Connect with us

    DAKSHINA KANNADA

    ಕರಾವಳಿ ಭಾಗಗಳಿಗೆ ಇಂದಿನಿಂದ 3 ದಿನ ಹೈ ಅಲರ್ಟ್ : ಮೀನುಗಾರರಿಗೆ ಎಚ್ಚರಿಕೆ…!

    Published

    on

    ಮಂಗಳೂರು: ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರಿ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.16 ರಿಂದ 19 ರ ವರೆಗೆ ವಾಯುಭಾರ ಕುಸಿತವಾಗಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಳವಾಗುವ ಸಾಧ್ಯತೆಯಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

    ತುಸು ಕಾಲ ಸುಮ್ಮನಿದ್ದ ವರುಣ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ. ಸತತ 18 ತಾಸು ಸುರಿದ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ತತ್ತರಿಸಿದೆ. ರಸ್ತೆಗಳು ನದಿಯಂತಾಗಿದೆ. ಉಷ್ಣಾಂಶ 6 ಡಿಗ್ರಿ ಕುಸಿತ ಕಂಡಿದೆ. ಮನೆಗಳಿಗೆ ನೀರು ನುಗ್ಗಿದೆ.

    ಇನ್ನೊಂದು ಕಡೆಯಲ್ಲಿ ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಮುಂದಿನ ನಾಲ್ಕೈದು ದಿನಗಳ ಕಾಲ ಭಾರಿ ಮಳೆ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ವಾಯುಭಾರ ಕುಸಿತದಿಂದ ಮಳೆ ಹೆಚ್ಚಳವಿದೆ ಎನ್ನುವ ಮಾಹಿತಿ ಆಧರಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ.

    ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ನೀರು ಮತ್ತು ತಗ್ಗು ಪ್ರದೇಶದಲ್ಲಿ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಮಂಗಳವಾರ (ಅ.16) ನಗರದ ಕೆಲವು ಭಾಗದಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದ್ದು, ನಿರಂತರವಾಗಿ ಜಿಲ್ಲೆಯ ನಾನಾ ಭಾಗದಲ್ಲಿ ತುಂತುರು ಮಳೆ ದಿನವಿಡೀ ಕಾಣಿಸಿಕೊಂಡಿದೆ.

    ಗುರುವಾರ (ಅ.17) ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಹಾಗೂ ವಿಜಯನಗರ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೊಅಲರ್ಟ್‌ ನೀಡಲಾಗಿದೆ.

     

    DAKSHINA KANNADA

    ಮಾಡೂರು : ಮರಕ್ಕೆ ಸ್ಕೂಟರ್ ಡಿ*ಕ್ಕಿ; ಸವಾರ ಸಾ*ವು

    Published

    on

    ಮಾಡೂರು : ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಮರಕ್ಕೆ ಡಿ*ಕ್ಕಿ ಹೊಡೆದು ಮೃ*ತಪಟ್ಟಿರುವ ಘಟನೆ ಮಾಡೂರು ಶಾರದಾ ನಗರ ಎಂಬಲ್ಲಿ  ಬುಧವಾರ(ಅ.16) ಸಂಭವಿಸಿದೆ. ಮಾಡೂರು ನಿವಾಸಿ ನಾಗೇಶ್(51) ಮೃತರು.

    ಮೃ*ತರು ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಬಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ರಜೆಯಿದ್ದ ಕಾರಣ ಮನೆಗೆ ಬೀರಿ ಪೇಟೆಯಿಂದ ತೆಂಗಿನಕಾಯಿ ತರುವ ಸಂದರ್ಭ ಘಟನೆ ಸಂಭವಿಸಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಇದನ್ನೂ ಓದಿ : WATCH : ಓವರ್ ಟೇಕ್ ಮಾಡಲು ಹೋಗಿ ಬೈಕ್ ಗಳ ನಡುವೆ ಅಪಘಾ*ತ; ಭ*ಯಾನಕ ವೀಡಿಯೋ ವೈರಲ್

    ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಎಎಸ್ಐ ಯಶವಂತ್ ಸ್ಥಳಕ್ಕಾಗಮಿಸಿ, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

     

    Continue Reading

    DAKSHINA KANNADA

    WATCH : ಓವರ್ ಟೇಕ್ ಮಾಡಲು ಹೋಗಿ ಬೈಕ್ ಗಳ ನಡುವೆ ಅಪಘಾ*ತ; ಭ*ಯಾನಕ ವೀಡಿಯೋ ವೈರಲ್

    Published

    on

    ಬೆಳ್ತಂಗಡಿ : ಗುರುವಾಯನ ಕೆರೆಯ ಬಳಿ ಇರುವ ಶೆಣೈ ಹೊಟೇಲ್ ಮುಂಭಾಗದಲ್ಲಿ ಎರಡು ಬೈಕ್ ನಡುವೆ ಅಪಘಾ*ತ ಸಂಭವಿಸಿದೆ.  ಓವರ್ ಟೇಕ್ ಮಾಡಲು ಹೋಗಿ ಈ ದುರಂ*ತ ನಡೆದಿದೆ.

    ಘಟನೆಯಲ್ಲಿ ಇಬ್ಬರಿಗೆ ಗಾ*ಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾ*ತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

     

    Continue Reading

    DAKSHINA KANNADA

    ಜಿಲ್ಲೆಗಳಲ್ಲಿ ಬೆಲೆ ಇಳುವರಿ ಕುಸಿತ: ಕರಾವಳಿಗೆ ಹೊರ ರಾಜ್ಯದ ಅಕ್ಕಿ ಅನಿವಾರ್ಯ

    Published

    on

    ಉಡುಪಿ/ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಹವಮಾನದ ಬದಲಾವಣೆಗಳಿಂದಾಗಿ ಉತ್ಪಾದನೆಯ ಮೇಲೆ ಭಾರೀ ಹೊಡೆತ ಬಿದ್ದಿದೆ. ಹೊರ ರಾಜ್ಯದ ಅಕ್ಕಿ ಅನಿವಾರ್ಯವಾಗುವ ಸ್ಥಿತಿ ಉದ್ಭವಿಸಿದೆ. ಇದರಿಂದ ಸ್ಥಳೀಯ ಕುಚ್ಚಲಕ್ಕಿ ದರ ಏರಿಕೆಯೂ ಉಂಟಾಗಬಹುದು ಎಂದು ವರದಿಯಅಗಿದೆ.

     

    2023ರ ಮುಂಗಾರಿನಲ್ಲಿ ಜಿಲ್ಲಾದ್ಯಂತ 38 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬಿತ್ತನೆ ಮಾಡಲಾಗಿತ್ತು. ಸಕಾಲದಲ್ಲಿ ಮಳೆ ಬಾರದೇ ಇದ್ದುದ್ದರಿಂದ ರೈತರು ನಿರೀಕ್ಷಿತ ಪ್ರಮಾಣದಲ್ಲಿ ಇಳುವರಿ ಪಡೆದಿರಲಿಲ್ಲ. ಈ ವರ್ಷ ಮಳೆ ಚೆನ್ನಾಗಿ ಬಂದಿದ್ದರೂ ಬಿತ್ತನೆ 35 ಸಾವಿರ ಹೆಕ್ಟೇರ್‌ ದಾಟಿರಲಿಲ್ಲ. ಕಳೆದ ವರ್ಷಕ್ಕಿಂತ ಸುಮಾರು 3 ಸಾವಿರ ಹೆ. ಪ್ರದೇಶದಲ್ಲಿ ಬಿತ್ತನೆ ಕಡಿಮೆಯಾಗಿದೆ. ಹಿಂಗಾರಿನಲ್ಲಿ ಕಳೆದ ವರ್ಷ 5000 ಹೆ. ಬಿತ್ತನೆ ಮಾಡಲಾಗಿತ್ತು. ಈ ವರ್ಷ 5179 ಹೆ. ಏರಿಕೆಯಾಗಿದೆ.

     

    ಇಳುವರಿ ಕುಸಿತ :

    ಮುಂಗಾರು ಮತ್ತು ಹಿಂಗಾರು ಸೇರಿಸಿ ಕಳೆದ ವರ್ಷ 43 ಸಾವಿರ ಹೆ. ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಈ ವರ್ಷ ಅದು 40191 ಹೆ. ಇಳಿದಿದೆ. ಕಳೆದ ವರ್ಷ ಮುಂಗಾರಿನಲ್ಲಿ 1.52 ಲಕ್ಷ ಟನ್‌ ಹಾಗೂ ಹಿಂಗಾರಿನಲ್ಲಿ 0.2 ಲಕ್ಷ ಟನ್‌ ಭತ್ತದ ಇಳುವರಿ ಪಡೆಯಲಾಗಿತ್ತು. ಈ ವರ್ಷ ಮುಂಗಾರಿನಲ್ಲಿ 1.40 ಲಕ್ಷ ಟನ್‌ ಹಾಗೂ ಹಿಂಗಾರಿನಲ್ಲಿ 0.21 ಲಕ್ಷ ಮೆಟ್ರಿಕ್‌ ಇಳುವರಿ ಅಂದಾಜಿಸಲಾಗಿದೆ. ಒಟ್ಟಾರೆಯಾಗಿ ಕಳೆದ ವರ್ಷ 1.72 ಲಕ್ಷ ಟನ್‌ ಭತ್ತದ ಉತ್ಪಾದನೆಯಾಗಿತ್ತು. ಈ ಬಾರಿ 1.61 ಲಕ್ಷ ಟನ್‌ಗೆ ಇಳಿಯುವ ಸಾಧ್ಯತೆಯಿದೆ. ಸುಮಾರು 11 ಲಕ್ಷ ಟನ್‌ ಇಳುವರಿ ಕಡಿಮೆಯಾಗಲಿದೆ ಎನ್ನುತ್ತದೆ ಕೃಷಿ ಇಲಾಖೆ ಲೆಕ್ಕಾಚಾರ.

    ಅಕ್ಕಿ ಉತ್ಪಾದನೆ ಇಳಿಕೆ:

    ಭತ್ತದ ಒಟ್ಟು ಉತ್ಪಾದನೆಯ ಸರಿ ಸುಮಾರು ಶೇ.65ರಷ್ಟು ಅಕ್ಕಿಯಾಗಲಿದೆ. ಉಳಿದ ಶೇ.35ರಷ್ಟು ಕಚ್ಚಾ ರೂಪದಲ್ಲಿ ಸಿಗಲಿದ್ದು, ಪಶು ಆಹಾರಕ್ಕೆ ಹೆಚ್ಚು ಬಳಸಲಾಗುತ್ತದೆ. ಕಳೆದ ವರ್ಷದ ಒಟ್ಟು ಭತ್ತದ ಉತ್ಪಾದನೆಯಲ್ಲಿ 0.98 ಲಕ್ಷ ಟನ್‌ ಅಕ್ಕಿ ಲಭ್ಯವಾಗಿತ್ತು. ಈ ವರ್ಷದ ಅಂದಾಜಿನಲ್ಲಿ 91 ಲಕ್ಷ ಟನ್‌ ಅಕ್ಕಿ ದೊರೆಯಲಿದೆ. ಅಂದರೆ ಅಕ್ಕಿ ಉತ್ಪಾದನೆಯಲ್ಲೂ ಸರಿ ಸುಮಾರು 7 ಲಕ್ಷ ಟನ್‌ ಕಡಿಮೆಯಾಗಲಿದೆ.

    Continue Reading

    LATEST NEWS

    Trending