Connect with us

DAKSHINA KANNADA

ಗಡಿ ಗ್ರಾಮಗಳ ಹೆಸರು ಬದಲಾವಣೆ: ಪತ್ರ ಬರೆಯುತ್ತೇನೆ ಎಂದ ಯಡಿಯೂರಪ್ಪ

Published

on

ಬೆಂಗಳೂರು: ಗಡಿ ಪ್ರದೇಶದ ಗ್ರಾಮಗಳ ಹೆಸರುಗಳನ್ನು ಮಲಯಾಳಂ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾವಣೆ ಬಗ್ಗೆ, ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಈ ವಿಷಯವನ್ನು ಕೇರಳ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದಿದ್ದಾರೆ.

ಸೋಮವಾರ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ  ಹಾಗೂ ಪ್ರಾಧಿಕಾರದ ಕಾರ್ಯದರ್ಶಿಗಳಾದ ಪ್ರಕಾಶ ಮತ್ತೀಹಳ್ಳಿಯರವರು ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ  ವಿಷಯವನ್ನು ಗಮನಕ್ಕೆ ತಂದಿದ್ದಾರೆ. ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ವಿಷಯವು ತಮ್ಮ ಗಮನಕ್ಕೆ ಈಗಾಗಲೇ ಬಂದಿದ್ದು, ಈ ಬಗ್ಗೆ ಕೂಡಲೇ ಕೇರಳ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.

ಕಾಸರಗೋಡು ಮತ್ತು ಮಂಜೇಶ್ವರ ಭಾಗದಲ್ಲಿ ಕನ್ನಡಿಗರು ಮತ್ತು ಮಲಯಾಳ ಭಾಷೆ ಆಡುವವರು ಪರಸ್ಪರ ಸಹಬಾಳ್ವೆಯಿಂದ ಸೋದರರಂತೆ ಬದುಕನ್ನು ನಿರ್ವಹಿಸುತ್ತಿದ್ದು, ಕನ್ನಡ ಭಾಷೆಯ ಸಾಂಸ್ಕೃತಿಕ ಐತಿಹಾಸಿಕ ಮಹತ್ವವುಳ್ಳ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎಂಬ ವಿಷಯವನ್ನು ಕೇರಳ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಈ ರೀತಿಯ ಗ್ರಾಮಗಳ ಹೆಸರುಗಳ ಬದಲಾವಣೆಯ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಕೋರಿ ಪತ್ರ ಬರೆಯುವುದಾಗಿ ಯಡಿಯೂರಪ್ಪ  ಭರವಸೆ ನೀಡಿದರು.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending