Wednesday, December 1, 2021

ವೈದ್ಯಾಧಿಕಾರಿಯ ‘ರಂಗಿನಾಟ’ಕ್ಕೆ ಸ್ಪಷ್ಟೀಕರಣ ನೀಡಿದ ಅಧೀಕ್ಷಕರು

ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪ್ರಕರಣಕ್ಕೆ ವೆನ್‌ಲಾಕ್‌ ಆಸ್ಪತ್ರೆ ಅಧೀಕ್ಷಕರು ಸ್ಪಷ್ಟೀಕರಣ ನೀಡಿದ್ದಾರೆ.


ಇಂದು ಟಿವಿ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಡಾ. ರತ್ನಾಕರ್, ಜಿಲ್ಲಾ ಕಾರ್ಯಕ್ರಮಾಧಿಕಾರಿ ಇವರ ಕುರಿತು ವರದಿಗಳು ಪ್ರಚಾರವಾಗುತ್ತಿದ್ದು, ಸದ್ರಿ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳು, ವೆನ್‌ಲಾಕ್ ಆಸ್ಪತ್ರೆಯ ಸಿಬ್ಬಂದಿಗಳೆಂದು ವರದಿಯಾಗುತ್ತಿದೆ.
ಸದ್ರಿ ಅಧಿಕಾರಿಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಡಿಯಲ್ಲಿ ಕಾರ್ಯನಿರ್ವಹಿಸುವ ಓರ್ವ ಜಿಲ್ಲಾ ಕಾರ್ಯಕ್ರಮಾಧಿಕಾರಿಯಾಗಿದ್ದು, ಹಾಗೂ ವರದಿಯಲ್ಲಿ ಹೇಳುತ್ತಿರುವ ಮಹಿಳಾ ಸಿಬ್ಬಂದಿಗಳು ಸದ್ರಿ ಸಿಬ್ಬಂದಿಗಳಾಗಿರುತ್ತಾರೆ. ಅಧಿಕಾರಿಯ ಕಛೇರಿಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ
ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳು ವನ್‌ಲಾಕ್ ಜಿಲ್ಲಾ ಆಸ್ಪತ್ರೆಯ ಅಧಿಕಾರಿ ಸಿಬ್ಬಂದಿಗಳಲ್ಲ. ಸದ್ರಿ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಧೀನದ ಸಿಬ್ಬಂದಿಗಳಾಗಿದ್ದು, ದೃಶ್ಯ ಮಾಧ್ಯಮಗಳಲ್ಲಿ ವನ್‌ಲಾಕ್ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳೆಂದು ತಪ್ಪು ಮಾಹಿತಿ ಪ್ರಚಾರವಾಗುತ್ತಿದ್ದು, ವರದಿಯನ್ನು ಸರಿಪಡಿಸುವಂತೆ ಮಾಧ್ಯಮಗಳಿಗೆ ಸೂಚಿಸುವಂತೆ ಕೋರಲಾಗಿದೆ. ಅಲ್ಲದೆ ಈ ಬಗ್ಗೆ ಸೃಷ್ಟಿಕರಣವನ್ನು ಕೂಡ ಮಾಧ್ಯಮಗಳು ನೀಡುವಂತೆ ಕೋರಲಾಗಿದೆ ಎಂದು ವೆನ್‌ಲಾಕ್‌ ಆಸ್ಪತ್ರೆ ಅಧೀಕ್ಷಕರು ಸ್ಷಷ್ಟೀಕರಣ ನೀಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...