Connect with us

DAKSHINA KANNADA

ಸಿ.ಎನ್.ಜಿ ಇಂಧನದ ಬೆಲೆ ಇಳಿಕೆಯ ಮುನ್ಸೂಚನೆ ನೀಡಿದ ದ.ಕ ಜಿಲ್ಲಾಧಿಕಾರಿ

Published

on

ಮಂಗಳೂರು: ಮುಂಬರುವ ದಿನಗಳಲ್ಲಿ ಸಿ.ಎನ್.ಜಿ ಇಂಧನ ಆಧಾರಿತ ವಾಹನಗಳು ಹೆಚ್ಚಾಗುವ ಸಾಧ್ಯತೆಗಳಿದ್ದು, ಅದರ ಇಂಧನದ ಮಾರಾಟದ ಪ್ರಮಾಣವೂ ಅಧಿಕವಾಗುವ ಸಂಭವವಿರುವುದರಿಂದ ಸಿ.ಎನ್.ಜಿ ಇಂಧನದ ಬೆಲೆಯಲ್ಲಿಯೂ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆಶಯ ವ್ಯಕ್ತಪಡಿಸಿದರು.

ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಎನ್‍ಜಿ ಇಂಧನದ ಕೊರತೆ, ಬೇಡಿಕೆ, ಪೂರೈಕೆ ಹಾಗೂ ಬೆಲೆ ಏರಿಕೆಯ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಅಧಿಕಾರಿಗಳ ವಿಶೇಷ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ಸಿ.ಎನ್.ಜಿ ಇಂಧನ ಪ್ರತಿ ಕೆ.ಜಿ.ಗೆ 63 ರೂ.ಗಳಿವೆ, ಅದನ್ನು ಕೆ.ಜಿಗೆ 57 ರೂಪಾಯಿಗೆ ಇಳಿಕೆ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಸಿ.ಎನ್.ಜಿ ಬಳಕೆದಾರರ ಸಂಘ ಹಾಗೂ ಮಂಗಳೂರು ನಾಗರೀಕ ಸಮಿತಿಯ ಸದಸ್ಯರು ಮನವಿ ಮಾಡಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿಯವರು ಇಂಧನ ಬೆಲೆ ಕಡಿಮೆಯಾಗುವ ಭರವಸೆ ನೀಡಿದರು.

ಅಡ್ಯಾರ್ ಬಳಿಯಲ್ಲಿರುವ ಸಿ.ಎನ್.ಜಿ ಬಂಕ್‍ನಲ್ಲಿ ಕಂಪ್ರೆಸರ್ ವ್ಯವಸ್ಥೆ ಇಲ್ಲದ ಕಾರಣ ವಾಹನಗಳಿಗೆ ಇಂಧನ ತುಂಬುವಾಗ ಹೆಚ್ಚಿನ ಸಮಯ ಹಿಡಿಯುತ್ತಿದೆ ಎಂದು ಸಿ.ಎನ್.ಜಿ ಬಳಕೆದಾರರ ಸಂಘದ ಸದಸ್ಯರು ಸಭೆಯಲ್ಲಿ ಪ್ರಸ್ತಾಪಿಸಿದಾಗ,

ಮುಂದಿನ ದಿನಗಳಲ್ಲಿ ಕಂಪ್ರೆಸರ್ ವ್ಯವಸ್ಥೆ ಅಳವಡಿಸಿಕೊಳ್ಳಲಾಗುವುದು ಎಂದು ಗೇಲ್, ಬಿ.ಪಿ.ಸಿ.ಎಲ್. ಅಧಿಕಾರಿಗಳು ತಿಳಿಸಿದರು.

ಪಣಂಬೂರಿನಲ್ಲಿರುವ ಸಿ.ಎನ್.ಜಿ ಗ್ಯಾಸ್ ಮದರ್ ಸ್ಟೇಷನ್‍ನಲ್ಲಿ ವಾಹನಗಳ ಇಂಧನ ಭರ್ತಿ ಮಾಡಿಕೊಳ್ಳಲು ಯಾವುದೇ ಸಮಸ್ಯೆ ಇಲ್ಲ ಎಂದು ಗೇಲ್ ಸಂಸ್ಥೆಯ ಮ್ಯಾನೇಜರ್ ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿರುವ ಇತರ ಸಿ.ಎನ್.ಜಿ ಬಂಕ್‍ಗಳಲ್ಲಿ ಸಿಲಿಂಡರ್ ಮೂಲಕ ಇಂಧನವನ್ನು ಪೂರೈಕೆ ಮಾಡುತ್ತಿರುವುದರಿಂದ ಪೂರ್ಣ ಪ್ರಮಾಣದಲ್ಲಿ ಯಾವುದೇ ಕೊರತೆಯುಂಟಾಗದಂತೆ ಬೇಡಿಕೆಯನುಸಾರವಾಗಿ ಹೆಚ್ಚಿನ ಸಿಲಿಂಡರ್‌ಗಳನ್ನು ಒದಗಿಸಲು ವ್ಯವಸ್ಥೆ ಮಾಡಿಕೊಳ್ಳುವಂತೆ ಗೇಲ್, ಬಿ.ಪಿ.ಸಿ.ಎಲ್, ಐ.ಓ.ಸಿ.ಎಲ್ ಹಾಗೂ ಎಂ.ಆರ್.ಪಿ.ಎಲ್‍ನ ಮ್ಯಾನೇಜರ್‌ಗಳಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ರಮೇಶ್ ಎಂ ವರ್ಣೇಕರ್, ಒ.ಎನ್.ಜಿ.ಸಿ, ಬಿ.ಪಿ.ಸಿ.ಎಲ್, ಎಂ.ಆರ್.ಪಿ.ಎಲ್.ನ ಸಂಸ್ಥೆಯ ಅಧಿಕಾರಿಗಳು,

ದಕ್ಷಿಣ ಕನ್ನಡ ಜಿಲ್ಲಾ ಸಿಎನ್ ಜಿ ಬಳಕೆದಾರರ ಸಂಘ ಹಾಗೂ ಮಂಗಳೂರು ನಾಗರಿಕ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.

DAKSHINA KANNADA

ದಂತ ವೈದ್ಯೆಯಾಗಿ ಸೇವೆ ಆರಂಭದ ದಿನವೇ ವಿಧಿಯಾಟ..! ಯುವ ವೈದ್ಯೆ ಸಾ*ವು..!

Published

on

ಮಂಗಳೂರು : ಆಕೆ ಆರೋಗ್ಯವಾಗಿದ್ದು, ಇನ್ನೊಬ್ಬರ ಆರೋಗ್ಯ ವಿಚಾರಿಸುವ ವೈದ್ಯೆಯಾಗಿದ್ದವರು. ದಂತ ವೈದ್ಯಕೀಯ ಪದವಿ ಮುಗಿಸಿ ಇನ್ನೇನು ಕೆಲಸಕ್ಕೆ ಸೇರಬೇಕು ಅಂತ ಒಂದು ಕ್ಲಿನಿಕ್‌ಗೆ ಜಾಯಿನ್ ಆಗಿದ್ದಾರೆ. ಆದ್ರೆ ದುರಾದೃಷ್ಟ ಅಂದ್ರೆ ಕೆಲಸಕ್ಕೆ ಜಾಯಿನ್ ಆಗುವ ದಿನವೇ ಆಕೆ ಇಹಲೋಕ ತ್ಯಜಿಸಿದ್ದಾರೆ. ಉಳ್ಳಾಲ ತಾಲೂಕಿನ ನರಿಂಘಾನ ಗ್ರಾಮದ ಆಳ್ವರಬೆಟ್ಟು ನಿವಾಸಿ 24 ವರ್ಷದ ಸ್ವಾತಿ ಶೆಟ್ಟಿ ಇಹಲೋಕ ತ್ಯಜಿಸಿದ ವೈದ್ಯೆಯಾಗಿದ್ದಾರೆ. ಉಳ್ಳಾಲ ತಾಲೂಕಿನ ನರಿಂಗಾನ‌ ಗ್ರಾಮದ ಆಳ್ವರಬೆಟ್ಟು ನಿವಾಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ, ಶಾಂತಿಪಳಿಕೆ ಶ್ರೀ ಮಹಾಮ್ಮಾಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಣ್ಣ ಶೆಟ್ಟಿ ಆಳ್ವರಬೆಟ್ಟು ಹಾಗೂ ಜ್ಯೋತಿ ಶೆಟ್ಟಿ ದಂಪತಿ ಪುತ್ರಿ ಇವರು.

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಮುಗಿಸಿ ಮಂಗಳವಾರದಿಂದ(16-04-2024) ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ಕೆಲಸಕ್ಕೆ ಜಾಯಿನ್ ಆಗುವವರಿದ್ದರು. ಹೀಗಾಗಿ ಸೋಮವಾರ (15-04-2024) ಸಂಜೆ ಪಾಂಡೇಶ್ವರದ ಪಿಜಿ ಬಂದು ಜಾಯಿನ್ ಆಗಿದ್ದರು. ಮರುದಿನ ಹೊಸ ಕೆಲಸಕ್ಕೆ ಹೋಗುವ ಕಾರಣ ಸಾಕಷ್ಟು ಎಕ್ಸೈಟ್ ಆಗಿದ್ದ ಸ್ವಾತಿ ತಂದೆ ತಾಯಿ ಜೊತೆ ಫೋನ್ ಮೂಲಕ ಮಾತನಾಡಿದ್ದರು. ಈ ವೇಳೆ ವಿಪರೀತ ತಲೆನೋವು ಕಾಣಿಸಿಕೊಂಡ ಕಾರಣ ಬೇಗನೆ ಮಲಗುವುದಾಗಿ ಹೇಳಿ ಸ್ವಾತಿ ನಿದ್ರೆಗೆ ಜಾರಿದ್ದರು. ಈ ವೇಳೆ ರೂಮ್ ಮೇಟ್ ಕೂಡಾ ಜೊತೆಯಲ್ಲಿ ಇದ್ದರಾದ್ರೂ ತಲೆನೋವಿನ ಕಾರಣ ತೊಂದರೆ ಕೊಡದೆ ಅವರೂ ಕೂಡಾ ಮಲಗಿದ್ದರು. ಮುಂಜಾನೆ ಸ್ವಾತಿ ಎದ್ದಿಲ್ಲ ಅನ್ನೋ ಕಾರಣಕ್ಕೆ ಅವರನ್ನು ಅಲುಗಾಡಿಸಲು ಹೋದಾಗ ಮೈ ತಣ್ಣಗಾಗಿರುವುದು ಗೊತ್ತಾಗಿದೆ.  ತಕ್ಷಣ ಅಂಬ್ಯುಲೆನ್ಸ್ ಮೂಲಕ ನಗರದ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಅಷ್ಟರಲ್ಲಾಗಲೇ ಅವರು ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ವಾತಿ ಅವರಿಗೆ ಅಪರೂಪಕ್ಕೆ ತಲೆ ನೋವು ಕಾಣಿಸಿಕೊಳ್ಳುತ್ತಿತ್ತು. ಆದ್ರೆ ಅವರ ಈ ಧಿಡೀರ್ ಸಾವಿಗೆ ಕಾರಣ ಏನು ಅನ್ನೋದು ಇನ್ನಷ್ಟೇ ಗೊತ್ತಾಗಬೇಕಾಗಿದೆ.

 

 

Continue Reading

DAKSHINA KANNADA

ದೇಶದಲ್ಲಿ ಮೊದಲ ಬಾರಿಗೆ QR ಕೋಡ್ ವೋಟರ್ ಸ್ಲಿಪ್

Published

on

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿ ಮತದಾರರಿಗೆ ಕ್ಯೂ ಆರ್‌ ಕೋಡ್‌ ಹೊಂದಿರುವ ವೋಟರ್‌ ಸ್ಲಿಪ್‌ ನೀಡಲಾಗುವುದು.

ರಾಜ್ಯದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತಗಟ್ಟೆ ಸುಲಭವಾಗಿ ಹುಡುಕಲು ಸಾಧ್ಯವಾಗದಂತೆ ಮನೆ ಮನೆಗೆ ನೀಡಲಾಗುವ ವೋಟರ್‌ ಸ್ಲಿಪ್‌ ಗಳಲ್ಲಿ ಮತಗಟ್ಟೆಯ ಕ್ಯೂ ಆರ್‌ ಕೋಡ್‌ ಮುದ್ರಿಸಲಾಗಿದೆ.

ನಗರದ ನಿವಾಸಿಗಳು ಕ್ಯೂ ಆರ್‌ ಕೋಡ್‌ ಮೂಲಕ ತಮ್ಮ ಮತಗಟ್ಟೆಯನ್ನು ಸುಲಭವಾಗಿ ಗುರುತಿಸಬಹುದಾಗಿದೆ. ಮತದಾರರ ಮಾಹಿತಿ ಚೀಟಿಯನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ನೋಂದಾಯಿತ ಎಲ್ಲಾ ಮತದಾರರಿಗೆ ಒದಗಿಸಲಾಗುವುದು.

Continue Reading

DAKSHINA KANNADA

ಒಂದು ತಿಂಗಳಿನಿಂದ ಮೊಬೈಲ್‌ ಫೋನ್‌ ಸಂಪರ್ಕವಿಲ್ಲದೆ ಪರದಾಡುತ್ತಿದ್ದಾರೆ ಈ ಜನರು..!!

Published

on

ಉಡುಪಿ: ಜಿಲ್ಲೆಯ ಕಟಪಾಡಿ ಪೇಟೆ ಸುತ್ತಮುತ್ತಲಿನ ಒಂದೂವರೆ ಕಿ.ಮೀ. ವ್ಯಾಪ್ತಿಯಲ್ಲಿ ಕಳೆದ ಒಂದು  ತಿಂಗಳಿನಿಂದ ಮೊಬೈಲ್ ನೆಟ್ವರ್ಕ್ ಸಂಪೂರ್ಣ ಸ್ಥಗಿತವಾಗಿದ್ದು, ಖಾಸಗಿ ಕಂಪೆನಿಗಳ ಮೊಬೈಲ್ ಫೋನ್ ಮತ್ತು ಇಂಟರ್‌ನೆಟ್ ಬಳಕೆದಾರರು ತೀವ್ರ ಅಡಚಣೆ ಅನುಭವಿಸುತ್ತಿದ್ದಾರೆ.

katapadi

ಮೊಬೈಲ್ ಕಂಪೆನಿ ಹಾಗೂ ಟವರ್ ಅಳವಡಿಸಲಾಗಿರುವ ಜಾಗದ ಮಾಲೀಕರ ನಡುವಿನ ಒಪ್ಪಂದ ಮುಗಿದ ಹಿನ್ನೆಲೆಯಲ್ಲಿ ಏರ್‌ಟೆಲ್, ವಿಐ ಮತ್ತು ಜಿಯೋ ಬಳಕೆದಾರರಿಗೆ ನೆಟ್ ವರ್ಕ್ ಸಿಗದಂತಾಗಿದೆ. ಫೋನ್ ಕರೆ ಮಾಡಲು, ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ, ಆನ್‌ಲೈನ್ ಹಣಕಾಸಿನ ವ್ಯವಹಾರ, ವರ್ಕ್ ಫ್ರಮ್ ಹೋಮ್, ಕಚೇರಿಯ ದೈನಂದಿನ ಕೆಲಸ ನಿರ್ವಹಿಸಲು ಕಷ್ಟಪಡುತ್ತಿದ್ದು, ಜನರ ಗೋಳು ಕೇಳುವವರೇ ಇಲ್ಲವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಮೊಬೈಲ್ ಸೇವೆ ಒದಗಿಸುವ ಕಂಪೆನಿಗಳು ಟವರ್ ಲಭ್ಯವಿಲ್ಲದೆ ನಾವೇನೂ ಮಾಡಲಾಗುತ್ತಿಲ್ಲ. ಸಮೀಪದಲ್ಲಿ ಪರ್ಯಾಯ ಜಾಗವೂ ಸಿಗುತ್ತಿಲ್ಲ ಎಂದು ಹೇಳುತ್ತಿವೆ. ಏರ್‌ಟೆಲ್ ಸಂಸ್ಥೆಯ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ‘ಪರ್ಯಾಯ ಟವರ್‌ಗೆ ವ್ಯವಸ್ಥೆಯಾಗದೆ ಏನೂ ಮಾಡುವಂತಿಲ್ಲ, ಪರ್ಯಾಯ ಜಾಗದ ವ್ಯವಸ್ಥೆ ಆದಲ್ಲಿ ಟವರ್ ನಿರ್ಮಾಣ ಮಾಡುತ್ತೇವೆ’ ಎಂದು ಹೇಳುತ್ತಿದ್ದಾರೆ.

READ MORE..; ಅರ್ಚಕರಿಂದಲೇ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ..!! ವಿಡಿಯೋ ವೈರಲ್

ನೆಟ್ ವರ್ಕ್ ಸಿಗದೆ ಹೈರಾಣಾಗಿರುವ ಸ್ಥಳೀಯರು ಮೊಬೈಲ್ ಸೇವೆ ಕಲ್ಪಿಸುವ ಸಂಸ್ಥೆಗಳ ವಿರುದ್ಧ – ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಜನರಲ್ಲಿ ಕಂಪೆನಿ ವಿರುದ್ದ ಆಕ್ರೋಶ ಹೆಚ್ಚುತ್ತಿದೆ. ಜಾಗದ ಮಾಲೀಕರು ಮತ್ತು ನೆಟ್ವರ್ಕ್ ಸಂಸ್ಥೆಗಳು ಪರಸ್ಪರ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳ ಬೇಕು ಎಂದು ಒತ್ತಾಯಿಸು ತ್ತಿರುವ ಸ್ಥಳೀಯರು ಸಂಘಟಿತ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

 

Continue Reading

LATEST NEWS

Trending