ಮಂಗಳೂರು: ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್ಗೆ ಮತ್ತೊಂದು ಬಸ್ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಕುಂಪಲದ ಬೈಪಾಸ್ ಬಸ್ಸು ತಂಗುದಾಣದಲ್ಲಿ ಇಂದು ನಡೆದಿದೆ.
ಕುಂಪಲದಿಂದ ಮಂಗಳೂರು ಕಡೆಗೆ ಸಾಗುವ ಖಾಸಗಿ ಸಿಟಿ ಬಸ್ ಬೈಪಾಸ್ ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುತ್ತಿತ್ತು. ಈ ಸಂದರ್ಭ ಮತ್ತೊಂದು ಬಸ್ ಢಿಕ್ಕಿ ಹೊಡೆದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.