Connect with us

    LATEST NEWS

    ಮದುವೆಯಾಗದೇ ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ..!

    Published

    on

    ಕಲಬುರಗಿ: 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಲಬುರಗಿಯ ಆಳಂದದಲ್ಲಿ ನಡೆದಿದೆ.


    ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಈ ವಿದ್ಯಾರ್ಥಿನಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆ ದಪ್ಪ ಇರುವುದರಿಂದ ಆಕೆಯ ದೇಹದಲ್ಲಿ ಆಗುತ್ತಿರುವ ಬದಲಾವಣೆ ಕಂಡು ಕುಟುಂಬಸ್ಥರು ಕಂಡು ಹಿಡಿಯುವ ಪ್ರಯತ್ನವು ಮಾಡಿಲ್ಲ. ಹಾಗೇ ಒಂದು ದಿನ ಶಾಲೆಯಲ್ಲಿರುವಾಗಲೇ ಈಕೆಗೆ ಜೋರು ಹೊಟ್ಟೆನೋವು ಕಾಣಿಸಿಕೊಂಡಿದೆ. ಹೀಗಾಗಿ ಶಿಕ್ಷಕರಿಗೆ ಹೇಳಿ ಆಕೆ ಸಂಬಂಧಿಕರ ಮನೆಗೆ ತೆರಳಿದ್ದಾಳೆ. ನಂತರ ಸಂಬಂಧಿಕರು‌ ವಿದ್ಯಾರ್ಥಿನಿ ಕುಟಂಬದವರಿಗೆ ಮಾಹಿತಿ ನೀಡಿದ ಬಳಿಕ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ. ಈ ವೇಳೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮದುವೆಯಾಗದೇ ಈಕೆ ಗಂಡು ಮಗುವಿಗೆ ಜನ್ಮ ನೀಡಿರುವುದು ಕುಟುಂಬಸ್ಥರಿಗೆ ಶಾಕ್ ಆಗಿದೆ. ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನೇ ಕೃತ್ಯ ಎಸಗಿರುವುದಾಗಿ ಬಯಲಾಗಿದೆ. ಅಲ್ಲದೇ ಪ್ರಕರಣ ಸಂಬಂಧಿತ ಆರೋಪಿ ಅಣ್ಣನನ್ನು ಆಳಂದ ಪೊಲೀಸರು ಬಂಧಿಸಿದ್ದಾರೆ.

    ಘಟನೆ ವಿವರ:
    ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಶಾಲೆಗೆ ರಜೆ ಇದ್ದಾಗ ಮನೆಗೆ ಬರುತ್ತಿದ್ದಳು. ಹೀಗೆ ಬಂದಾಗ ಸಹೋದರ ಆಕೆಯನ್ನು ಬಳಸಿಕೊಳ್ಳುತ್ತಿದ್ದನು. ರಾತ್ರಿ ಹೊತ್ತು ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆತ ತಂಗಿ ಎನ್ನುವುದನ್ನೂ ನೋಡದೇ ರೇಪ್‌ ಮಾಡುತ್ತಿದ್ದ. ಹೀಗೆ ಕಳೆದ ಮಾರ್ಚ್ ನಿಂದ ವಿದ್ಯಾರ್ಥಿನಿ ಹಲವು ಬಾರಿ ತನ್ನ ಅಣ್ಣನಿಂದ ಅತ್ಯಾಚಾರಕ್ಕೆ ಒಳಗಾಗಿದ್ದಳು. ಅಲ್ಲದೇ ಈ ವಿಚಾರವನ್ನು ಬಾಯಿಬಿಟ್ಟರೆ ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದನು. ಹೀಗಾಗಿ ಆಕೆ ಅತ್ಯಾಚಾರ ವಿಚಾರವನ್ನು ಮುಚ್ಚಿಟ್ಟಿದ್ದಳು. ಡಿ. 24 ರಂದು ಶಾಲೆಯಲ್ಲಿ ಇದ್ದಾಗ ಆಕೆಗೆ ಜೋರಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಶಿಕ್ಷಕರಿಗೆ ಹೇಳಿ ಆಕೆ ಸಂಬಂಧಿಕರ ಮನೆಗೆ ತೆರಳಿದ್ದಾಳೆ. ನಂತರ ಸಂಬಂಧಿಕರು‌ ವಿದ್ಯಾರ್ಥಿನಿ ಕುಟಂಬದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ‌ ಆಕೆಯನ್ನು ಮಹಾರಾಷ್ಟ್ರದ ಸೊಲ್ಲಾಪುರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಯಿತು. ಈ ವೇಳೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ವಿಚಾರ ಗೊತ್ತಾಗ್ತಿದ್ದಂತೆ ಕುಟುಂಬಸ್ಥರು ಕೂಡ ಶಾಕ್‌ ಆಗಿದ್ದಾರೆ. ಈಕೆಗೆ ಮದುವೆಯೇ ಆಗಿಲ್ಲ ಮಗುವಿಗೆ ಜನ್ಮ ಅಂದ್ರೆ ಹೇಗೆ ಅಂತಾ ಮಾತಾಡಿಕೊಳ್ಳಲು ಆರಂಭಿಸಿದರು. ಬಳಿಕ ಆಸ್ಪತ್ರೆಯವರು ಮಹಾರಾಷ್ಟ್ರದ ಪೊಲೀಸರಿಗೆ ಮಾಹಿತಿ ರವಾನೆ ಮಾಡಿದರು. ಮಹಾರಾಷ್ಟ್ರ ಪೊಲೀಸರು ನಿಂಬರ್ಗಾ ಪೊಲೀಸರನ್ನು ಸಂಪರ್ಕ ಮಾಡಿ ನಿಂಬರ್ಗಾ ಪೊಲೀಸರು ವಿದ್ಯಾರ್ಥಿನಿಯ ವಿಚಾರಣೆ ನಡೆಸಿದರು. ಈ ವೇಳೆ ಅಣ್ಣನಿಂದ ಕೃತ್ಯ ಆಗಿರುವುದು ಬಯಲಾಗಿದೆ. ಕೂಡಲೇ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲು ಮಾಡಲಾಯಿತು.

    Baindooru

    ಪತಿ ಮೇಲೆ ಅನುಮಾನ; ಇಬ್ಬರು ಮಕ್ಕಳನ್ನು ಕೊಂ*ದ ಪಾಪಿ ತಾಯಿ!

    Published

    on

    ಮಂಗಳೂರು/ಬೆಂಗಳೂರು : ರಾಜ್ಯವೇ ಬೆಚ್ಚಿ ಬೀಳುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  ಕ್ರೂ*ರಿ ತಾಯಿಯೊಬ್ಬಳು ತನ್ನ ಪುಟ್ಟ ಕಂದಮ್ಮಗಳನ್ನು ಕೊಂ*ದಿರುವ ಅಮಾನವೀಯ ಘಟನೆ ನಡೆದಿದೆ. ಅಲ್ಲದೇ ಬಳಿಕ ಆಕೆ ಆತ್ಮಹ*ತ್ಯೆಗೂ ಯತ್ನಿಸಿದ್ದಾಳೆ .

    ಎಲ್ಲವೂ ಚೆನ್ನಾಗಿತ್ತು…ಅನುಮಾನ ಶುರುವಾಯ್ತು :

    ಆ ಕುಟುಂಬ ಕಳೆದ ತಿಂಗಳಷ್ಟೇ ಜಾರ್ಖಂಡ್ ನಿಂದ ಬಂದು ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ವಾಸವಾಗಿತ್ತು.  ಪತಿ ಸುನೀಲ್ ಸಾಹೋ, ಪತ್ನಿ ಮಮತಾ ಸಾಹೋ, ಮಕ್ಕಳಾದ ಶಂಭು ಸಾಹೋ, ಶಿಯಾ ಸಾಹೋ…ಪುಟ್ಟ ಸಂಸಾರ…ಸಣ್ಣದೊಂದು ಬಾಡಿಗೆ ಮನೆಯಲ್ಲಿ ವಾಸ…ಆಟೋ ಚಾಲಕನಾಗಿ ದುಡಿಯುತ್ತಿದ್ದ ಸುನೀಲ್ ಸಾಹೋ..ಹೀಗೆ ಸಂಸಾರ ಸಾಗುತ್ತಿತ್ತು. ಎಲ್ಲವೂ ಸರಿಯಾಗಿತ್ತು. ಅದ್ಯಾವಾಗ ಗಂಡನ ಬಗ್ಗೆ ಅ*ನೈತಿಕ ಸಂಬಂಧದ ಅನುಮಾನ ಹುಟ್ಟಿಕೊಂತೋ ಎಲ್ಲವೂ ಎಕ್ಕುಟ್ಹೋಗಿತ್ತು. ಪತಿ ಬೇರೊಂದು ಯುವತಿಯೊಂದಿಗೆ ಮಾತಾಡುತ್ತಿರುವುದನ್ನು ಮಮತಾ ಕೇಳಿಸಿಕೊಂಡಿದ್ದಳಂತೆ. ಇದೇ ದಂಪತಿ ನಡುವೆ ನಿತ್ಯ ಜಗಳಕ್ಕೆ ಬುನಾದಿ ಹಾಕಿತ್ತಂತೆ. ನಿನ್ನೆಯೂ(ನ.21) ಜಗಳ ಮುಂದುವರಿದಾಗ ಸುನೀಲ್ ಆಟೋ ತೆಗೆದುಕೊಂಡು ಹೋಗಿದ್ದ ಎನ್ನಲಾಗಿದೆ.

    ಗಂಡ ಹೊರಹೋದ ಮೇಲೆ ಬಾಗಿಲು ಹಾಕಿ, ಇತ್ತ ಮಕ್ಕಳಿಬ್ಬರನ್ನೂ ಕತ್ತು ಹಿಸುಕಿ ಮಮತಾ ಕೊಂ*ದಿದ್ದಾಳೆ. ಬಳಿಕ ತಾನೂ ಚಾ*ಕುವಿನಿಂದ ಕತ್ತು ಕೊ*ಯ್ದುಕೊಂಡಿದ್ದಾಳೆ. ಎಲ್ಲ ಆದ ಮೇಲೆ ತಪ್ಪಿನ ಅರಿವಾಗಿ ಪತಿಗೆ ಸೆಲ್ಫಿ ಫೋಟೋ ಕಳುಹಿಸಿದ್ದಾಳೆ. ಅಷ್ಟೇ ಅಲ್ಲ,  ‘ಗಲತ್ ಹೋಗಯಾ…ಮಾಫ್ ಕರೋ’ ಅಂತ ಮೆಸೇಜ್ ಬೇರೆ ಹಾಕಿದ್ದಾಳೆ.

    ಇದನ್ನೂ ಓದಿ : ತಮಾಷೆಗಾಗಿ ಕ*ಪಾಳಮೋಕ್ಷ; ಸೋದರ ಮಾವನಿಂದ 3 ವರ್ಷದ ಮಗುವಿನ ಜೀ*ವಾಂತ್ಯ

    ಮೆಸೇಜ್ ನೋಡಿದ ತಕ್ಷಣ ಮನೆಯತ್ತ ದೌಡಾಯಿಸಿದ ಪತಿ ಬಾಗಿಲು ಒಡೆದು ಒಳ ಹೋಗಿ ಹೆಂಡತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದಾನೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ಮಮತಾ ಸಾಹೋ ಪ್ರಾ*ಣಾ*ಪಾಯದಿಂದ ಪಾರಾಗಿದ್ದಾಳೆ. ಆದರೆ, ಏನೂ ಅರಿಯದ ಕಂದಮ್ಮಗಳು ಪತಿ – ಪತ್ನಿ ಜಗಳಕ್ಕೆ ಬ*ಲಿಯಾಗಿವೆ.

    Continue Reading

    LATEST NEWS

    ನೀರಸ ಪ್ರದರ್ಶನ ಮುಂದುವರಿಸಿದ ಭಾರತ: ವಿವದಾತ್ಮಕ ತೀರ್ಪಿಗೆ ರಾಹುಲ್ ಬಲಿ !

    Published

    on

    ಮಂಗಳೂರು/ಆಸ್ಟ್ರೇಲಿಯಾ: ಪರ್ತ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ನಲ್ಲಿ ಪ್ರವಾಸಿ ಭಾರತ ತಂಡ ತನ್ನ ಬ್ಯಾಟಿಂಗ್ ವೈಫಲ್ಯ ಮುಂದುವರಿಸಿದೆ.


    ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಕೆ ಎಲ್ ರಾಹುಲ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ ಸ್ವಲ್ಪ ಹೊತ್ತು ಕ್ರೀಸ್ ನಲ್ಲಿ ನಿಂತಿದ್ದು ಬಿಟ್ಟರೆ, ಉಳಿದವರಿಂದ ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ನೀಡಿದ್ದ ಅದೇ ನೀರಸ ಪ್ರದರ್ಶನ ಮುಂದುವರಿಯಿತು.
    ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆರಂಭದಲ್ಲೇ ಜೊತೆಯಾಟ ಮುಂದುವರಿಸಲು ಸಾಧ್ಯವಾಗಲಿಲ್ಲ. 5 ರನ್ ಅಷ್ಟೇ ಜೊತೆಯಾಟವಾಡಿದ ಯಶಸ್ವಿ ಜೈಸ್ವಾಲ್ ಮತ್ತು ಕೆ.ಎಲ್ ರಾಹುಲ್ ಜೋಡಿ, ಜೈಸ್ವಾಲ್ ಶೂನ್ಯಕ್ಕೆ ವಿಕೆಟ್ ಒಪ್ಪಿಸುವುದರ ಮೂಲಕ ಆರಂಭಿಕ ನಿರಾಸೆ ಮೂಡಿಸಿದರು. ನಂತರ ಬಂದ ದೇವದತ್ ಪಡಿಕ್ಕಲ್, ಜೋಶ್ ಹೇಜಲ್ ವುಡ್ ಮಾರಕ ದಾಳಿಗೆ ಖಾತೆ ತೆರೆಯಲು ಕೂಡ ಸಾಧ್ಯವಾಗದೇ ಪೆವಿಲಿಯನ್ ಗೆ ಮರಳಿದರು.

    ಇದನ್ನೂ ಓದಿ:ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್‌..! 6 ಕೋಟಿ ಮೌಲ್ಯದ ಡ್ರ*ಗ್ಸ್‌ ಜಪ್ತಿ..!
    ಅಪಾರ ನಿರೀಕ್ಷೆಗಳ ಸಾಗರವೇ ಹೊತ್ತು ಬ್ಯಾಟಿಂಗ್ ಗೆ ಇಳಿದಿದ್ದ ವಿರಾಟ್ ಕೊಹ್ಲಿ ಮತ್ತೆ ನಿರಾಸೆ ಮೂಡಿಸಿದ್ದಾರೆ, ಕೇವಲ 5 ರನ್ ಗಳಸಿ ಔಟಾದರು. ನಂತರ ಬಂದ ಪಂತ್ ಆಟ ಲಯಕ್ಕೆ ತಂದರಾದರೂ ಇವರಿಗೆ ಯಾರೂ ಕೂಡ ಜೋಡಿಯಾಗಿ ನಿಲ್ಲಲೇ ಇಲ್ಲ. ಧ್ರುವ್ ಜುರೆಲ್ 11 ರನ್ ಗಳಿಗೆ ಔಟಾದರೆ, ವಾಷಿಂಗ್ಟನ್ ಸುಂದರ್ ಕೂಡ ನಾಲ್ಕು ರನ್ ಗೆ ಸುಸ್ತಾದರು. ಆದರೆ 7 ನೇ ವಿಕೆಟ್ ಗೆ ಪಂತ್‌ ಮತ್ತು ನಿತೀಶ್ 48 ರನ್ ಗಳ ಜೊತೆಯಾಟ ನೀಡಿದರು.
    ನಂತರ ಬಂದ ಹರ್ಷಿತ್ ರಾಣಾ 7 ರನ್ ಗಳಿಸಿ ಔಟಾದರು. ಇನ್ನೂ ಬುಮ್ರಾ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಭಾರತದ ಕಳಪೆ ಬ್ಯಾಟಿಂಗ್ ಪ್ರದರ್ಶನ ಮುಂದುವರಿಯಿತು.

    ಅಂಪೈರ್ ತೀರ್ಪು ವಿರುದ್ದ ರಾಹುಲ್ ಅಸಮಾಧಾನ:

    ಮಿಚೆಲ್ ಸ್ಟಾರ್ಕ್ ಎಸೆತವನ್ನು ರಾಹುಲ್ ಹೊಡೆಯಲು ಮುಂದಾದಾಗ, ಅದು ರಾಹುಲ್ ಅವರ ಬ್ಯಾಟ್ ನ ಸಮೀಪ ಹಾದು ಹೋಗಿ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಕ್ಯಾಚ್ ಹಿಡಿದರು. ತಕ್ಷಣವೇ ಫೀಲ್ಡ್ ಅಂಪೈರ್ ಬಳಿ ಮನವಿ ಮಾಡಿದರು. ನಂತರ ಆಸೀಸ್ ತಂಡ ಥರ್ಡ್ ಅಂಪೈರ್ ಮೊರೆ ಹೋದರು. ಇದನ್ನು ಪುರಸ್ಕರಿಸಿದ ಮೂರನೇ ಅಂಪೈರ್ ರಾಹುಲ್ ಔಟ್ ಎಂದು ಘೋಷಿಸಿದರು.
    ಸ್ಟಾರ್ಕ್ ಎಸೆದ ಚೆಂಡು ರಾಹುಲ್ ಬ್ಯಾಟ್ ತಾಗಿದೆಯೇ ಅಥವಾ ಪ್ಯಾಡ್ ಗೆ ತಾಗಿದೆಯೇ ಎಂಬುದು ಸ್ಪಷ್ಟವಾಗಿರಲಿಲ್ಲ. ರೀಪ್ಲೇಯಲ್ಲಿ ವಿವಿಧ ಆಯಾಮಗಳಿಂದ ಪರಿಶೀಲಿಸಿದ ನಂತರ, ಸ್ನಿಕ್ಕೋಮೀಟರ್ ಏರಿಳಿತವನ್ನು ಆಧರಿಸಿ ರಾಹುಲ್ ಔಟ್ ಎಂದು ತೀರ್ಪು ನೀಡಲಾಯಿತು. ಇದರಿಂದ ರಾಹುಲ್ ಅಸಮಾಧಾನದಿಂದಲೇ ಹೊರ ನಡೆದರು.

    Continue Reading

    Baindooru

    ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್‌..! 6 ಕೋಟಿ ಮೌಲ್ಯದ ಡ್ರ*ಗ್ಸ್‌ ಜಪ್ತಿ..!

    Published

    on

    ಬೆಂಗಳೂರು : ಮಾದಕ ವಸ್ತು ಮಾರಾಟ, ಸಾಗಾಟ ಜಾಲದ ಮೇಲೆ ಕಣ್ಣಿಟ್ಟಿರುವ ಸಿಸಿಬಿ ಅಧಿಕಾರಿಗಳು ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಮಾ*ದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಹಾಗೂ ಸಿಸಿಬಿ  ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ  ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಹೊಸ ವರ್ಷಕ್ಕೆ ಗಾಂ*ಜಾ ಸಪ್ಲೈ :
    ಹೊಸ ವರ್ಷಾಚರಣೆಯ ಸಲುವಾಗಿ ಕ್ವಿಂಟಾಲ್ ಗಟ್ಟಲೆ ಗಾಂ*ಜಾ ಸಪ್ಲೈ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಪೆಡ್ಲರ್ ಅಚ್ಚು ಹಾಗೂ ಜಮೀರ್, ರೇಷ್ಮಾ ದಂಪತಿ ಬಂಧಿತರು. ಆರೋಪಿಗಳಿಂದ 3.25 ಕೋಟಿ ರೂಪಾಯಿ ಮೌಲ್ಯದ 318 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

    ಮೂವರು ಆರೋಪಿಗಳು ಒಡಿಶಾ ಮತ್ತು ಆಂಧ್ರದಲ್ಲಿ ಗಾಂ*ಜಾ ಸಂಗ್ರಹಿಸಿದ್ದರು. ಹೊಸ ವರ್ಷಾಚರಣೆ ವೇಳೆ ಬೆಂಗಳೂರು, ಕೇರಳದಲ್ಲಿ ಮಾರಾಟ ಮಾಡಲು ಯೋಜಿಸಿದ್ದರು. ಜಮೀರ್ ಮತ್ತು ರೇಷ್ಮಾ ದಂಪತಿ ಬೆಂಗಳೂರಿನಲ್ಲಿ, ಪೆಡ್ಲರ್ ಅಚ್ಚು ಕೇರಳದಲ್ಲಿ ಗಾಂ*ಜಾ ಮಾರಲು ನಿರ್ಧರಿಸಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

    ಬೆಂಗಳೂರು ಮತ್ತು ಕೇರಳಕ್ಕೆ ಸಾಗಿಸಲು ಆರೋಪಿಗಳು ಸೆಲ್ಫ್ ಡ್ರೈವಿಂಗ್ ಕಾರು ಬಾಡಿಗೆಗೆ ಪಡೆದಿದ್ದರು. ಬಳಿಕ ಬೆಡ್ ಶೀಟ್ ನಲ್ಲಿ ಗಾಂಜಾ ತುಂಬಿ ಕಾರಿನಲ್ಲಿ ಬೆಂಗಳೂರಿಗೆ ತರುತ್ತಿದ್ದರು . ಗಾಂಜಾ ತರುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗೋವಿಂದಪುರ ಠಾಣೆ ಪೊಲೀಸರು ಹೆಚ್ ಬಿ ಆರ್ ಲೇಔಟ್ ಬಳಿ ಕಾರನ್ನು ಅಡ್ಡ ಹಾಕಿದ್ದಾರೆ. ಪೊಲೀಸರು ಪರಿಶೀಲನೆ ನಡೆಸುವಾಗ ಕಾರಿನಲ್ಲಿ 3 ಕೋಟಿ ರೂ. ಮೌಲ್ಯದ ಗಾಂ*ಜಾ ಪತ್ತೆಯಾಗಿದೆ. ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಅಚ್ಚು ಕೇರಳ ಪೊಲೀಸರಿಗೆ ಬೇಕಾದ ಮೋಸ್ಟ್ ವಾಂಟೆಡ್  ಆರೋಪಿ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದ್ದು, ಆತನ ವಿರುದ್ಧ ಕೇರಳದ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

    ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಸ್ ಅರೆಸ್ಟ್ :

    ಬೆಂಗಳೂರಿನಲ್ಲಿ ವಿದೇಶಿ ಡ್ರ*ಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡ್ರಗ್ಸ್ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾ*ಳಿ ನಡೆಸಿದ ಸಿಸಿಬಿ ಅಧಿಕಾರಿಗಳು,  1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ.

    ಇದನ್ನೂ ಓದಿ : ಏನಾಶ್ಚರ್ಯ ? ಈ ಡಯಟ್​ನಿಂದ ಪತ್ನಿಯ 4ನೇ ಸ್ಟೇಜ್ ಸ್ತನ ಕ್ಯಾನ್ಸರ್ ಮಾಯ !!
    ಆರೋಪಿಗಳು ಮುಂಬೈನಿಂದ ಬೆಂಗಳೂರಿಗೆ ಡ್ರ*ಗ್ಸ್ ತರಿಸುತ್ತಿದ್ದರು. ಹೊಸ ವರ್ಷಾಚರಣೆಯಂದು ಬೆಂಗಳೂರಿನಲ್ಲಿ ಮಾರಲು ಸಜ್ಜಾಗಿದ್ದರು ಎಂದು ತಿಳಿದು ಬಂದಿದೆ. ಅಲ್ಲದೇ, ಈ ವಿದೇಶಿ ಪೆಡ್ಲರ್ ಗಳು ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದರು ಎಂಬುದು ತನಿಖೆ ವೇಳೆ ಬಹಿರಂಗವಾಗಿದೆ.

    Continue Reading

    LATEST NEWS

    Trending