LATEST NEWS
ಕಾರು ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ: ಓರ್ವನ ಜೀವಾಂತ್ಯ-ವಾಹನಗಳಿಗೆ ಬೆಂಕಿ
ಬೆಳಗಾವಿ: ಕಾರು ಪಾರ್ಕಿಂಗ್ ವಿಷಯವಾಗಿ ಶುರುವಾದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿದ್ದು, ಬಳಿಕ ನಡೆದ ಹಿಂಸಾಚಾರದಲ್ಲಿ ಕಾರು, ಟ್ರ್ಯಾಕ್ಟರ್, ಟೆಂಪೋ ಸೇರಿದಂತೆ ಹತ್ತಾರು ವಾಹನಗಳು ಮತ್ತು ಹುಲ್ಲಿನ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಹೊರವಲಯದ ಗೌಂಡವಾಡ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಸತೀಶ್ ಪಾಟೀಲ್ (37) ಕೊಲೆಗೀಡಾದ ವ್ಯಕ್ತಿ.
ಕಾರು ಪಾರ್ಕಿಂಗ್ ಮಾಡಿದ್ದನ್ನು ಪ್ರಶ್ನಿಸಿ ರಾತ್ರಿ 9ರ ಸುಮಾರಿಗೆ ಇವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಹಳೇ ವೈಷಮ್ಯ ಇದೆಯೆಂದು ತಿಳಿದುಬಂದಿದೆ.
ಈ ಘಟನೆಯಿಂದ ಗೌಂಡವಾಡ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಕೆರಳಿದ ಕಿಡಿಗೇಡಿಗಳು ಕಂಡಕಂಡಲ್ಲಿ ವಾಹನಗಳಿಗೆ, ಹುಲ್ಲಿನ ಬಣವೆಗಳಿಗೆ ಬೆಂಕಿ ಹಚ್ಚಿದ್ದಾರೆ.
ನಾಲ್ಕು ಕಾರು, ಒಂದು ಟ್ರ್ಯಾಕ್ಟರ್ ಹಾಗೂ ಎರಡು ಟೆಂಪೋ ಸುಟ್ಟು ಕರಕಲಾಗಿವೆ. ಅಲ್ಲದೆ, ಉದ್ರಿಕ್ತರು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಮನೆಗಳಿಗೂ ಸಹ ಬೆಂಕಿ ಹಚ್ಚುವ ಪ್ರಯತ್ನ ನಡೆಸಿದ್ದಾರೆ. ಈ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಳಗಿನ ಜಾವದವರೆಗೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಈ ಸಂದರ್ಭದಲ್ಲಿ ಉಂಟಾದ ಜಗಳದಲ್ಲಿ ಯುವಕನ ಕೊಲೆಯಾಗಿ ಹಿಂಸಾಚಾರ ನಡೆದು ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿ ಕೆಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
LATEST NEWS
ಕೋಟಿಯ ಒಡೆಯನಾದ 8ನೇ ತರಗತಿ ಪೋರ..!!
ನವದೆಹಲಿ: ಕೌನ್ ಬನೇಗಾ ಕರೋಡ್ ಪತಿ ಎಂಬ ಹಿಂದಿ ಶೋ ನಲ್ಲಿ ಕೋಟಿ ಗೆದ್ದ 14ವರ್ಷದ ಪೋರ ಸಣ್ಣ ವಯಸ್ಸಿನಲ್ಲೇ ದಾಖಲೆ ಬರೆದಿದ್ದಾನೆ.
ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್ ನಡೆಸಿಕೊಡುವಂತಹ ಹಿಂದಿಯ ಕೌನ್ ಬನೇಗಾ ಕರೋಡ್ ಪತಿ ಎಂಬ ಶೋ ನಲ್ಲಿ ಹರಿಯಾಣದ ಮಹೇಂದ್ರಗಢ್ ಮೂಲದ 8ನೇ ತರಗತಿ ವಿದ್ಯಾರ್ಥಿ ಮಯಾಂಕ್ ಭಾಗವಹಿಸಿ 15 ಪ್ರಶ್ನೆಗಳಿಗೆ ಉತ್ತರಿಸಿ ಒಂದು ಕೋಟಿ ಗೆದ್ದು ದಾಖಲೆ ಬರೆದಿದ್ದಾನೆ. ಕೌನ್ ಬನೇಗಾ ಕರೋಡ್ ಪತಿಯಲ್ಲಿ ನಡೆಯುವ ಜನಪ್ರಿಯ ಪ್ರಶ್ನೆಗಳಿಗೆ ಉತ್ತರಿಸಿದ 14 ವರ್ಷದ ಕಿರಿಯ ಪೋರ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಜನಪ್ರಿಯ ರಸಪ್ರಶ್ನೆ ಕಾರ್ಯಕ್ರಮ ಕೌನ್ ಬನೇಗಾ ಕರೋಡ್‌ಪತಿಯಲ್ಲಿ 1 ಕೋಟಿ ರೂ.ಗೆದ್ದ ಹೆಗ್ಗಳಿಕೆಗೆ ಹರಿಯಾಣದ ಮಹೇಂದ್ರಗಢ್‌ನ 8 ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಪಾತ್ರನಾಗಿದ್ದಾನೆ. 14 ವರ್ಷದ ಈ ಬಾಲಕ 1 ಕೋಟಿ ರೂ.ಗೆದ್ದ ಅತ್ಯಂತ ಕಿರಿಯ ಸ್ಪರ್ಧಿಯಾಗಿದ್ದು, ಹೊಸ ಇತಿಹಾಸ ನಿರ್ಮಿಸಿದ್ದಾನೆ. 15 ಪ್ರಶ್ನೆಗಳಿಗೆ ಉತ್ತರ ಕೊಟ್ಟು, 1 ಕೋಟಿ ರೂ ಗೆದ್ದು, 16ನೇ ಪ್ರಶ್ನೆಗೂ ಸರಿಯಾದ ಉತ್ತರ ನೀಡಿದ್ದಾನೆ. ಈತನ ಗುರಿ ಕೇವಲ ಒಂದು ಕೋಟಿ ಆಗಿರಲಿಲ್ಲ. ಏಳು ಕೋಟಿಯನ್ನು ಗುರಿಯಾಗಿಸಿಟ್ಟುಕೊಂಡಿದ್ದ. ಏಳು ಕೋಟಿಯ ಪ್ರಶ್ನೆಗೆ ಉತ್ತರಿಸೋಕೆ ಆಗದೇ ಆಟದಿಂದ ವಾಪಸ್ಸಾಗಿದ್ದಾನೆ. ಈತನ ಸಾಧನೆಗೆ ಹರಿಯಾಣ ಸಿಎಂ ಮನೊಹರ್ ಲಾಲ್ ಖಟ್ಟರ್ ಅಭಿನಂದಿಸಿದ್ದಾರೆ. ಇದು ಮೊದಲ ಬಾರಿ 14 ವರ್ಷದ ಪೋರ ಕೋಟಿಗೆದ್ದ ಇತಿಹಾಸವಾಗಿದೆ.
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!