Tuesday, October 19, 2021

ಕುದ್ರೋಳಿ ಕ್ಷೇತ್ರಕ್ಕೆ ಸಿಎಂ ಭೇಟಿ: ಶಾಲು ಹೊದಿಸಿ ಗೌರವಿಸಿದ ಪೂಜಾರಿ

ಮಂಗಳೂರು:ಕರಾವಳಿ ಭೇಟಿಯಲ್ಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಇಂದು ಸಂಜೆ ದಸರಾ ಮಹೋತ್ಸವ ನಡೆಯುತ್ತಿರುವ ಮಂಗಳೂರಿನ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳನ್ನು ದೇವಳದ ಆಡಳಿತ ಮಂಡಳಿ ಆದಾರದಿಂದ ಬರಮಾಡಿಕೊಂಡಿತು. ಶ್ರೀ ದೇವರ ದರ್ಶನದ ಬಳಿಕ ಶಾರದ ಮಾತೆಗೆ ಆರತಿ ಎತ್ತಿ ದೇಪ ಬೆಳಗಿದ ಮುಖ್ಯಮಂತ್ರಿಗಳು ಬಳಿಕ ದೇವಸ್ಥಾನ ನವೀಕರಣದ ರೂವಾರಿ ಹಿರಿಯ ರಾಜಕಾರಣಿ ಬಿ. ಜನಾರ್ದನ ಪೂಜಾರಿ ಅವರೊಂದಿಗೆ ಆತ್ಮೀಯವಾಗಿ ಮಾತನಾಡಿ ಆಶೀರ್ವಾದ ಪಡೆದುಕೊಂಡರು .

ಇದೇ ವೇಳೆ ಮಾಜಿ ಕೇಂದ್ರ ಸಚಿವ  ಜನಾರ್ದನ ಪೂಜಾರಿ ಅವರು ಸಿಎಂ ಗೆ ಶಾಲು ಹೊದಿಸಿ ಗೌರವಿಸಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೊಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಶ್ರೀ ಕುದ್ರೋಳಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಕಾರ್ಯದರ್ಶಿ ಪದ್ಮರಾಜ್ ಮೊದಲಾದವರು ಉಪಸ್ಥಿತರಿದ್ದರು.

 

 

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...