ಐಸ್ ಸ್ಕೇಟಿಂಗ್ ನಲ್ಲಿ ಅಂತರಾಷ್ಟ್ರೀಯ ಚಿನ್ನದ ಪದಕ ಪಡೆದ ಅನಘಾಗೆ ಸಿಎಂ ಅಭಿನಂದನೆ
ಐಸ್ ಸ್ಕೇಟಿಂಗ್ ನಲ್ಲಿ ಅಂತರಾಷ್ಟ್ರೀಯ ಚಿನ್ನದ ಪದಕ ಪಡೆದ ಅನಘಾಗೆ ಸಿಎಂ ಅಭಿನಂದನೆ
ಮಂಗಳೂರು:ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ,ಅಂತರಾಷ್ಟ್ರೀಯ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದ ಮಂಗಳೂರಿನ ಕುಮಾರಿ ಅನಘಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬೆಂಗಳೂರಿನ ಅವರ ಸ್ವಗೃಹ ಧವಳಗಿರಿಯಲ್ಲಿ ಅಭಿನಂದಿಸಿದರು.
ಕಿರಿಯ ಪ್ರಾಯದಲ್ಲೇ ಐಸ್ ಸ್ಕೇಟಿಂಗ್ ಅನ್ನುವ ಕಷ್ಟಕರ ಕ್ರೀಡೆಯಲ್ಲಿ ಸಾಧನೆ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆದಿರೋದು ಈ ರಾಜ್ಯಕ್ಕೆ ಹೆಮ್ಮೆಯ ವಿಚಾರ,ಮುಂದಿನ ದಿನದಲ್ಲೂ ಈ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಹಾಗೂ ದೇಶಕ್ಕೆ ಹೆಸರು ತರುವಂತೆ ಅವರು ಆಶೀಸಿದರು.
ಅನಘಾ ಕಳೆದ 2020 ಜನವರಿ 4 ಹಾಗೂ 5 ರಂದು ಸಿಂಗಾಪುರದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್ ನಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಚಿನ್ನದ ಪದಕ ಪಡೆದ ದೇಶದ ಮೊದಲ ಸ್ಕೇಟರ್ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅನಘಾ ಈವರೆಗೆ ಜಿಲ್ಲಾ,ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 22 ಚಿನ್ನದ ಪದಕ,9 ಬೆಳ್ಳಿ ಹಾಗೂ 6 ಕಂಚಿನ ಪದಕ ಪಡೆದಿದ್ದಾರೆ.
ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ,ಅನಘಾ ಡೆಂಟಲ್ ಸ್ಪೆಷಾಲಿಟಿ ಕ್ಲಿನಿಕ್ ನ ವೈದ್ಯರಾದ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ ನಾಲ್ಕನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಅನಘಾ ಅವರ ಕ್ರೀಡಾ ಸಾಧನೆಯನ್ನು ಪರಿಗಣಿಸಿ ಜನವರಿ 26 ರಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ದೆಹಲಿಯಲ್ಲಿ ಐಸ್ ಸ್ಕೇಟಿಂಗ್ ನ ಭಾರತ ತಂಡದ ಕೋಚ್ ಅವಧೂತ್ ಥಾವಡೇ ಅವರಿಂದ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿರುವ ಅನಘಾ, ಮಂಗಳೂರಿನಲ್ಲಿ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಕುಕ್ಯಾನ್ ಅವರಿಂದ ರೋಲರ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾರೆ.
LATEST NEWS
ರಾಜ್ಯದ ‘KSRTC’ ಬಸ್ ಸೇರಿದಂತೆ 4 ಬಸ್‌ಗಳ ಮೇಲೆ ಕಲ್ಲು ತೂರಾಟ; ಕಿಡಿಗೇಡಿಗಳು ಪರಾರಿ
ಮಂಗಲುರು/ಹೈದ್ರಾಬಾದ್ : ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್ಟಿಸಿ ಸಂಸ್ಥೆಯ ಐರಾವತ ಬಸ್ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಸಿರುವ ಘಟನೆ ಹೈದರಾಬಾದ್ ಸಮೀಪದ ಶಂಶಾಬಾದ್ ನಲ್ಲಿ ನಡೆದಿದೆ.
ಗುರುವಾರ (ನ.7) ರಾತ್ರಿ 11 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಹೈದರಾಬಾದ್‌ನಿಂದ ಬೆಂಗಳೂರು ನಡುವೆ ಸಂಚರಿಸುವ ಸಾರಿಗೆ ಬಸ್ ರಾತ್ರಿ 10:45ರ ಸುಮಾರಿನಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿನತ್ತ ಹೊರಟಿತ್ತು.
ಕರ್ನಾಟಕದ ಕೆಎಸ್‌ಆರ್‌ಟಿಸಿ ಬಸ್ ಮಾತ್ರವಲ್ಲದೇ ತೆಲಂಗಾಣದ ಒಂದು ಸರ್ಕಾರಿ ಬಸ್, ಖಾಸಗಿ ಬಸ್ ಸೇರಿದಂತೆ ಒಟ್ಟು 4 ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಬಸ್ಸಿನ ಕಿಟಕಿಯ ಗಾಜುಗಳು ಮಾತ್ರ ಒಡೆದು ಹೋಗಿವೆ.
ಈ ಪ್ರಕರಣದ ಸಂಬಂಧ ಶಂಶಾಬಾದ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
BIG BOSS
BBK 11: ಬಿಗ್‌ಬಾಸ್ ವಾರದ ಕತೆಯಲ್ಲಿ ಮೋಕ್ಷಿತಾಗೆ ಕ್ಲಾಸ್ ತಗೊಳ್ತಾರಾ ಕಿಚ್ಚ?
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 11, 41ನೇ ದಿನಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ವಾರದ ಕತೆ ಕಿಚ್ಚನ ಜೊತೆ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ನ ಆಗಮನ ಆಗಿದೆ. ವೈಟ್ ಅಂಡ್ ವೈಟ್ನಲ್ಲಿ ವೇದಿಕೆಗೆ ಬಂದ ಕಿಚ್ಚ ಸುದೀಪ್ ಈ ಯುದ್ಧದಲ್ಲಿ ಗೆದ್ದವರು ಯಾರು? ಬಿದ್ದವರು ಯಾರು? ತನ್ನ ತನವನ್ನು ಕಳೆದುಕೊಂಡವರು ಯಾರು ಅಂತ ಪ್ರಶ್ನೆ ಮಾಡಿದ್ದಾರೆ.
ಹೌದು, ಕಲರ್ಸ್ ಕನ್ನಡದಲ್ಲಿ ರಿಲೀಸ್ ಆದ ಹೊಸ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಅವರು ಬಿಗ್‌ಬಾಸ್ ವೇದಿಕೆಗೆ ಬಂದಿದ್ದಾರೆ. ವಿಶೇಷ ಅಧಿಕಾರಗಳನ್ನು ಗೆಲ್ಲೋ ಉದ್ದೇಶವನ್ನು ಇಟ್ಟುಕೊಂಡಿತ್ತು ಇಡೀ ಮನೆ. ಈ ಯುದ್ಧದಲ್ಲಿ ಗೆದ್ದವರು ಯಾರು? ಬಿದ್ದವರು ಯಾರು? ತನ್ನ ತನವನ್ನು ಕಳೆದುಕೊಂಡವರು ಯಾರು ಅಂತ ಇಂದಿನ ಸಂಚಿಕೆಯಲ್ಲಿ ಚರ್ಚೆಯಾಗಲಿದೆ. ಸದ್ಯ ಇದೇ ಪ್ರೋಮೋ ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಇನ್ನು ಈ ವಾರ ಕಿಚ್ಚ ಮೋಕ್ಷಿತಾಗೆ ಕ್ಲಾಸ್ ತೆಗೆದುಕೊಳ್ಳುತ್ತಾರಾ ಎಂದು ಕಾದುನೋಡಬೇಕಾಗಿದೆ.
ಸದ್ಯ ಬಿಗ್‌ಬಾಸ್ ಮನೆಯಲ್ಲಿ ಒಟ್ಟು 13 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ನಾಳಿನ ಸಂಚಿಕೆಯಲ್ಲಿ ಓರ್ವ ಸ್ಪರ್ಧಿ ಬಿಗ್‌ಬಾಸ್ ಮನೆಗೆ ಗುಡ್ಬೈ ಹೇಳಬೇಕು. ಬಿಗ್‌ಬಾಸ್ ಮನೆಯಿಂದ ಯಾವ ಸ್ಪರ್ಧಿ ಆಚೆ ಹೋಗಲಿದ್ದಾರೆ ಅಂತ ಕಾದು ನೋಡಬೇಕಿದೆ.
LATEST NEWS
ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ ಎಂದು ಸಂಸದರು ಹೇಳಿದ್ದಾರೆ.
ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್‌ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಸುಗಮ ಸರಕು ಸಾಗಾಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ಕೂಡ ವೃದ್ಧಿಸಲಿದೆ. ಆ ಮೂಲಕ, ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ ಎಂದರು.
ಹೀಗಾಗಿ, ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343,74,00,000 ರೂ. ಬಿಡುಗಡೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಯ ಜನತೆ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಕ್ಯಾ. ಚೌಟ ಹೇಳಿದ್ದಾರೆ.
- LATEST NEWS2 days ago
ವಧುವಿನಿಂದ ʼಮೊದಲ ರಾತ್ರಿʼ ನಿರಾಕರಣೆ; ಕಾರಣ ತಿಳಿದು ವರನಿಗೆ ಶಾ*ಕ್
- FILM3 days ago
ಕೋರ್ಟ್ ಮೆಟ್ಟಿಲೇರಿದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್
- LATEST NEWS4 days ago
ರೈಲ್ವೆ ನಿಲ್ದಾಣದಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯ ಶ*ವ ಪತ್ತೆ; ತನಿಖೆ ವೇಳೆ ಬಯಲಾಯ್ತು ಸತ್ಯ!
- LATEST NEWS5 days ago
ಮಹಿಳೆಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 450 ರೂ.ಗೆ ಗ್ಯಾಸ್ ಸಿಲಿಂಡರ್