ಮಂಗಳೂರು: ಮಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ ಇಲ್ಲದವರಿಗೆ ಬಾಡಿಗೆ ನೀಡುವುದನ್ನು ತಡೆಗಟ್ಟುವ ಸಲುವಾಗಿ ಹೊಸ ರೂಲ್ಸ್ ಜಾರಿಗೆ ತಂದಿದ್ದಾರೆ.
ಮೈಸೂರಿನಲ್ಲಿ ಇನ್ಮುಂದೆ ಮನೆ ಬಾಡಿಗೆ ಪಡೆಯಲು ಹೊಸ ನಿಯಮ ಜಾರಿಯಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಯಿಂದ ಕಡ್ಡಾಯವಾಗಿ ನಿರಾಕ್ಷೇಪಣಾ ಪ್ರಮಾಣಪತ್ರ ಅಂದರೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು ಎಂದು ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಹೊಸ ಸುತ್ತೋಲೆ ಹೊರಡಿಸಿದ್ದಾರೆ.
ಆರೋಪಿ ಶಾರೀಕ್ ನಕಲಿ ಆಧಾರ್ ಕಾರ್ಡ್ ನೀಡಿ, ಮೈಸೂರಿನಲ್ಲಿ ಮನೆ ಬಾಡಿಗೆ ಪಡೆದಿದ್ದ. ಅಲ್ಲದೇ ಅದೇ ಬಾಡಿಗೆ ಮನೆಯಲ್ಲಿ ಬ್ಲಾಸ್‌ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು ತನಿಖೆಯಲ್ಲಿ ಬಯಲಾಗಿದೆ.
ಈ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸರು ಈ ನೂತನ ನಿಯಮ ಜಾರಿಗೊಳಿಸಿದ್ದಾರೆ.