Wednesday, December 1, 2021

ಸ್ವಾತಂತ್ರೋತ್ಸ ಅಮೃತ ಮಹೋತ್ಸವದ ಅಂಗವಾಗಿ NSS ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ನೆಹರು ಯುವ ಕೇಂದ್ರ ಹಾಗೂ ರೋಟರಿ ಕ್ಲಬ್ ಮಂಗಳೂರು ಜಂಟಿ ಆಶ್ರಯದಲ್ಲಿ ಸ್ವಾತಂತ್ರೋತ್ಸವದ  ಅಮೃತ ಮಹೋತ್ಸವದ ಅಂಗವಾಗಿ ಮಂಗಳೂರಿನ ಹೃದಯ ಭಾಗದಲ್ಲಿರುವ ಸೆಂಟ್ರಲ್ ಮಾರ್ಕೆಟ್ ಸುತ್ತಮುತ್ತ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಜರುಗಿತು.

ಸುತ್ತ ಮುತ್ತ ಅಂಗಡಿಗಳ ಮಾಲೀಕರಿಗೆ ತಮ್ಮ ಸುತ್ತ ಮುತ್ತ ಪ್ಲಾಸ್ಟಿಕ್ ಎಸೆಯದಂತೆ ಮನವರಿಕೆ ಮಾಡಲಾಯಿತು. ಮಂಗಳೂರು ವಿಶ್ವ ವಿದ್ಯಾನಿಲಯದ  ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ  ಕೆ. ಎ., ನೆಹರು ಯುವ ಕೇಂದ್ರದ ಸಮನ್ವಯ ಅಧಿಕಾರಿ ರಘುವೀರ್ ಸೂಟರ್ ಪೇಟೆ,

ರೋಟರಿ ಕ್ಲಬ್ ನ ಡಾ. ರಂಜನ್ ಹಾಗೂ ಕಾನ್ಯೂಟ್ ಪಿಂಟೋ ಸ್ವಚ್ಛತಾ ಅಭಿಯಾನದಲ್ಲಿ ಉಪಸ್ಥಿತರಿದ್ದರು. ವಿಶ್ವ ವಿದ್ಯಾನಿಲಯ ಕಾಲೇಜಿನ   ಹಾಗೂ ರಥ ಬೀದಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕ, ಸೇವಕಿಯರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...