Friday, August 19, 2022

ಸಿಎಂ ತಮ್ಮ ಹಾರ್ಡ್‌ನೆಸ್‌ ಆಡಳಿತವನ್ನು RSS, ಬಜರಂಗದಳ ಮೇಲೆ ತೋರಿಸ್ಲಿ ಎಂದ ಬಿಜೆಪಿ ಶಾಸಕ

ಮೈಸೂರು: ನಿಮ್ಮ ಹಾರ್ಡ್‌ನೆಸ್‌ ಆಡಳಿತವನ್ನು ಆರ್‌ಎಸ್‌ಎಸ್‌, ಬಜರಂಗದಳ, ಶ್ರೀರಾಮಸೇನೆಯವರ ಮೇಲೆ ಬಳಸಿ. ಕೆಲಸಕ್ಕೆ ಬಾರದ್ದು ಮಾತಾಡ್ತೀದ್ದಾರಲ್ಲಾ,

ಅವರ ಮೇಲೆ ಆ ಹಾರ್ಡ್‌ ವೆಪನ್‌ ಯೂಸ್‌ ಮಾಡಿ ಎಂದು ವಿಧಾನಪರಿಷತ್‌ ಶಾಸಕ ಎಚ್‌. ವಿಶ್ವನಾಥ್‌ ಹಾಗೂ ಬಿಜೆಪಿ ಪಕ್ಷದ ನಾಯಕ ಸಿಎಂ ವಿರುದ್ಧ ಹೇಳಿಕೆ ನೀಡಿದ್ದಾರೆ.


ನಾನು ಸಾಫ್ಟ್‌ ಆಗಿ ಆಡಳಿತ ಮಾಡುತ್ತಿದ್ದೇನೆ. ಒಂದು ವೇಳೆ ಹಾರ್ಡ್‌ ಆಗಿ ಆಡಳಿತ ನಡೆಸಿದರೆ ಕಾಂಗ್ರೆಸ್‌ನವರು ಹೆದರುತ್ತಾರೆಂಬ ಸಿಎಂ ಹೇಳಿಕೆಗೆ ಗರಂ ಆಗಿ ಪ್ರತಿಕ್ರಿಯಿಸಿ, ಆಡಳಿತದಲ್ಲಿ ಹಾರ್ಡ್‌-ಸಾಫ್ಟ್‌ ಅಂದ್ರೇನು?.

ನಾವೆಲ್ಲಾ ಆಡಳಿತ ಮಾಡಿಕೊಂಡು ಬಂದಿರುವವರೇ. ಆಡಳಿತದಲ್ಲಿ ಸಾಫ್ಟ್ ಮತ್ತು ಹಾರ್ಡ್ ಎನ್ನುವುದು ಇಲ್ಲ. ಸಾಂವಿಧಾನಿಕ ಅಧಿಕಾರವನ್ನು ಚಲಾಯಿಸಬೇಕು. ಅವರು ಪ್ರತಿ ದಿನ ಒಂದೊಂದು ಹಗರಣಗಳು ಬೆಳಕಿಗೆ ಬರುತ್ತಿವೆ.

ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಪಿಎಸ್​ಐ ಹಗರಣದಲ್ಲಿ ಪೊಲೀಸ್ ಇಲಾಖೆಯ ಕೆಲವು ಅಧಿಕಾರಿಗಳು, ರಾಜಕಾರಣಿಗಳು ಭಾಗಿಯಾಗಿದ್ದಾರೆ. ಹಗರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಬೇಕೆಂದು ಹೆಚ್.ವಿಶ್ವನಾಥ್ ಹೇಳಿದರು.

LEAVE A REPLY

Please enter your comment!
Please enter your name here

Hot Topics

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.ಈತ ಸಂಗಮ್...

ಚಿಕ್ಕಮಗಳೂರಿನಲ್ಲೂ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು.ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ...

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...