ಬೆಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಮಂಡ್ಯದ ಅರ್ಕೇಶ್ವರ ದೇವಸ್ಥಾನದ ಅರ್ಚಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಮಂಡ್ಯದ ಅರ್ಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ. ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು . ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮಂಡ್ಯದ ಅರಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ. ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ