Connect with us

    BELTHANGADY

    ಬಸ್ ನಿಲ್ದಾಣಕ್ಕೆ ಬಂಗೇರ ಹೆಸರು ; ನುಡಿನಮನದಲ್ಲಿ ಸಿಎಂ ಘೋಷಣೆ..!

    Published

    on

    ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು.

    ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡವರು ಬಂಗೇರ ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. 2023 ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು ಎಂದರು.

    ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ, ರಾಜಕಾರಣ ಅತ್ಯಂತ ಬಡವಾಗಿದೆ. ಬಂಗೇರ ಅವರ ಆರೋಗ್ಯ ಚೇತರಿಸಿಕೊಳ್ಳುತ್ತದೆ, ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿಬಿಟ್ಟಿರುವುದು ನನ್ನ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
    ಮಾಜಿ ಸಚಿವ ಜನಾರ್ಧನ ಪೂಜಾರಿ, ಸ್ಪೀಕರ್ ಯು.ಟಿ.ಖಾದರ್ ಮತ್ತು ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.

    ಬೆಳ್ತಂಗಡಿ  ಬಸ್‌ ನಿಲ್ದಾಣಕ್ಕೆ ಬಂಗೇರ ಹೆಸರಿಡಲು ಸರ್ಕಾರ ಸಿದ್ದ

    ಬೆಳ್ತಂಗಡಿ ಬಸ್‌ ನಿಲ್ದಾಣಕ್ಕೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಅವರ ಪ್ರತಿಮೆ ನಿರ್ಮಿಸಿ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಭರವಸೆ ನೀಡಿದರು.

    Click to comment

    Leave a Reply

    Your email address will not be published. Required fields are marked *

    BELTHANGADY

    ಬೆಳ್ತಂಗಡಿ: ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ

    Published

    on

    ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಭಾಜನವಾಗಿದೆ. ಈ ಮೂಲಕ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಪಾತ್ರವಾದ ಕರ್ನಾಟಕದ ಏಕೈಕ ಗ್ರಾಮವೆಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

    ದೇಶದ ಗ್ರಾಮಗಳಲ್ಲಿ ಸ್ಪರ್ಧಾತ್ಮಕತೆ ಮತ್ತು ಸ್ವಾವಲಂಬನೆಯ ಒಲವು ಹೆಚ್ಚಿಸುವುದಕ್ಕಾಗಿ ಪ್ರವಾಸೋದ್ಯಮ ಸಚಿವಾಲಯವು ಕಳೆದ ವರ್ಷ ‘ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೀಷನ್’ ಆರಂಭಿಸಿತ್ತು. ಇದರ ಅಡಿಯಲ್ಲಿ ಪ್ರತಿ ಕೆಟಗರಿಯಿಂದ ಅತ್ಯುತ್ತಮ ಐದು ಗ್ರಾಮೀಣ ಪ್ರವಾಸೋದ್ಯಮ ಗ್ರಾಮಗಳನ್ನು ಗುರುತಿಸಲಾಗುತ್ತದೆ.

    ಸ್ಪರ್ಧೆಯು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮೂರು ಹಂತಗಳಲ್ಲಿ ನಡೆಯುತ್ತದೆ. ಕುತ್ಲೂರಿನ ಸಾಫ್ಟ್‌ವೇರ್ ಇಂಜಿನಿಯರ್ ಹರೀಶ್ ಡಾಕಯ್ಯ ಅವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಕತಾರ್‌ನಲ್ಲಿ ಕೆಲಸ ಮಾಡುವ ಅದೇ ಗ್ರಾಮದ ಸಂದೀಪ್ ಪೂಜಾರಿ ಮತ್ತು ಶಿವರಾಜ್ ಜತೆಗೂಡಿ ಸ್ನೇಹಿತರೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು

    ಸ್ಪರ್ಧಿಗಳು ಅಪ್​ಲೋಡ್ ಮಾಡಿದ ಫೋಟೊ, ವಿಡಿಯೋಗಳು, ಮಾಹಿತಿಗಳನ್ನು ಪರಿಶೀಲನೆ ಮಾಡಿ ನಂತರ ಗ್ರಾಮಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

    Continue Reading

    BELTHANGADY

    ಬೆಳ್ತಂಗಡಿ: 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ನಗದು ಕಳವು

    Published

    on

    ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ನಗದು ಕಳವು ಗೈದ ಘಟನೆ ಸೆ.24ರಂದು ವರದಿಯಾಗಿದೆ.

    ಬೆಳ್ತಂಗಡಿ ಹಳೇಕೋಟೆ ನಿವಾಸಿ ಪ್ರಸನ್ನ ಕುಮಾರ್ ಎಂಬವರ ಮನೆಯಿಂದ ಈ ಕಳ್ಳತನ ನಡೆಸಲಾಗಿದೆ. ಸೆ. 13ರಿಂದ ಸೆ.24 ರ, ಬೆಳಿಗ್ಗಿನ ಜಾವದ ಅವಧಿಯಲ್ಲಿ ಕಳ್ಳರು ಈ ಕೃತ್ಯ ನಡೆಸಲಾಗಿದೆ.

    ಮನೆಯೊಳಗೆ ಪ್ರವೇಶಿಸಿದ ಕಳ್ಳರು ಮನೆಯ ಹಾಲ್ ನ ಟಿ.ವಿ ಸ್ಟಾಂಡ್ ನಲ್ಲಿಟ್ಟಿದ್ದ ರೂಪಾಯಿ 5,05,000 ಮೌಲ್ಯದ ಚಿನ್ನಾಭರಣಗಳು ಹಾಗೂ ರೂ. 500000/- ನಗದು ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡಿದ್ದಾರೆ.

    ಈ ಬಗ್ಗೆ ಪ್ರಸನ್ನ ಕುಮಾರ್ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 82/2024 ಕಲಂ: 305 BNS ರಂತೆ ಪ್ರಕರಣ ದಾಖಲಾಗಿರುತ್ತದೆ.

    Continue Reading

    BELTHANGADY

    ಬೆಳ್ತಂಗಡಿ : ನೇಣು ಬಿಗಿದು ದಂಪತಿ ಆತ್ಮ*ಹತ್ಯೆ

    Published

    on

    ಬೆಳ್ತಂಗಡಿ : ದಂಪತಿ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದುಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಆತ್ಮ*ಹತ್ಯೆ ಮಾಡಿಕೊಂಡವರು.


    ಮನೆ ಸಮೀಪ ಇರುವ ಕಾಡಿನಲ್ಲಿ ದಂಪತಿ ನೇ*ಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ನೋಣಯ್ಯ ಪೂಜಾರಿ ತಲೆ ನೋವಿನಿಂದ ಬಳಲುತ್ತಿದ್ದು, ಬೇಬಿ ಅವರಿಗೆ ಮಕ್ಕಳಿಲ್ಲದ ಕೊರಗು ಇತ್ತು ಎಂದು ತಿಳಿದು ಬಂದಿದೆ.
    ನೋಣಯ್ಯ ಪೂಜಾರಿಯವರಿಗೆ ಇದು ಎರಡನೇ ವಿವಾಹವಾಗಿದ್ದು , ಮೊದಲ ಪತ್ನಿ 10 ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ಮೊದಲ ಪತ್ನಿಗೆ 5 ಜನ ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಆತ್ಮ*ಹತ್ಯೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending