ಉಡುಪಿ: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮೆರೆಯುತ್ತಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಖ್ಯಮಂತ್ರಿ ಎಸ್.ಆರ್. ಬಸವರಾಜ ಬೊಮ್ಮಾಯಿ ಇಂದು ಪೂರ್ವಾಹ್ನ 11 ಗಂಟೆಗೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭ ನಡೆಯುವ ಧಾರ್ಮಿಕ ಸಭೆಯನ್ನು ಅವರು ಉದ್ಘಾಟಿಸಲಿದ್ದು ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್ ಹಾಗೂ ಶಾಸಕರಾದ ಲಾಲಾಜಿ ಆರ್. ಮೆಂಡನ್, ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ವೇದವ್ಯಾಸ ಕಾಮತ್ ಸಹಿತ ವಿವಿಧ ಶಾಸಕರು, ಸಚಿವರು ಮತ್ತು ಗಣ್ಯರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.