Connect with us

    LATEST NEWS

    ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

    Published

    on

    ಹಿರಿಯೂರು : ಉಡುವಳ್ಳಿ ಬಳಿ ಇರುವ ನವೋದಯ ಶಾಲೆಯ ವಿದ್ಯಾರ್ಥಿಯೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಸೋಮವಾರ(ಜು.8) ನಡೆದಿದೆ.
    ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದ ಪ್ರೇಮ್ ಸಾಗರ್ (13) ಆತ್ಮಹ*ತ್ಯೆ ಮಾಡಿಕೊಂಡ ಬಾಲಕ.

    ಮೃ*ತ ವಿದ್ಯಾರ್ಥಿಯು 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

    ಇದನ್ನೂ ಓದಿ : ನೀವು ಪ್ರಾಣಿ ಪ್ರಿಯರಾ? ನಿಮ್ಮ ಮನೆಯಲ್ಲಿ ಸಾಕು ಪ್ರಾಣಿಗಳಿದ್ದಾವಾ? ಹಾಗಾದ್ರೆ ಈ ಸ್ಟೋರಿ ನೋಡಿ

    ಪೊಲೀಸರ ತನಿಖೆಯಿಂದ ಆತ್ಮಹತ್ಯೆಗೆ ನಿಖರ ಕಾರಣ ಹೊರ ಬರಲಿದೆ. ಮೃತ ಯುವಕನ ದೇಹವನ್ನು ನಗರದ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಸದ್ಯ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ವರದಿಯಾಗಿದೆ.

    LATEST NEWS

    ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದ ರಾಮ; ಮುಂದೇನಾಯ್ತು ಗೊತ್ತಾ???

    Published

    on

    ಮಂಗಳೂರು/ದೆಹಲಿ: ನಗರದ ಶಹದಾರದಲ್ಲಿರುವ ಜೈ ಶ್ರೀರಾಮಲೀಲಾ ವಿಶ್ವಕರ್ಮ ನಗರದಲ್ಲಿ ಶನಿವಾರ (ಅ.5) ನಡೆದ ರಾಮಲೀಲಾ ಕಾರ್ಯಕ್ರಮದ ವೇಳೆ ಭಗವಾನ್ ರಾಮನ ಪಾತ್ರವನ್ನು ಹಾಕಿದ್ದ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಕುಸಿದು ಬಿದ್ದು, ಮೃತಪಟ್ಟಿರುವ ಘಟನೆ ನಡೆದಿರುವುದು ತಿಳಿದು ಬಂದಿದೆ.


    ಮೃತ ಸುಶೀಲ್ ಕೌಶಿಕ್ (45) ಅವರು ರಿಯಲ್ ಎಸ್ಟೇಟ್ ಡೀಲರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಜೊತೆಯಲ್ಲೇ ನಾಟಕಗಳಲ್ಲಿ ನಟಿಸುವ ಹವ್ಯಾಸವನ್ನೂ ಹೊಂದಿದ್ದರು. ಅದರಲ್ಲೂ ರಾಮ ಲೀಲಾ ನಾಟಕದಲ್ಲಿ ಭಗವಾನ್ ಶ್ರೀರಾಮನ ಪಾತ್ರಧಾರಿಯಾಗಿ ಎಲ್ಲರ ಗಮನ ಸೆಳೆದಿದ್ದರು.
    ಕಾರ್ಯಕ್ರಮದಲ್ಲಿ ನಡೆಯುತ್ತಿರುವಾಲೇ ಎದೆನೋವು ಕಾಣಿಸಿಕೊಂಡು ವೇದಿಕೆ ಬದಿಗೆ ಹೋಗಿದ್ದಾರೆ. ಬದಿಗೆ ಸರಿಯುತ್ತಿದ್ದಂತೆ ಅಲ್ಲೇ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    Continue Reading

    LATEST NEWS

    ಮೊಬೈಲ್ ಗೇಮ್ ದುಷ್ಪರಿಣಾಮ; ಸಾಲದಲ್ಲಿ ಮುಳುಗಿ ಮಗನ ಸಮೇತ ಕುಟುಂಬ ಆ*ತ್ಮಹತ್ಯೆಗೆ ಶರಣು

    Published

    on

    ಮಂಗಳೂರು/ತೆಲಂಗಾಣ: ಆನ್‌ಲೈನ್ ಜೂಜಾಟದ ಮೂಲಕ ಮಗ ಮಾಡಿದ 30 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ದಂಪತಿ ಮತ್ತು ಅವರ ಮಗ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆ*ತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ.


    ಮೃ*ತರನ್ನು ರಂಗವೇಣಿ ಸುರೇಶ್ (53), ಪತ್ನಿ ಹೇಮಲತಾ (45) ಮತ್ತು ಮಗ ಹರೀಶ್ (22) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಹರೀಶ್ ಆನ್‌ಲೈನ್ ಮೊಬೈಲ್ ಗೇಮ್‌ಗಳಿಗೆ ವ್ಯಸನಿಯಾಗಿದ್ದನು. ಅವನ ಚಟದಿಂದಾಗಿ ಕುಟುಂಬವು ರೂ.30 ಲಕ್ಷ ಸಾಲವನ್ನು ಹೊಂದಿತ್ತು.
    ತಮ್ಮ ಕೃಷಿ ಭೂಮಿಯನ್ನು ಮಾರಾಟ ಮಾಡಿದರೂ ಸಾಲ ತೀರಿಸಲು ಸಾಕಾಗಲಿಲ್ಲ. ಹೆಚ್ಚುತ್ತಿರುವ ಒತ್ತಡವನ್ನು ನಿಭಾಯಿಸಲು ಸಾಧ್ಯವಾಗದೆ ಕಂಗಾಲಾಗಿದ್ದರು. ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೋಧನ್ ಏರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ.

     

    Continue Reading

    LATEST NEWS

    ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಹಂಚಿಕೆ; ನಾಲ್ವರು ವಿದ್ಯಾರ್ಥಿಗಳ ಬಂಧನ

    Published

    on

    ಮಂಗಳೂರು/ಆಗ್ರಾ: ಶಿಕ್ಷಕರಿಗೆ ಗುರು ಸ್ಥಾನ ನೀಡಿ ಆರಾಧಿಸುವುದು ನಮ್ಮ ಸಂಸ್ಕೃತಿ. ನಮ್ಮ ತಪ್ಪನ್ನು ತಿದ್ದುತ್ತಾ, ಸದಾ ನಮ್ಮ ಒಳಿತನ್ನೇ ಬಯಸುವ ನಿಸ್ವಾರ್ಥ ಜೀವಕ್ಕೆ ವಿದ್ಯಾರ್ಥಿಗಳು ಚಿರಋಣಿಗಳಾಗಿ ಇರಬೇಕು. ಆದರೆ ಇಲ್ಲಿ,  ವಿದ್ಯಾರ್ಥಿಗಳು ಶಾಲಾ ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಬಳಸಿ ಬ್ಲಾಕ್‌ಮೇಲ್ ಮಾಡಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆಘಾತಕಾರಿ ಘಟನೆ ನಡೆದಿದೆ.

    ಶಿಕ್ಷಕಿಯು ಮಥುರಾ ಶಾಲೆಯಲ್ಲಿ ಪಾಠ ಮಾಡುತ್ತಿದ್ದು, ಹಿಂದಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದರು. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಎಲ್ಲಾ ರೀತಿಯ ಸಹಕಾರ ಮಾಡುತ್ತಿದ್ದರು.
    ವಿದ್ಯಾರ್ಥಿಯೊಬ್ಬ ಕಾಲಕ್ರಮೇಣ ಆಕೆಗೆ ಹತ್ತಿರವಾಗಿ ತನ್ನ ಮೊಬೈಲ್ ಫೋನ್‌ನಿಂದ ಅ*ಶ್ಲೀಲ ವಿಡಿಯೋ ಮಾಡಿ, ಬಳಿಕ ತನ್ನೊಂದಿಗೆ ಶಾ*ರೀರಕ ಸಂಬಂಧ ಬೆಳೆಸುವಂತೆ ಬ್ಲಾಕ್‌ಮೇಲ್ ಮಾಡಿದ್ದಾನೆ. ಈ ಹಿನ್ನಲೆಯಿಂದಾಗಿ ಶಿಕ್ಷಕಿಯು ಆತನಿಂದ ಅಂತರ ಕಾಯ್ದುಕೊಂಡಳು. ಸಿಟ್ಟಿನಿಂದ ಆ ಹುಡುಗ ವಿಡಿಯೋವನ್ನು ತನ್ನ ಗ್ರಾಮದ ಮೂವರು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡಿದ್ದಾನೆ. ನಂತರ ವಿದ್ಯಾರ್ಥಿಗಳು ವಾಟ್ಸಾಪ್‌ನಲ್ಲಿ ಇನ್ನೂ ಹಲವರಿಗೆ ವಿಡಿಯೊ ಕಳುಹಿಸಿದ್ದು, ಇನ್ಸ್ಟಾಗ್ರಾಮ್‌ನಲ್ಲಿ ಪೇಜ್ ಕೂಡ ಆರಂಭಿಸಿದ್ದಾರೆ.
    ಇದರಿಂದ ನೊಂದ ಶಿಕ್ಷಕಿಯು ಮಿಶನ್ ಶಕ್ತಿ ಅಭಿಯಾನ್ ಕೇಂದ್ರಕ್ಕೆ ತೆರಳಿ ತಾನು ಆತ್ಮ*ಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ನೊಂದ ಮಹಿಳೆಯನ್ನು ಸಂತೈಸಿ ಕೇಂದ್ರದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ್ರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ನಾಲ್ವರನ್ನೂ ಬಂಧಿಸಲಾಗಿದೆ.

    Continue Reading

    LATEST NEWS

    Trending