Wednesday, October 5, 2022

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಗೆ ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಸಣ್ಣ ಅಪಘಾತವಾಗಿದೆ.

ಮಾಜಿ ಸಚಿವ ಶಿವರಾಮ ಹೆಬ್ಬಾರ್ ಪ್ರಯಾಣಿಸುತ್ತಿದ್ದ ವಾಹನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಇದ್ದ ಕಾರು ಹಿಂಬದಿಯಿಂದ ಡಿಕ್ಕಿಯಾಗಿದೆ. ಶಿವರಾಮ್ ಹೆಬ್ಬಾರ್ ಹಾಗೂ ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ.

LEAVE A REPLY

Please enter your comment!
Please enter your name here

Hot Topics

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...