Wednesday, October 5, 2022

ಉಡುಪಿ: ಮಳೆಹಾನಿ ಕುರಿತು ಉಡುಪಿ-ದ.ಕ ಅಧಿಕಾರಿಗಳ ಜೊತೆ ಸಿಎಂ ಸಭೆ

ಉಡುಪಿ:’ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೇನೆ. ಭೂಕಂಪ ಮತ್ತು ಭೂಕುಸಿತವಾದ ಸ್ಥಳಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಹಾಗೆಯೇ ಈ ಬಗ್ಗೆ 4 ಸಂಸ್ಥೆಗಳಿಂದ ಅಧ್ಯಯನ ಮಾಡಲು ಸೂಚನೆ ಕೊಟ್ಟಿದ್ದೇನೆ’ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದ.ಕನ್ನಡ ಮತ್ತು ಉಡುಪಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಕಡಲು ಕೊರೆತ ತಡೆಯಲು ಹೊಸ ತಂತ್ರಜ್ಞಾನದ ಅಳವಡಿಸಲು ತೀರ್ಮಾನಿಸಲಾಗುವುದು.

ಕೊಡಗು ಸೇರಿದಂತೆ ದ.ಕ ಹಾಗೂ ಉಡುಪಿ ಈ ಮೂರು ಜಿಲ್ಲೆಯ ಹಾನಿಯ ಬಗ್ಗೆ ಇದೀಗ ಮಣಿಪಾಲ ರಜತಾದ್ರಿ ಕಟ್ಟಡದಲ್ಲಿ ಮೂರು ಜಿಲ್ಲೆಗಳ ಅಧಿಕಾರಿಗಳ ಸಭೆ ನಡೆಸುತ್ತಿದ್ದೇನೆ. ಅಲ್ಲಿ ಸಮಗ್ರ ಚರ್ಚೆ ನಡೆಯುತ್ತದೆ.

ತುರ್ತು ಮತ್ತು ದೀರ್ಘಕಾಲೀನ ಸಮಸ್ಯೆ ಪರಿಹಾರದ ಬಗ್ಗೆ ಕೂಡಾ ಚರ್ಚೆ ನಡೆಯಲಿದೆ. ಬೈಂದೂರು ತಾಲೂಕು ಮತ್ತು ಕಾಪು ತಾಲೂಕಿಗೆ ಭೇಟಿ ಕೊಡಲಿದ್ದೇನೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಹತ್ತು ದಿನ ಬಿಟ್ಟು ಭೇಟಿ ನೀಡಬೇಕು. ನೆರವು ಮತ್ತು ಅಭಿವೃದ್ಧಿ ಕೆಲಸದ ಬಗ್ಗೆ ಅಧಿಕಾರಿಗಳಿಗೆ ಸೂಚಿಸುತ್ತೇನೆ’ ಎಂದು ಹೇಳಿದರು.

ಕಂದಾಯ ಸಚಿವ ಆರ್ ಅಶೋಕ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್, ಉಡುಪಿ ಉಸ್ತುವಾರಿ ಸಚಿವ ಎಸ್. ಅಂಗಾರ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

Hot Topics

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.