Connect with us

LATEST NEWS

ಮತಾಂತರ ನಿಷೇಧ ಕಾಯ್ದೆ ಬಿಜೆಪಿ ಸರ್ಕಾರದ ಅಸಂವಿಧಾನಿಕ ಕ್ರಮ: ಪಿಎಫ್‌ಐ

Published

on

ಮಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ರಾಜ್ಯ ಬಿಜೆಪಿ ಸರಕಾರದ ಕ್ರಮವು ಅಸಾಂವಿಧಾನಿಕವಾಗಿದ್ದು, ಇದು ಅಲ್ಪಸಂಖ್ಯಾತರನ್ನು ಮತ್ತಷ್ಟು ಗುರಿಪಡಿಸುವ ದುರುದ್ದೇಶವನ್ನು ಹೊಂದಿದೆ ಎಂದು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ ರಾಜ್ಯಾಧ್ಯಕ್ಷ ನಾಸಿರ್‌ ಪಾಶ ಹೇಳಿದ್ದಾರೆ.

ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ‘ಧಾರ್ಮಿಕ ಸ್ವಾತಂತ್ರ್ಯವು ಭಾರತದ ಸಂವಿಧಾನವು ಖಾತರಿಪಡಿಸಿದ ಒಂದು ಮೂಲಭೂತ ಹಕ್ಕಾಗಿದೆ.

ಸಂವಿಧಾನದ ವಿಧಿ 25ರ ಪ್ರಕಾರ, ಪ್ರತಿಯೊಬ್ಬ ವ್ಯಕ್ತಿ ತನಗೆ ಇಷ್ಟವಾದ ಧರ್ಮವನ್ನು ಅಂಗೀಕರಿಸುವ, ಆಚರಿಸುವ, ಪ್ರಚಾರಪಡಿಸುವ ಸ್ವಾತಂತ್ರ್ಯವನ್ನು ಹೊಂದಿರುತ್ತಾನೆ.


ಆದರೆ ಅಲ್ಪಸಂಖ್ಯಾತರ ವಿರೋಧಿಯಾಗಿರುವ ಬಿಜೆಪಿ ಸರಕಾರವು ಈ ಹಕ್ಕನ್ನು ಬಲವಂತದ ಕಾನೂನಿನ ಮೂಲಕ ದಮನಿಸಲು ಪ್ರಯತ್ನಿಸುತ್ತಿದೆ. ಬಲವಂತದ ಮತಾಂತರಕ್ಕೆ ಯಾವುದೇ ಅವಕಾಶವಿಲ್ಲದಿದ್ದರೂ, ಇದೀಗ ಅದರ ನಿಯಂತ್ರಣಕ್ಕೆ ಪ್ರತ್ಯೇಕವಾಗಿ ಕಾನೂನು ರೂಪಿಸುತ್ತಿರುವುದರ ಹಿಂದೆ ಬಿಜೆಪಿ ಸರಕಾರವು ರಾಜಕೀಯ ಲೆಕ್ಕಾಚಾರವನ್ನು ಹೊಂದಿರುವುದು ಸ್ಪಷ್ಟವಾಗಿದೆ.

ಈಗಾಗಲೇ ಮಧ್ಯ ಪ್ರದೇಶ, ಗುಜರಾತ್‌, ಉತ್ತರ ಪ್ರದೇಶ, ಉತ್ತರಾಖಂಡ್, ಜಾರ್ಖಂಡ್‌ ಮೊದಲಾದ ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಈ ವಿವಾದಿತ ಮತಾಂತರ ವಿರೋಧಿ ಕಾನೂನು ಜಾರಿಯಲ್ಲಿದ್ದು, ಇದು ಪ್ರಮುಖವಾಗಿ ಮುಸ್ಲಿಮ್, ಕ್ರಿಶ್ಚಿಯನ್, ದಲಿತ ಮತ್ತು ಆದಿವಾಸಿ ಸಮುದಾಯಗಳನ್ನು ವ್ಯವಸ್ಥಿತವಾಗಿ ಗುರಿಪಡಿಸುತ್ತಿರುವುದು ವರದಿಯಾಗಿದೆ.

ಈಗಾಗಲೇ ರಾಜ್ಯದಲ್ಲಿ ಸಂಘಪರಿವಾರದ ಶಕ್ತಿಗಳು ಭಾವನಾತ್ಮಕ ವಿಚಾರಗಳ ಮೂಲಕ ರಾಜ್ಯದ ಅಲ್ಪಸಂಖ್ಯಾತರನ್ನು ನಿರಂತರವಾಗಿ ಬೇಟೆಯಾಡುತ್ತಿದ್ದು, ಈ ಕಾನೂನನ್ನು ಅವರು ಮತ್ತೊಂದು ಅಸ್ತ್ರವಾಗಿ ಬಳಸುವುದರಲ್ಲಿ ಯಾವುದೇ ಸಂಶಯವಿಲ್ಲ.

ಆದರೂ ಪ್ರಸಕ್ತ ಬಿಜೆಪಿ ಸರಕಾರವು ಭ್ರಷ್ಟಾಚಾರ, ಹಗರಣದಲ್ಲಿ ಮುಳುಗಿ ಹೋಗಿದ್ದು, ಜನರಿಂದ ಬಹಳಷ್ಟು ಟೀಕೆಗಳನ್ನು ಎದುರಿಸುತ್ತಿದೆ.

ಸಚಿವ ಸಂಪುಟದ ಈ ತುರ್ತು ನಿರ್ಧಾರವನ್ನು ಜನರ ಹಾದಿ ತಪ್ಪಿಸುವ ಪ್ರಯತ್ನದ ಭಾಗವಾಗಿಯೂ ನೋಡಬೇಕಾಗುತ್ತದೆ.
ದಮನಿತ ವರ್ಗಗಳನ್ನು ವಿಶೇಷವಾಗಿ ಅಲ್ಪಸಂಖ್ಯಾತರನ್ನು ಗುರಿಪಡಿಸುವ ಈ ಕಾನೂನನ್ನು ರಾಜ್ಯ ಸರಕಾರವು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು.

ರಾಜ್ಯಪಾಲರು ಕೂಡ ಇದಕ್ಕೆ ಅಂಕಿತ ಹಾಕದೇ ನಾಗರಿಕರ ಧಾರ್ಮಿಕ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಬೇಕು ಮತ್ತು ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳನ್ನು ಖಾತರಿಪಡಿಸಬೇಕು.

ಹಾಗೆಯೇ ಸುಗ್ರೀವಾಜ್ಞೆಗಳ ಮೂಲಕ ಜನ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿರುವ ಬಿಜೆಪಿ ಸರಕಾರದ ನಡೆಗಳನ್ನು ಪ್ರಜಾಸತ್ತಾತ್ಮಕ ವಿಧಾನದಲ್ಲಿ ಪ್ರತಿರೋಧಿಸಲು ನಾಗರಿಕ ಸಮುದಾಯವು ಮುಂದೆ ಬರಬೇಕೆಂದು ನಾಸಿರ್‌ ಪಾಶ ಕರೆ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

ಬೆಳ್ಳುಳ್ಳಿ ಬೆಲೆ ಗಗನಕ್ಕೇರುತ್ತಿದ್ದರೆ ಇತ್ತ 2 ಕ್ವಿಂಟಾಲ್ ಬೆಳ್ಳುಳ್ಳಿ ಕಳವು..!

Published

on

ದಾವಣಗೆರೆ: ಬೆಳ್ಳುಳ್ಳಿ ಬೆಲೆ ಏರುತ್ತಿರುವ ಕಾರಣ ಬೆಳ್ಳುಳ್ಳಿ ಬೆಳೆಯುವ ರೈತರು ಕೂಡಾ ಸಾಕಷ್ಟು ಖುಷಿಯಲ್ಲಿದ್ದಾರೆ. ಆದರೆ ಕಳ್ಳರ ಕಾಟದಿಂದಾಗಿ ರೈತರ ಖುಷಿಗೆ ತಣ್ಣೀರು ಬಿದ್ದಂತಾಗಿದ್ದು ನಿದ್ದೆ ಬಿಟ್ಟು ಬೆಳೆಯನ್ನು ಕಾಯುವ ಪರಿಸ್ಥಿತಿ ಎದುರಾಗಿದೆ.

ರಾತ್ರಿ ವೇಳೆ ಕಳ್ಳರು ಜಮೀನಿನಿಂದಲೇ ಬೆಳ್ಳುಳ್ಳಿ ಕದ್ದು ಸಾಗಿಸುತ್ತಿದ್ದು, ಇದು ರೈತರ ನಿದ್ದೆಗೆಡಿಸಿದೆ. ಎರಡು ದಿನಗಳ ಹಿಂದೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಎರೆಹೊಸಳ್ಳಿ ಗ್ರಾಮದಲ್ಲಿ ಬೆಳ್ಳುಳ್ಳಿ ಕಳ್ಳತನವಾದ ಬಗ್ಗೆ ದೂರು ದಾಖಲಾಗಿದೆ. ಚಂದ್ರಮ್ಮ ಎಂಬ ಮಹಿಳೆಯ ಜಮೀನಿನಲ್ಲಿ ಬೆಳೆದ ಬೆಳ್ಳುಳ್ಳಿಯನ್ನು ಕಳ್ಳರು ಕದ್ದೊಯ್ದಿದ್ದಾರೆ. ಗ್ರಾಮದಲ್ಲಿ ಯಲ್ಲಮ್ಮ ದೇವಿಯ ಜಾತ್ರೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಚಂದ್ರಮ್ಮ ಜಾತ್ರೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಈ ವೇಳೆ ಜಮೀನಿನಲ್ಲಿ ಒಣಗಲು ಹಾಕಿದ್ದ ಸುಮಾರು 80 ಸಾವಿರ ರೂಪಾಯಿ ಮೌಲ್ಯದ 2 ಕ್ವಿಂಟಾಲ್ ಬೆಳ್ಳುಳ್ಳಿಯನ್ನು ಕಳ್ಳರು ಕದ್ದುಕೊಂಡು ಹೋಗಿದ್ದಾರೆ. ಕಳೆದ ಎರಡು ತಿಂಗಲುಗಳಿಂದ ಬೆಳ್ಳುಳ್ಳಿ ಬೆಲೆ ಏರುತ್ತಾ ಸಾಗಿದ್ದು, ಹೋಲ್‌ಸೇಲ್ ದರ ಕ್ವಿಂಟಾಲ್‌ಗೆ 40 ಸಾವಿರ ರೂ. ತಲುಪಿದ್ರೆ ರಿಟೈಲ್‌ನಲ್ಲಿ ಕಿಲೋಗೆ 500 ರೂ. ಇದೆ. ಇದೀಗ ಬೆಳ್ಳುಳ್ಳಿ ಕಳ್ಳತನ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಪ್ರಕರಣದ ಬಳಿಕ ರೈತರು ಹೊಲದಲ್ಲಿ ಕಣ್ಣಿಗೆ ಎಣ್ಣೆ ಬಿಟ್ಟು ಬೆಳ್ಳುಳ್ಳಿ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Continue Reading

BANTWAL

ಬಾಲವಿಕಾಸದಲ್ಲಿ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Published

on

ವಿಟ್ಲ: ಪೆರಾಜೆ, ಮಾಣಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮಾಣಿ ಸ್ಥಳೀಯ ಸಂಸ್ಥೆ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇವರ ಸಹಭಾಗಿತ್ವದಲ್ಲಿ ಫೆ. 28 ರಂದು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾನಗರ ಪೆರಾಜೆ, ಮಾಣಿ ಇಲ್ಲಿ 2023-24 ನೇ ಸಾಲಿನ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರವು ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕ ಹಾಗೂ ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ  ಪ್ರಹ್ಲಾದ್ ಶೆಟ್ಟಿ ಜೆ  ಪರೀಕ್ಷಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಎಳವೆಯಲ್ಲಿಯೇ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣವಿದ್ದಾಗ ಮುಂದಿನ ದಿನಗಳಲ್ಲಿ ಸದೃಢ ದೇಶ ಕಟ್ಟಬಲ್ಲರು ಎಂದು ಹೇಳಿ ಪರೀಕ್ಷಾ ಶಿಬಿರಕ್ಕೆ ಶುಭ ಹಾರೈಸಿದರು.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರವೀಂದ್ರ ಡಿ ಸ್ವಾಗತಿಸಿ,ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಬ್ ವಿಭಾಗದ ಶಿಬಿರ ನಾಯಕಿ ಯಮುನಾ,ಬುಲ್ ಬುಲ್ ವಿಭಾಗದ ಶಿಬಿರ ನಾಯಕಿ ಯಶೋಧ ಕೆ (HWB) ರವರು ಉಪಸ್ಥಿತರಿದ್ದರು. ಪರೀಕ್ಷಾ ಶಿಬಿರದಲ್ಲಿ ಸಹಾಯಕರಾಗಿ ಕಬ್ ಮಾಸ್ಟರ್ ಮತ್ತು ಫ್ಲಾಕ್ ಲೀಡರ್ ಗಳಾದ ಕಾಂತಪ್ಪ, ಸುಮಾ, ಅಮಿತಾ ಎಸ್, ಪ್ರಮೀಳಾ, ಕುರ್ಶಿದ, ಯೋಗಿನಿ, ಚಿತ್ರ ಕೆ, ವೀಣಾ, ಶೀಲಾವತಿ, ಪ್ರಮೀಳಾ ಕ್ರಾಸ್ತಾ, ಸೌಮ್ಯ ಹಾಗೂ ಸ್ಕೌಟ್ ಮತ್ತು ಗೈಡ್ ಶಿಕ್ಷಕಿ ಸಪ್ನ, ಅನಿತಾ ಗೌರಿ, ಲೀಲಾರವರು ಸಹಕರಿಸಿದರು. ಕಬ್ ವಿಭಾಗದಲ್ಲಿ 77 ವಿದ್ಯಾರ್ಥಿಗಳು ಹಾಗೂ ಬುಲ್ ಬುಲ್ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಒಟ್ಟು 143 ವಿದ್ಯಾರ್ಥಿಗಳು ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿದ್ದರು. ಸ್ವಯಂ ಸೇವಕರಾಗಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಹಕರಿಸಿದರು. ಗೈಡ್ ಕ್ಯಾಪ್ಟನ್ ಸುಪ್ರಿಯಾ ಡಿ ಕಾರ್ಯಕ್ರಮ ನಿರೂಪಿಸಿದರು.

Continue Reading

LATEST NEWS

Udupi: ಕೆಟ್ಟು ನಿಂತಿದ್ದ ಲಾರಿಗೆ ಕಾರು ಢಿಕ್ಕಿ-ಕಾರು ಚಾಲಕ ದುರ್ಮರಣ..!

Published

on

ಉಡುಪಿ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಮೃತಪಟ್ಟ ಕಾರು ಚಾಲಕ ನಾಗೇಶ್ (70) ಎಂದು ಗುರುತಿಸಲಾಗಿದೆ. ಕಾಪುವಿನ ಮೆಸ್ಕಾಂ ಕಚೇರಿಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಅವರು, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಾಪು ಪಿ.ಎಸ್.ಐ. ಅಬ್ದುಲ್ ಖಾದರ್, ಕ್ರೈಂ ಪಿ.ಎಸ್.ಐ. ಪುರುಷೋತ್ತಮ್ ಹಾಗೂ ಸಿಬಂದಿ ಮತ್ತು ಹೆದ್ದಾರಿ ಗಸ್ತು ಪಡೆಯವರು ತೆರಳಿ ಅಪಘಾತದಲ್ಲಿ ಸಿಲುಕಿದ್ದ ಕಾರು ಮತ್ತು ಲಾರಿಯನ್ನು ತೆರವುಗೊಳಿಸಿದರು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending