Wednesday, December 1, 2021

ಭಾರತಕ್ಕೆ ಹೋಗದಂತೆ ಯುಎಇ ನಾಗರಿಕರಿಗೆ ಎಚ್ಚರಿಕೆ

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಾಗರಿಕರು ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಮತ್ತು ಶ್ರೀಲಂಕಾಗೆ ಜುಲೈ 21ರವರೆಗೆ ಪ್ರಯಾಣ ಕೈಗೊಳ್ಳದಂತೆ ಅಲ್ಲಿನ ಸರಕಾರ ಸೂಚಿಸಿದೆ ಎಂದು ವರದಿಯಾಗಿದೆ.


ಎಮಿರೇಟ್ಸ್‌ನ ವಿದೇಶಾಂಗ ಸಚಿವಾಲಯ ಮತ್ತು ರಾಷ್ಟ್ರೀಯ ತುರ್ತು ವಿಕೋಪ ಮತ್ತು ಅನಾಹುತ ನಿರ್ವಹಣಾ ಪ್ರಾಧಿಕಾರದ ಮೂಲಗಳನ್ನು ಉಲ್ಲೇಖಿಸಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಪ್ರವಾಸ ಸೀಸನ್ ಆರಂಭದ ಹಿನ್ನೆಲೆಯಲ್ಲಿ ಕೋವಿಡ್-19 ಮುಂಜಾಗ್ರತೆ ಮತ್ತು ತಡೆಯಾತ್ಮಕ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ಮಾಡಿದೆ. ಕೋವಿಡ್ ಹಿನ್ನೆಲೆಯಲ್ಲಿ 14 ದೇಶಗಳಿಗೆ ಪ್ರವಾಸ ಕೈಗೊಳ್ಳದಂತೆ ಯುಎಇ ಕಳೆದ ತಿಂಗಳು ಮಾಡಿದ್ದ ಆದೇಶದ ಬಳಿಕ ಗುರುವಾರ ಈ ಆದೇಶ ಹೊರಬಿದ್ದಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...