ಉಡುಪಿ: ಬೈಕ್ ಸವಾರನ ಅಜಾಗರೂಕತೆಯಿಂದ ಚಲಿಸುತ್ತಿದ್ದ ಬೈಕ್ ನ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ವರಂಗ ಗ್ರಾಮದ ಮೈಲುಕಲ್ಲು ಎಂಬಲ್ಲಿ ನಡೆದಿದೆ.
ಸುನೀತ್ (45) ಎಂಬವರು ಬೈಕ್ ನಿಂದ ಕೆಳಗೆ ಬಿದ್ದು ಮೃತಪಟ್ಟ ಮಹಿಳೆಯಾಗಿದ್ದಾರೆ.
ಸುನೀತಾ ಅವರು ಕಾರ್ಕಳ ತಾಲೂಕಿನ ಅಜೆಕಾರಿನ ವರಂಗ ಕಡೆಯಿಂದ ಉಪ್ಪಳ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಳೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಬೈಕ್ ಸವಾರ ದಿವಾಕರ ಅವರ ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.