Home ಕರ್ನಾಟಕ ವಾರ್ತೆ ಕರ್ನಾಟಕ ಲಾಕ್ ಡೌನ್: ಸರ್ಕಾರದ ಆದೇಶ ಉಲ್ಲಂಘಿಸಿದರೆ “ದಂಡಂ ದಶಗುಣಂ” ಸಿ.ಎಂ ಟ್ವೀಟ್

ಕರ್ನಾಟಕ ಲಾಕ್ ಡೌನ್: ಸರ್ಕಾರದ ಆದೇಶ ಉಲ್ಲಂಘಿಸಿದರೆ “ದಂಡಂ ದಶಗುಣಂ” ಸಿ.ಎಂ ಟ್ವೀಟ್

ಕರ್ನಾಟಕ ಲಾಕ್ ಡೌನ್: ಸರ್ಕಾರದ ಆದೇಶ ಉಲ್ಲಂಘಿಸಿದರೆ “ದಂಡಂ ದಶಗುಣಂ” ಸಿ.ಎಂ ಟ್ವೀಟ್

ಬೆಂಗಳೂರು: ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಾ.31ರವರೆಗೆ ರಾಜ್ಯಾದ್ಯಂತ ಲಾಕ್ಡೌನ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್-19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ ಇಂದಿನಿಂದ ಮಾರ್ಚ್ 31  ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ.

ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ” ಎಂದು ಮುಖ್ಯಮಂತ್ರಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ತಪ್ಪಿದಲ್ಲಿ ಕಠಿಣ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಉದ್ದೇಶವಿಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರ ಮೇಲೆ ಪೋಲಿಸರು ಕ್ರಮ ಕೈಗೊಳ್ಳುತ್ತಾರೆ.

ಆಮೇಲೆ ಇದಕ್ಕೆ ಸರ್ಕಾರವನ್ನು ದೂರಬೇಡಿ. ಮಹಾಜನತೆ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ಸಿಎಂ ಬಿಎಸ್‌ವೈ ಟ್ವೀಟ್‌ಮಾಡಿದ್ದಾರೆ.

ಕರ್ಫ್ಯೂ ಮಾದರಿಯಲ್ಲಿ ಲಾಕ್ ಡೌನ್ ಮಾಡಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ 5 ಕ್ಕಿಂತ ಹೆಚ್ಚು ಜನರು ಒಟ್ಟಿಗೆ ಸೇರಿದರೆ ಕಾನೂನು ಕ್ರಮ ಜರುಗಿಸುವುದಾಗಿ ಖಡಕ್ ಸೂಚನೆ ನೀಡಿದ್ದಾರೆ.

ಇನ್ನು ನೂಕುನುಗ್ಗಲು ಸಂಭವಿಸುವ ಆತಂಕ ಇರುವ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಗಳನ್ನು ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.‘ರಾಜ್ಯದ ಜನತೆ ಸರಳವಾಗಿ ತಮ್ಮ ಮನೆಯಲ್ಲೇ ಯುಗಾದಿ ಹಬ್ಬ ಆಚರಿಸಬೇಕು.

ಇಂದಿರಾ ಕ್ಯಾಂಟಿನ್ ತೆರೆಯದಿರಲು ನಿರ್ಧಾರ ಮಾಡಿದ್ದೇವೆ. ಜನಸಂದಣಿ ಹೆಚ್ಚುವ ಭೀತಿಯಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ.

ಜನ ಸರ್ಕಾರದ ಜತೆ ಸಹಕರಿಸಬೇಕು. ನಿಯಮ ಉಲ್ಲಂಘಿಸಿದರೆ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ.

ಇದು ಅನಿವಾರ್ಯ ಎಂದು ಎಚ್ಚರಿಸಿದರು. ಲಾಕ್ ಡೌನ್ ಗೆ ನಾಗರಿಕರು ಸಹಕರಿಸುವ ಅಗತ್ಯವಿದೆ. ಅಗತ್ಯ ವಸ್ತುಗಳ ಖರೀದಿಸಲು ಅವಕಾಶ ಮಾಡಿಕೊಡುತ್ತೇವೆ.

ಜನರು ಆತಂಕಪಡುವ ಅವಶ್ಯಕತೆ ಇಲ್ಲ,’ ಎಂದು ಅವರು ಹೇಳಿದರು. ಹಾಲು ಮತ್ತು ದಿನಸಿ ಪದಾರ್ಥ ದರ ಹೆಚ್ಚಳ ಮಾಡಿ ಶೋಷಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆಯನ್ನೂ ಅವರು ನೀಡಿದರು.

ಅಂತಾರಾಷ್ಟ್ರೀಯ ದೇಶೀಯ ವಿಮಾನ ಹಾರಾಟ ನಿಲ್ಲಿಸಲಾಗಿದೆ ಎಂದರೆ ಪರಿಸ್ಥಿತಿಯ ಗಂಭೀರತೆ ಅರ್ಥ ಮಾಡಿಕೊಳ್ಳಬೇಕು.

ಜನ ಈ ಬಗ್ಗೆ ಉದಾಸೀನ ಮಾಡದೆ, ಅನಗತ್ಯವಾಗಿ ಕಾರಿನಲ್ಲಿ, ಸ್ವಂತ ವಾಹನದಲ್ಲಿ ಓಡಾಟ ಮಾಡಬಾರದು ಎಂದೂ ಸಿಎಂ ಸೂಚಿಸಿದ್ದಾರೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...