Connect with us

    LATEST NEWS

    ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

    Published

    on

    ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    ಚಿತ್ರದುರ್ಗ: ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    ಇದರಿಂದಾಗಿ ಹಿರಿಯೂರು ನಗರದ ಚರ್ಚ್ ರಸ್ತೆಯಲ್ಲಿ ದನಗಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

    ರಾತ್ರಿ ವೇಳೆ ಮೂರ್ನಾಲ್ಕು ಮಂದಿ ಖದೀಮರು ಗೋವುಗಳನ್ನು ಟೆಂಪೋಗೆ ತುಂಬಿಸುತ್ತಿರುವ ಸಿಸಿಟಿವಿ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

    ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ವಿವಿಧ ಹಿಂದುಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

    ಆರೋಪಿಗಳನ್ನು ಕೂಡಲೇ ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಉಪ್ಪಿನಂಗಡಿ: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

    Published

    on

    ಉಪ್ಪಿನಂಗಡಿ: ಕಳೆದ ಸೋಮವಾರ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್ ಅನ್ನು ಎಗರಿಸಿದ್ದ ಪ್ರಕರಣವನ್ನು ಬೇಧಿಸಿರುವ ಉಪ್ಪಿನಂಗಡಿ ಪೊಲೀಸರು, ಬಂಟ್ವಾಳ ತಾಲೂಕು ಕೊಮಿನಡ್ಕ ನಿವಾಸಿ ನಸೀಮಾ (31) ಎಂಬಾಕೆಯನ್ನು ಬಂಧಿಸಿ ಆಕೆಯಿಂದ ಕಳವಿಗೀಡಾದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

    ಕಡಬ ತಾಲೂಕು ಬಂಟ್ರ ಗ್ರಾಮದ ನೆಕ್ಕಿತ್ತಡ್ಕ ಮನೆ ನಿವಾಸಿ ಮುಸ್ತಾಫ ಎಂಬವರ ಪತ್ನಿ ಅಬೀಬಾ ಎಂಬವರು ಜ.6ರಂದು ಪೆರ್ನೆಯಲ್ಲಿರುವ ಹಾಲ್‍ನಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಹೊರಡುವ ಸಮಯ ಭದ್ರತೆಯ ದೃಷ್ಠಿಯಿಂದ ಮನೆಯಲ್ಲಿದ್ದ ಅವರ ಸುಮಾರು 8 ಗ್ರಾಂ ತೂಕದ ಚಿನ್ನದ ನೆಕ್ಲೇಸ್ -1 ಮತ್ತು ಸುಮಾರು 106 ಗ್ರಾಂ ತೂಕದ ಚಿನ್ನಾಭರಣವನ್ನು ಒಂದು ಬಾಕ್ಸ್ ನೊಳಗಡೆ ಹಾಕಿ ವ್ಯಾನಿಟಿ ಬ್ಯಾಗಿನೊಳಗಡೆ ಇಟ್ಟುಕೊಂಡು, ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಾಸು ಮನೆಗೆ ಹೋಗಲು ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ಕಡಬಕ್ಕೆ ಹೋಗಲು ಮಧ್ಯಾಹ್ನ ಗಂಟೆ 1.45 ರ ಸುಮಾರಿಗೆ ಕಡಬಕ್ಕೆ ಹೋಗುವ ಕೆಎಸ್ಸಾರ್ಟಿಸಿ ಬಸ್ಸಿಗೆ ಹತ್ತಿ, ಬ್ಯಾಗ್‍ನಿಂದ ಐಡಿ ಕಾರ್ಡ್ ತೆಗೆಯಲೆಂದು ನೋಡಿದಾಗ ವ್ಯಾನಿಟಿ ಬ್ಯಾಗಿನ ಜಿಪ್ ತೆರೆದಿರುವುದು ಕಂಡು ಬಂದಿತ್ತು. ಈ ಸಂದರ್ಭ ಪರಿಶೀಲಿಸಿದಾಗ ಅದರೊಳಗಡೆ ಚಿನ್ನ ಇಟ್ಟಿದ್ದ ಬಾಕ್ಸ್ ಕಳವಿಗೀಡಾಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು.

    ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಸಂಕೀರ್ಣವಾಗಿದ್ದ ಪ್ರಕರಣದಲ್ಲಿ ಮಹತ್ವದ ಸುಳಿವನ್ನು ಸಂಪಾದಿಸಿಕೊಂಡು ಬೆನ್ನಟ್ಟಿದಾಗ ಬ್ಯಾಗ್ ಕಳ್ಳತನವನ್ನೇ ಕಸುಬಾಗಿಸಿಕೊಂಡ ನಸೀಮಾ ಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿ ಸಿದಾಗ ಕಳ್ಳತನದ ಕೃತ್ಯವನ್ನು ಒಪ್ಪಿಕೊಂಡು ತನ್ನ ಸ್ಕೂಟಿಯಲ್ಲಿ ಅಡಗಿಸಿಟ್ಟಿದ್ದ ಚಿನ್ನಾಭರಣವನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    Continue Reading

    LATEST NEWS

    ಗಣರಾಜ್ಯೋತ್ಸವಕ್ಕೆ ವಿವಿಧ ಕ್ಷೇತ್ರದ ಸಾಧಕರಿಗೆ ಆಹ್ವಾನ

    Published

    on

    ಮಂಗಳೂರು/ನವದೆಹಲಿ : ಹೊಸದಿಲ್ಲಿಯ ಕರ್ತವ್ಯ ಪಥದಲ್ಲಿ ಜ.26ರಂದು ನಡೆಯಲಿರುವ 76ನೇ ಗಣರಾಜ್ಯೋತ್ಸವ ಮೆರವಣಿಗೆಗೆ 10,000 ಅತಿಥಿಗಳನ್ನು ಆಹ್ವಾನಿಸಲಾಗುತ್ತದೆ.

    ಗ್ರಾ.ಪಂ. ಅಧ್ಯಕ್ಷರಾಗಿ ಸಾಧನೆ ಮಾಡಿದವರು, ಪ್ಯಾರಾಲಿಂಪಿಕ್ಸ್ ಕೂಟದಲ್ಲಿ ಸಾಧನೆ ಮಾಡಿದವರು, ಕೈಮಗ್ಗ ಕುಶಲಕರ್ಮಿಗಳು, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣ ಕಾರ್ಯಕರ್ತರು ಸೇರಿದ್ದಂತೆ ಒಟ್ಟು 31 ವಿಭಾಗಗಳ ಸಾಧಕರು ಸೇರಿದ್ದಾರೆ.

    ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಳಿ ದುರಂತ

    ಸರಕಾರಿ ಕಾರ್ಯಕ್ರಮಗಳಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    Continue Reading

    DAKSHINA KANNADA

    ಜ.11 ಹಾಗೂ 12 ರಂದು ಬೆಂಗಳೂರಿನಲ್ಲಿ ಅಬ್ಬರಿಸಲಿದೆ ‘ದಸ್ಕತ್’

    Published

    on

    ಮಂಗಳೂರು/ಬೆಂಗಳೂರು : ಅದ್ದೂರಿಯಾಗಿ ತೆರೆಕಂಡು ಜನ ಮನ ಗೆದ್ದು, ತುಳು ಚಿತ್ರರಂಗದಲ್ಲೇ ಇತಿಹಾಸ ನಿರ್ಮಿಸಿರುವ ‘ದಸ್ಕತ್’ ಸಿನಿಮಾ ಜ.11, 12 (ಶನಿವಾರ ಮತ್ತು ಭಾನುವಾರ) ಬೆಂಗಳೂರಿನ ತುಳುವರಿಗಾಗಿ ಪ್ರದರ್ಶನ ಆಯೋಜಿಸಲಾಗಿದೆ.

    ರಾಘವೇಂದ್ರ ಕುಡ್ಡ ನಿರ್ಮಾಣದಲ್ಲಿ ರೂಪುಗೊಂಡಿರುವ ಈ ಚಲನಚಿತ್ರವು ಶನಿವಾರ ಸಂಜೆ 7.30 ಹಾಗೂ ಜ.12ರ ಭಾನುವಾರದಂದು ಬೆ.11, ಮಧ್ಯಾಹ್ನ 2.30 ಹಾಗೂ ಸಂಜೆ 6 ಗಂಟೆಗೆ ಪ್ರದರ್ಶನಗೊಳ್ಳಲಿದೆ. ಚಿತ್ರರಂಗದ ಅನುಭವವಿಲ್ಲದವರೇ ಇರುವ ಈ ತುಳು ಭಾಷಾ ಚಲನಚಿತ್ರವು ಕರಾವಳಿಯ ಕಲೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಸುಂದರವಾಗಿ ನಿರೂಪಿಸಿದೆ. ಕರಾವಳಿಯ ಚಿತ್ರಪ್ರೇಮಿಗಳಿಗಾಗಿ ಮತ್ತು ತುಳು ಸಂಸ್ಕೃತಿಯನ್ನು ಅರಿಯುವ ಮನಸ್ಸುಳ್ಳ ಎಲ್ಲರಿಗಾಗಿ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಡಾ. ರಾಜ್‌ಕುಮಾರ್ ಭವನದ ಡಾ.ಅಂಬರೀಷ್ ಆಡಿಟೋರಿಯಂನಲ್ಲಿ ಚಲನಚಿತ್ರದ ಪ್ರದರ್ಶನ ಏರ್ಪಾಟಾಗಿದೆ.

    ಗ್ರಾಮೀಣ ಬದುಕಿನ ನೂರಾರು ಸಂಗತಿಗಳನ್ನು ಆಯ್ದುಕೊಂಡು ಅವುಗಳನ್ನು ಬಿಡಿಬಿಡಿಯಾಗಿ ಬಿಡಿಸಿಕೊಂಡು ಒಂದೊಂದು ಸಂಗತಿಯನ್ನೂ ರೂಪಕದ ಹಾಗೆ ಸೃಷ್ಟಿಸುತ್ತಾ ಹೋಗಿದ್ದಾರೆ. ತಂತ್ರಜ್ಞಾನ, ಕ್ಯಾಮರಾ, ನಟ ನಟಿಯರು, ನಿರ್ಮಾಪಕ, ವ್ಯವಹಾರ, ಕಲಾತ್ಮಕತೆ, ಆರ್ಥಿಕ ಲಾಭ ಎಲ್ಲವನ್ನೂ ಲೆಕ್ಕಾಚಾರ ಮಾಡುವ ಈ ದಿನಗಳಲ್ಲಿ, ಅದೂ ತುಳು ಭಾಷೆಯಲ್ಲಿ ಒಂದು ವಿಶಿಷ್ಟ ಬಗೆಯ ಪ್ರಯತ್ನ ನಡೆದಿದೆ. ಪ್ರಮುಖ ಕಥಾ ಪಾತ್ರವೊಂದು ನಾಯಕನೂ ಅಲ್ಲದ ಖಳನೂ ಅಲ್ಲದ ಮತ್ತು ಅದು ಎರಡೂ ಆಗಿರುವ ನಟನೊಬ್ಬನ ನಟನಾಶಕ್ತಿಯನ್ನು ಈ ಸಿನಿಮಾದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗಿದೆ ಎಂದು ವಿಮರ್ಶಿಸಿದ್ದಾರೆ.

    ನಾಯಕ ನಟನಾಗಿ ದೀಕ್ಷೀತ್ ಅಂಡಿಂಜೆ ಸಿನಿಮಾದಲ್ಲಿ ಉತ್ತಮ ಅಭಿನಯದ ಮೂಲಕ ಮಿಂಚಿದ್ದಾರೆ. ದಸ್ಕತ್ ಚಿತ್ರಕ್ಕೆ ಅನೀಶ್ ಪೂಜಾರಿ ವೇಣೂರು ನಿರ್ದೇಶನ ಮಾಡಿದ್ದು, ಸಂತೋಷ್ ಆಚಾರ್ಯ ಗುಂಪಲಾಜೆಯ ಛಾಯಾಗ್ರಹಣ ಗಮನ ಸೆಳೆದಿದೆ. ಸಮರ್ಥನ್ ಎಸ್.ರಾವ್ ಸಂಗೀತವಿದ್ದು, ಹೊಸಬರ ನಟನೆಯಲ್ಲಿ ಸುಂದರವಾಗಿ ಮೂಡಿಬಂದಿದೆ. ಈಗಾಗಲೇ ಎಂಟನೇ ಪರಿಚ್ಛೇದಕ್ಕೆ ಸೇರಬೇಕು ಎಂಬ ಆಗ್ರಹ ಕೇಳಿಬರುತ್ತಿರುವ ತುಳು ಭಾಷೆಯ ವೈವಿಧ್ಯವೂ ಈ ಚಿತ್ರದ ಮೂಲಕ ಬಿಂಬಿತವಾಗಿದೆ.

    Continue Reading

    LATEST NEWS

    Trending