BANTWAL
ಜಾಗತಿಕ ನಾಯಕನ ಸ್ವಾಗತಕ್ಕೆ ಕರಾವಳಿ ಸಜ್ಜು: 3ರಂದು ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ, 2.5 ಲಕ್ಷಕ್ಕೂ ಅಧಿಕ ಜನರ ನಿರೀಕ್ಷೆ..!
ಪ್ರಧಾನಿ ನರೇಂದ್ರ ಮೋದಿ ಅವರು ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದು, ಮೂಲ್ಕಿ ಬಳಿ ಸಜ್ಜುಗೊಳಿಸಲಾದ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಎಲ್ಲ ಸಿದ್ಧತೆ ನಡೆದಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆ ತಿಳಿಸಿದರು.
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದು, ಮೂಲ್ಕಿ ಬಳಿ ಸಜ್ಜುಗೊಳಿಸಲಾದ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಎಲ್ಲ ಸಿದ್ಧತೆ ನಡೆದಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆ ತಿಳಿಸಿದರು.
ಪಕ್ಷದ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಸಮಾವೇಶದ ಕುರಿತು ಮಾಹಿತಿ ನೀಡಿದರು. ಜಾಗತಿಕ ನಾಯಕನ ಸ್ವಾಗತಕ್ಕೆ ಕರಾವಳಿಯ ಜನತೆ ತವಕದಿಂದ ಕಾಯುತ್ತಿದ್ದು, ಮೋದೀಜಿ ಅವರ ಪ್ರೇರಣಾದಾಯಕ ಮಾತುಗಳನ್ನು ಆಲಿಸಲು ಉತ್ಸಾಹದಿಂದ ಸಜ್ಜಾಗಿದ್ದಾರೆ.
ಪ್ರಧಾನಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿ ಬೂತ್ ಮಟ್ಟದಲ್ಲಿ ಪೂರ್ವಭಾವಿ ಸಭೆಗಳು ನಡೆದಿವೆ. ಪ್ರತಿ ಬೂತ್‌ಗಳಿಂದ ಕಾರ್ಯಕರ್ತರು ಮತ್ತು ಮತದಾರರು ಆಗಮಿಸಲಿದ್ದಾರೆ ಎಂದು ವಿವರ ನೀಡಿದರು.
ಈ ಬಾರಿ ಪ್ರಧಾನಿ ಮೋದಿ ಅವರ ಸಮಾವೇಶವನ್ನು ಗ್ರಾಮಾಂತರ ಪ್ರದೇಶದಲ್ಲಿ ನಡೆಸಲಾಗುತ್ತಿದ್ದು, ನಗರದಲ್ಲಿ ಟ್ರಾಫಿಕ್ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಲಾಗಿದೆ.
ಎರಡೂ ಜಿಲ್ಲೆಗಳ ಮಧ್ಯಭಾಗದಲ್ಲಿ ಕಾರ್ಯಕ್ರಮ ಆಯೋಜಿಸಿರುವುದರಿಂದ ದ.ಕ ಮತ್ತು ಉಡುಪಿ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಆಗಮಿಸಲು ಅನುಕೂಲವಾಗುತ್ತದೆ.
ಈಗಾಗಲೇ ವೇದಿಕೆ ಮತ್ತು ಪೆಂಡಾಲ್ ಕೆಲಸಗಳು ಮುಕ್ತಾಯದ ಹಂತದಲ್ಲಿದ್ದು, ವಾಹನಗಳ ಪಾರ್ಕಿಂಗ್‌ಗೆ ಸಾಕಷ್ಟು ಸ್ಥಳಾವಕಾಶ ಒದಗಿಸಲಾಗಿದೆ.
ಮಂಗಳವಾರ ಮಧ್ಯಾಹ್ನದೊಳಗೆ ಎಲ್ಲ ಕೆಲಸ ಪೂರ್ಣಗೊಂಡು ಇಡೀ ಪ್ರದೇಶವನ್ನು ಭದ್ರತಾ ಸಿಬ್ಬಂದಿಗಳಿಗೆ ಬಿಟ್ಟುಕೊಡಲಾಗುತ್ತದೆ.
ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಸುದರ್ಶನ್ ಅವರು ಮಾಹಿತಿ ನೀಡಿದರು.
ಬೆಳಗ್ಗೆ 9 ಗಂಟೆಯೊಳಗೆ ಬನ್ನಿ:
ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆ ಬೆಳಗ್ಗೆ 10 ಗಂಟೆಗೆ ನಿಗದಿಯಾಗಿದ್ದು, ಆಗಮಿಸುವ ಕಾರ್ಯಕರ್ತರು, ಸಾರ್ವಜನಿಕರು ಬೆಳಗ್ಗೆ 9 ಗಂಟೆಯೊಳಗೆ ಸಮಾವೇಶದ ಸ್ಥಳಕ್ಕೆ ಆಗಮಿಸುವಂತೆ ಸುದರ್ಶನ್ ಅವರು ಮನವಿ ಮಾಡಿದರು.
ಭದ್ರತಾ ಕಾರಣಗಳಿಂದಾಗಿ ಪ್ರಧಾನಿ ಆಗಮಿಸುವ ಹೊತ್ತಿಗೆ ಸಮಾವೇಶದ ಪರಿಸರದಲ್ಲಿ ಸಾರ್ವಜನಿಕರ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗುತ್ತದೆ.
ಹೀಗಾಗಿ ಪ್ರಧಾನಿ ಅವರು ಸ್ಥಳಕ್ಕೆ ಆಗಮಿಸುವ ಮೊದಲೇ ಸಾರ್ವಜನಿಕರು ಸಮಾವೇಶದ ಮೈದಾನದಲ್ಲಿರಬೇಕು ಎಂದು ಅವರು ಮನವಿ ಮಾಡಿದರು.
ಪ್ರಧಾನಿಗೆ ಕುಡ್ಲದ ಆತಿಥ್ಯ:
ಪ್ರಧಾನಿ ನರೇಂದ್ರ ಮೋದಿ ಅವರು ಕರಾವಳಿಯ ತಿಂಡಿ ತಿನಿಸುಗಳನ್ನು ವಿಶೇಷವಾಗಿ ಇಷ್ಟಪಡುತ್ತಿದ್ದು, ಅವರಿಗಾಗಿ ಉಪ್ಪಿಟ್ಟು ಅವಲಕ್ಕಿ, ಮೂಡೆ, ನೀರ್‌ದೋಸೆ ಮುಂತಾದ ಎಲ್ಲ ಬಗೆಯ ಖಾದ್ಯಗಳನ್ನು ಸಿದ್ಧಪಡಿಸಲಾಗುತ್ತಿದೆ.
ಮೂರು ಕಡೆ ಹೆಲಿಪ್ಯಾಡ್:
ದಿಲ್ಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಬಜಪೆಯಿಂದ ಹೆಲಿಕಾಪ್ಟರ್ ಮೂಲಕ ಸಮಾವೇಶದ ಸ್ಥಳಕ್ಕೆ ಆಗಮಿಸುತ್ತಾರೆ.
ಹೆಲಿಕಾಪ್ಟರ್ ಇಳಿಯಲು ಪಣಂಬೂರಿನ ಎನ್‌ಎಂಪಿಎ, ಸುರತ್ಕಲ್‌ನ ಎನ್‌ಐಟಿಕೆ, ಹಾಗೂ ಮೂಲ್ಕಿಯ ಸಸಮಾವೇಶದ ಸ್ಥಳದ ಪಕ್ಕದಲ್ಲಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.
ಪ್ರಧಾನಿ ಮೋದಿ ಅವರ ಸಮಾವೇಶಗಳು ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಒಂದಕ್ಕಿಂತ ಒಂದು ಭರ್ಜರಿ ಯಶಸ್ಸು ಕಾಣುತ್ತಿದೆ.
ಕಾರ್ಯಕರ್ತರು, ಮತದಾರರ ಉತ್ಸಾಹ, ಹುಮ್ಮಸ್ಸು ಇಮ್ಮಡಿಯಾಗುತ್ತಿದೆ. ಮೂಲ್ಕಿಯಲ್ಲಿ ಬುಧವಾರ ನಡೆಯುವ ಸಮಾವೇಶ ಈ ಭಾಗದಲ್ಲಿ ಪಕ್ಷದ ಅಭೂತಪೂರ್ವ ಗೆಲುವಿಗೆ ಮತ್ತಷ್ಟು ಬಲ ತುಂಬಲಿದೆ ಎಂದು ಸುದರ್ಶನ್ ಭರವಸೆ ವ್ಯಕ್ತಪಡಿಸಿದರು.
ಸಮಾವೇಶದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆದ್ದು, ಎರಡೂ ಜಿಲ್ಲೆಗಳ ಒಟ್ಟು 13 ಕ್ಷೇತ್ರಗಳ ಅಭ್ಯರ್ಥಿಗಳೂ ಹಾಜರಿರುತ್ತಾರೆ ಎಂದು ಅವರು ತಿಳಿಸಿದರು.
ಪ್ರಧಾನಿ ಮೋದಿ ಅವರು ಮೂಲ್ಕಿಯ ಸಮಾವೇಶದ ಬಳಿಕ ಅಂಕೋಲಕ್ಕೆ ತೆರಳಲಿದ್ದಾರೆ. ಬಳಿಕ ಕಿತ್ತೂರಿನಲ್ಲಿ ಸಾರ್ವಜನಿಕ ಸಮಾವೇಶ ನಡೆಲಿಸದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಜಿಲ್ಲಾ ಪಂಚಾಯತ್ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಪಕ್ಷದ ಮುಖಂಡರಾದ ಸಂಜಯ್ ಪ್ರಭು ಉಪಸ್ಥಿತರಿದ್ದರು.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
BANTWAL
Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.
ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.
ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.
ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
BANTWAL
Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.
ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.
ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ