Thursday, March 4, 2021

ಸಮುದ್ರದಲ್ಲಿ ಮುಳುಗುತ್ತಿದ್ದ ಉಡುಪಿಯ ಬೋಟ್ ರಕ್ಷಣೆ : 8 ಮಂದಿಯ ಜೀವ ಉಳಿಸಿದ ಕೋಸ್ಟ್ ಗಾರ್ಡ್..!

ಸಮುದ್ರದಲ್ಲಿ ಮುಳುಗುತ್ತಿದ್ದ ಉಡುಪಿಯ ಬೋಟ್ ರಕ್ಷಣೆ : 8 ಮಂದಿಯ ಜೀವ ಉಳಿಸಿದ ಕೋಸ್ಟ್ ಗಾರ್ಡ್

ಕಾರವಾರ : ಮೀನುಗಾರಿಕೆಗೆ ತೆರಳಿದ್ದ ಬೋಟ್ ತಳಭಾಗದ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗುತ್ತಿದ್ದ ಎಂಟು ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಕಾರವಾರ ಸಮುದ್ರದಲ್ಲಿ ರಕ್ಷಿಸಿದ್ದಾರೆ.

ಇಂಡಿಯನ್ ಕೋಸ್ಟ್ ಗಾರ್ಡ್ ಮತ್ತು ಕರಾವಳಿ ಕಾವಲು ಪಡೆ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಟು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ಉಡುಪಿ ಮಲ್ಪೆಯ ಸೌಪರ್ಣಿಕಾ ಹೆಸರಿನ ಬೋಟ್ ಭಾನುವಾರ ಮೀನುಗಾರಿಕೆಗೆ ತೆರಳಿದೆ.

ಕಾರವಾರ ಭಾಗದಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ತಳಭಾಗದಲ್ಲಿ ಫೈಬರ್ ಒಡೆದು ಬೋಟ್ ಮುಳುಗುವ ಹಂತಕ್ಕೆ ತಲುಪಿದೆ. ಮೀನುಗಾರರು ರಕ್ಷಣೆಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್ ಗಾರ್ಡ್ ಸಿಬ್ಬಂದಿ ಎಂಟು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...