Saturday, September 18, 2021

ಸಿಎಂ ರಾಜೀನಾಮೆ ಸುದ್ದಿ ತಿಳಿದು ಅಭಿಮಾನಿ ಆತ್ಮಹತ್ಯೆ

ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದರಿಂದ ತೀವ್ರ ಬೇಸರಗೊಂಡ ಅಭಿಮಾನಿಯೊಬ್ಬ ಇಂದು ಮುಂಜಾನೆ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರವಿ(35) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ತೀರಾ ಬೇಸರದಿಂದ ಇದ್ದ ರವಿ ಮಂಗಳವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಅತಿರೇಕದ ಅಭಿಮಾನ ಬೇಡ: ಯಡಿಯೂರಪ್ಪ ಟ್ವಿಟ್ಟರ್‌ನಲ್ಲಿ ಮನವಿ
ರಾಜಕಾರಣದಲ್ಲಿ ಏರಿಳಿತಗಳು ಸಹಜ, ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು. ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವಿಟ್ಟರ್‌ನಲ್ಲಿ ಮನವಿ ಮಾಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...