ಚೆನ್ನೈ: ತಮಿಳಿನ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರಿಗೆ ಹೃದಯಾಘಾತ ಆಗಿದೆ ಎಂದು ಕೆಲವೆಡೆ ವರದಿ ಆಗಿದೆ. ಈ ಕುರಿತು ಆಸ್ಪತ್ರೆ ಕಡೆಯಿಂದ ಅಥವಾ ಕುಟುಂಬದವರಿಂದ ಖಚಿತ ಮಾಹಿತಿ ಹೊರಬೀಳಬೇಕಿದೆ.
ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಕ್ರಮ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಸಂಜೆ ಲಘು ಹೃದಯಾಘಾತವಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಆ್ಯಂಜಿಯೋಗ್ರಾಮ್ ನಡೆಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆ.11ರಂದು ವಿಕ್ರಮ್ ನಟನೆಯ ‘ಕೋಬ್ರಾ’ ಚಿತ್ರ ಬಿಡುಗಡೆಯಾಗಲಿದೆ. ಇಂದು ಸಂಜೆ ಚೆನ್ನೈನಲ್ಲಿ ‘ಪೊನ್ನಿಯನ್ ಸೆಲ್ವನ್’ ಚಿತ್ರದ ಟೀಸರ್ ಕಾರ್ಯಕ್ರಮವಿತ್ತು.