Home ಪ್ರಮುಖ ಸುದ್ದಿ ಕುಕ್ಕೆಯಲ್ಲಿ ಬಿಗಿ ಭದ್ರತೆಯಲ್ಲಿ ಅನಾಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ..

ಕುಕ್ಕೆಯಲ್ಲಿ ಬಿಗಿ ಭದ್ರತೆಯಲ್ಲಿ ಅನಾಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ..

ಕುಕ್ಕೆಯಲ್ಲಿ ಬಿಗಿ ಭದ್ರತೆಯಲ್ಲಿ ಅನಾಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ..

ಸುಳ್ಯ : ದಕ್ಷಿಣಕನ್ನಡ ಜಿಲ್ಲೆಯ ಪ್ರಸಿದ್ಧ ಆದಿ ಸುಬ್ರಹ್ಮಣ್ಯ ದೇವಾಲಯದ ರಸ್ತೆ ಬದಿಯಲ್ಲಿನ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು. ಮಂಗಳೂರು ಎ.ಡಿ.ಸಿ ರೂಪ ಅವರ ಮುಂದಾಳತ್ವದಲ್ಲಿ ಕಟ್ಟಡ ತೆರವು ಕಾರ್ಯಾಚರಣೆ ನಡೆಯಿತು.

ವ್ಯಾಪಾರಿಗಳು ಆದಿಸುಬ್ರಹ್ಮಣ್ಯದ ರಸ್ತೆಯ ಬದಿಯಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತಿದ್ದರು. ಇದು ಇಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿತ್ತು. ಈ ಕಾರಣಗಳಿಂದಾಗಿ ರಸ್ತೆಯ ಅಗಲೀಕರಣ ನಿಧಾನವಾಗಿ ಸಾಗುತ್ತಿತ್ತು ಎಂಬುದು ಸಾರ್ವಜನಿಕರ ಆರೋಪವಾಗಿತ್ತು. ಈ ಹಿನ್ನೆಲೆಯಲ್ಲಿ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು. ಕಟ್ಟಡ ಹಾಗೂ ಅಂಗಡಿಗಳ ತೆರವು ಕಾರ್ಯ ನಡೆಯುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂಬ ಉದ್ದೇಶದಿಂದ, ಪೊಲೀಸ್ ಅಧಿಕಾರಿಗಳ ನಿಯೋಜನೆಯನ್ನು ಮಾಡಲಾಗಿತ್ತು, ಸುಬ್ರಹ್ಮಣ್ಯ ಠಾಣಾಧಿಕಾರಿ ಒಮನಾ ಸೇರಿದಂತೆ, ಸುಳ್ಯ, ಬೆಳ್ಳಾರೆ ಠಾಣೆಗಳ ಪೋಲಿಸ್ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗಳು, ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.

ವಿಡಿಯೋಗಾಗಿ..

 

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...