ಕೊರೊನಾ ಹರಡಲು ಚೀನಾ ಕಾರಣವೆಂದು ವಿಶ್ವ ಆರೋಗ್ಯ ಸಂಸ್ಥೆಯ ಮೊರೆ ಹೋದ 62 ದೇಶಗಳು..
ಕೊರೊನಾ ಹರಡಲು ಚೀನಾ ಕಾರಣವೆಂದು ವಿಶ್ವ ಆರೋಗ್ಯ ಸಂಸ್ಥೆಯ ಮೊರೆ ಹೋದ 62 ದೇಶಗಳು..
ಚೀನಾ: ಜಗತ್ತಿನಾದ್ಯಂತ ಕೊರೊನಾ ವೈರಸ್ ಹರಡಲು ಚೀನಾ ಕಾರಣ ಎಂದು 62 ದೇಶಗಳು ವಿಶ್ವ ಆರೋಗ್ಯ ಸಂಸ್ಥೆಯ ಮೊರೆ ಹೋಗಿವೆ.
ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಈ ವಿಚಾರ ಪ್ರಸ್ತಾಪಿಸಿರುವ 62 ದೇಶಗಳು, ಚೀನಾದ ವಿರುದ್ಧ ತನಿಖೆ ನಡೆಸುವಂತೆ ಆಗ್ರಹಿಸಿವೆ.
ಹೀಗಾಗಿ ಈ ವಿಚಾರ ಸಂಬಂಧ ಇಂದು ವಿಶ್ವ ಆರೋಗ್ಯ ಸಂಸ್ಥೆ ಸಭೆ ನಡೆಸುತ್ತಿದೆ. ಭಾರತವೂ ಚೀನಾ ವಿರುದ್ಧದ ಪ್ರಸ್ತಾಪಕ್ಕೆ ಧ್ವನಿಗೂಡಿಸಿದೆ.
ಆದ್ದರಿಂದ ಇಂದಿನ ಸಭೆ ಚೀನಾದ ಪಾಲಿಗೆ ನಿರ್ಣಾಯಕವಾಗಿದೆ. ಈ ಹಿಂದೆಯೇ ಚೀನಾ ಲ್ಯಾಬ್ ನಲ್ಲೇ ಕೊರೊನಾ ವೈರಸ್ ಸೃಷ್ಟಿಯಾಗಿದೆ ಎಂಬ ಅಮೆರಿಕಾದ ಆರೋಪವನ್ನು ವಿಶ್ವ ಆರೋಗ್ಯ ಸಂಸ್ಥೆ ತಳ್ಳಿ ಹಾಕಿತ್ತು.
ಕೊರೊನಾ ವೈರಸ್ ಹರಡುವಿಕೆ ಸಂಬಂಧ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ಮೇಲೆ ಮಾಡಲಾದ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಡಬ್ಲ್ಯೂ.ಎಚ್.ಒ ಹೇಳಿತ್ತು.
ಇನ್ನು ಕೊರೊನಾ ವೈರಸ್ ಚೀನಾದ ವುಹಾನ್ ಪ್ರಯೋಗಾಲಯದಲ್ಲೇ ಸೃಷ್ಟಿಯಾಗಿದೆ ಎನ್ನುವುದಕ್ಕೆ ಅಮೆರಿಕಾ ಸ್ಪಷ್ಟ ದಾಖಲೆ ನೀಡಿಲ್ಲ.
ಯಾವುದೇ ದಾಖಲೆ ನೀಡದೆ ಹೀಗೆ ಆರೋಪ ಮಾಡುತ್ತಿರುವ ಅಮೆರಿಕಾ ಮತ್ತದರ ಬೆಂಬಲಿತ ದೇಶಗಳ ನಡೆ ಸರಿ ಕಾಣುತ್ತಿಲ್ಲ.
ಇದು ಹುರುಳಿಲ್ಲದ ಆರೋಪ ಎಂದು ಡಬ್ಲ್ಯೂಎಚ್ಒ ನಿರ್ದೇಶಕ ಮೈಕಲ್ ರಿಯಾನ್ ಹೇಳಿದ್ದರು.
ಹೀಗಿದ್ದರೂ ಅಮೆರಿಕಾ ಮಾತ್ರ ಕೊರೊನಾ ವೈರಸ್ ಚೀನಾದ ಪ್ರಯೋಗಾಲಯದಲ್ಲಿಯೇ ಸೃಷ್ಟಿಯಾದ ವೈರಾಣು ಎಂದು ನಿರಂತರ ದಾಳಿ ಮಾಡುತ್ತಿದೆ.
ಚೀನಾದ ವಿರುದ್ಧದ ಈ ಪ್ರಸ್ತಾಪಕ್ಕೆ 62 ದೇಶಗಳು ಧ್ವನಿಗೂಡಿಸಿವೆ. ಇದೇ ವಿಚಾರವಾಗಿ ಡಬ್ಲ್ಯೂಎಚ್ಒ ಸಭೆ ನಡೆಸುತ್ತಿದೆ.
LATEST NEWS
ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿಅ*ಗ್ನಿ ಅವಘ*ಡ
ಉಡುಪಿ : ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು(ಸೆ.23) ಬೆಳಗ್ಗೆ ಅ*ಗ್ನಿ ಅವಘ*ಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅ*ಗ್ನಿಶಾಮಕ ದಳದ ತಂಡ ಬೆಂ*ಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾರಂಭದಲ್ಲಿ ಕಟ್ಟಡದ ಮೇಲ್ಮಹಡಿಯಲ್ಲಿ ಬೆಂ*ಕಿ ಹೊತ್ತಿಕೊಂಡಿದೆ. ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಕೆ
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.