ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದರಿಂದಾಗಿ ಹಿರಿಯೂರು ನಗರದ ಚರ್ಚ್ ರಸ್ತೆಯಲ್ಲಿ ದನಗಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ರಾತ್ರಿ ವೇಳೆ ಮೂರ್ನಾಲ್ಕು ಮಂದಿ ಖದೀಮರು ಗೋವುಗಳನ್ನು ಟೆಂಪೋಗೆ ತುಂಬಿಸುತ್ತಿರುವ ಸಿಸಿಟಿವಿ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ವಿವಿಧ ಹಿಂದುಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಆರೋಪಿಗಳನ್ನು ಕೂಡಲೇ ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.