿದ್ದ ಹಿನ್ನೆಲೆ ವೋಟಿಂಗ್ ಲೈನ್ ಕ್ಲೋಸ್ ಇತ್ತು. ಹಾಗಾಗಿ ಮುಂದಿನ ವಾರ ಡಬಲ್ ಎಲಿಮಿನೇಷನ್ ಅಥವಾ ಮಿಡ್ ವೀಕ್ ಎಲಿಮಿನೇಷನ್ ನಡೆಯುವ ಸಾಧ್ಯತೆ ಇದೆ. 9 ಸ್ಪರ್ಧಿಗಳಿರುವ ಮನೆಯಲ್ಲಿ ಫಿನಾಲೆಗೆ 5 ಮಂದಿಯಷ್ಟೇ ಆಯ್ಕೆಯಾಗಲಿದ್ದಾರೆ. ಉಗ್ರಂ ಮಂಜು, ಗೌತಮಿ, ಭವ್ಯಾ, ತ್ರಿವಿಕ್ರಮ್, ಚೈತ್ರಾ, ಮೋಕ್ಷಿತಾ, ರಜತ್, ಧನರಾಜ್, ಹನುಮಂತ ಸ್ಪರ್ಧಿಗಳಿದ್ದಾರೆ. ಇವರಲ್ಲಿ ಯಾವ 5 ಸ್ಪರ್ಧಿಗಳಿಗೆ ಫಿನಾಲೆ ಟಿಕೆಟ್ ಸಿಗಲಿದೆ. ಯಾರು ಬಿಗ್ ಬಾಸ್ ವಿನ್ನರ್ ಪಟ್ಟ ಗೆಲ್ತಾರೆ? ಎಂಬ ಕುತೂಹಲ ವೀಕ್ಷಕರಲ್ಲಿ ಮೂಡಿದೆ.