Connect with us

    LATEST NEWS

    ಮದುವೆ ಹೊರಟಿದ್ದ ಬಸ್‌ ಪಲ್ಟಿ ಪ್ರಕರಣ: ಸಾವನ್ನಪ್ಪಿದ 7 ಮಂದಿಗೆ ಸಿಎಂ ಪರಿಹಾರ ನಿಧಿ ಘೋಷಣೆ

    Published

    on

    ಬೆಂಗಳೂರು: ಮದುವೆ ಹೊರಟಿದ್ದ ದಿಬ್ಬಣ ಬಸ್‌ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಬಳಿ ಪಲ್ಟಿಯಾಗಿ 7 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ತನ್ನ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ರೂ. 2ಲಕ್ಷ ಪರಿಹಾರವನ್ನು ಮಂಜೂರು ಮಾಡಿದ್ದಾರೆ.


    ಘಟನೆ ವಿವರ
    ಇದೇ ವರ್ಷ ಜನವರಿ 3ರಂದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಚನಿಲ ಎನ್ನುವ ಪ್ರದೇಶದಿಂದ ಕೇರಳ ಮೂಲಕ ಮದುವೆ ದಿಬ್ಬಣದ ಬಸ್ ಮಡಿಕೇರಿಗೆ ಹೊರಟಿದ್ದರು.
    ಕೇರಳದ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿತ್ತು. ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ ಮದುವೆಗೆ ಹೊರಟಿದ್ದ 7 ಮಂದಿ ಸಾವನ್ನಪ್ಪಿದ್ದರು.

    ಬಸ್‌ನಲ್ಲಿದ್ದ ಪುತ್ತೂರು, ಸುಳ್ಯ ಮತ್ತು ಬಂಟ್ವಾಳ ತಾಲೂಕಿನ 7ಮಂದಿ ಮೃತಪಟ್ಟಿರುವ ಕುಟುಂಬಕ್ಕೆ ಪರಿಹಾರಕ್ಕಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರ ಮನವಿಯಂತೆ ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ ತಲಾ ರೂ. 2ಲಕ್ಷ ಪರಿಹಾರವನ್ನು ಮಂಜೂರು ಮಾಡಿದ್ದಾರೆ.


    ಬಸ್ ಅಪಘಾತದಿಂದ ಬಲ್ನಾಡು ಚನಿಲ ಪಾಲೆಚ್ಚಾರಿನ ಚೋಮ ನಾಯ್ಕರವರ ಪುತ್ರ ರಾಜೇಶ್(38) ಅವರ ಪುತ್ರ ಆದರ್ಶ(14),

    ಕುಂಜೂರುಪಂಜ ದೇವಸ್ಯ ನಾರಾಯಣರವರ ಪುತ್ರಿ ಸುಮತಿ(26) ಪಾಣಾಜೆ ಆರ್ಲಪದವು ಅರ್ಧಮೂಲೆ ನಾರಾಯಣರವರ ಪುತ್ರ ಶ್ರೇಯಸ್(13), ಸುಳ್ಯ ಸೋಣಂಗೇರಿ ಜಾಲ್ಸೂರು ಗ್ರಾಮದ ಕುಕ್ಕಂದೂರು ನಾರಾಯಣ ನಾಯ್ಕರವರ ಪುತ್ರ ರವಿಚಂದ್ರ(40)

    ಬೆಟ್ಟಂಪಾಡಿ ಗ್ರಾಮದ ಅಜ್ಜಿಕಲ್ಲು ಸಮೀಪದ ಕಳೆಂಜಿಲ ವಸಂತ ನಾಯ್ಕ ಪತ್ನಿ ಸೇಸಮ್ಮ ಯನೆ ಜಯಲಕ್ಷ್ಮೀ, ಬಸ್ ನ ನಿರ್ವಾಹಕ ಬಂಟ್ವಾಳ ನರಿಕೊಂಬು ಶ್ರೀಧರ ಪೂಜಾರಿಯವರ ಪುತ್ರ ಶಶಿಧರ ಮೃತಪಟ್ಟಿದ್ದರು.
    ಅಫಘಾತಕ್ಕೀಡಾದ ಬಸ್ಸಿಗೆ‌ ಯಾವುದೇ ತರಹದ ವಿಮೆ ಇಲ್ಲದ ಕಾರಣ, ವಿಶೇಷ ಪ್ರಕರಣವೆಂದು ಪರಿಗಣಿಸಿ,

    ಮೃತಪಟ್ಟ ಕುಟುಂಬಗಳಿಗೆ ಸಹಾಯ ಧನ ಮಂಜೂರು ಮಾಡುವಂತೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹಾಗೂ ಶಾಸಕ ಸಂಜೀವ ಮಠಂದೂರು ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದರು. ಮುಖ್ಯಮಂತ್ರಿಯವರು ಮೃತರ ಕುಟುಂಬಕ್ಕೆ ಸಾಂತ್ವಾನ ವ್ಯಕ್ತಪಡಿಸುತ್ತಾ, ತಲಾ ರೂ.2,00,000 ದಂತೆ ಒಟ್ಟು ಏಳು ಜನರಿಗೆ ಒಟ್ಟು ರೂ.ಹದಿನಾಲ್ಕು ಲಕ್ಷ ಪರಿಹಾರ ನಿಧಿಯಿಂದ ಪರಿಹಾರವಾಗಿ ಮಂಜೂರು ಮಾಡಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಕೇರಳ ಸರಕಾರ ಅಫಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯನ್ನು ಕಲ್ಪಿಸಿತ್ತು. ಕೇರಳ ಮುಖ್ಯಮಂತ್ರಿ ಈ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆಯೂ ಆದೇಶಿಸಿದ್ದರು‌.

    ಅಫಘಾತಕ್ಕೆ ಸಂಬಂಧಿಸಿದಂತೆ ಪಾಣತ್ತೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪ್ರಕರಣದ ಪ್ರಕ್ರಿಯೆ ಮಾತ್ರ ನಿಧಾನಗತಿಯಿಂದ ಸಾಗುತ್ತಿದೆ ಎಂದು ನೊಂದ ಕುಟುಂಬಗಳ ಆರೋಪವೂ ಇದೆ.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending