ಮಂಗಳೂರು: ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ಹಿನ್ನೆಲೆ ಡಿಜಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಕರೆಯಲಾಗಿದೆ. ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಮಂಗಳೂರಿನಲ್ಲೇ ಇರಲು ಸೂಚನೆ ನೀಡಲಾಗಿದೆ.
ಸಿದ್ದರಾಮಯ್ಯ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ ಎಂಬ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಕರಣವನ್ನು ನಮಗೆ ಗೊತ್ತಿದೆ ಹೇಗೆ ನಿಭಾಯಿಸಬೇಕು ಎಂದ ಅವರು ಇದು ಪೂರ್ವ ನಿಯೋಜಿತ ಕೊಲೆ.
ಸಿದ್ದರಾಮಯ್ಯ ಹೇಳಿದ್ದೇ ವೇದವಾಕ್ಯವಲ್ಲ. ಯಾರೂ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಸಿದ್ದರಾಮಯ್ಯ ಇದ್ದಾಗ 30 ಕೊಲೆಯಾಗಿದೆ ಎಂದು ಆರೋಪಿಸಿದರು.
ಮಂಗಳೂರಿಗೆ ಮತ್ತೆ ತೆರಳುತ್ತೀರಾ ಎಂಬ ಪ್ರಶ್ನೆಗೆ ಸದ್ಯಕ್ಕೆ ಮಂಗಳೂರಿಗೆ ಹೋಗುವ ಯೋಚನೆಯಿಲ್ಲ ಎಂದು ಹೇಳಿದರು.