DAKSHINA KANNADA
ಗೋ ಹತ್ಯೆ-ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಸರ್ಕಾರದ ನಿಲುವಿಗೆ ಕರಾವಳಿ ಸಂತರ ಖಂಡನೆ..!
ಗೋ ಹತ್ಯೆ-ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಸರ್ಕಾರದ ನಿಲುವನ್ನು ಕರಾವಳಿ ಸಾಧು ಸಂತರು, ಮಠಾಧೀಶರು ತೀವ್ರವಾಗಿ ಖಂಡಿಸಿದ್ದು ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಮಂಗಳೂರು : ಗೋ ಹತ್ಯೆ-ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಸರ್ಕಾರದ ನಿಲುವನ್ನು ಕರಾವಳಿ ಸಾಧು ಸಂತರು, ಮಠಾಧೀಶರು ತೀವ್ರವಾಗಿ ಖಂಡಿಸಿದ್ದು ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಸಭೆ ಸೇರಿದ ಕರಾವಳಿಯ ಸಾಧು ಸಂತರು ಸರ್ಕಾರದ ನಿಲುವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಳಿಕ ಸುದ್ದಿಗೋಷ್ಟಿ ನಡೆಸಿದ ವಿವಿಧ ಮಠಾಧೀಶರು ಗೋಹತ್ಯೆ ನಿಷೇಧ ಕಾಯ್ದೆ ಹಿಂದಕ್ಕೆ ಪಡೆದುಕೊಳ್ಳುವುದು, ಮತಾಂತರ ಕಾಯ್ದೆಯನ್ನು ರದ್ದುಪಡಿಸುವುದು, ಲವ್ ಜಿಹಾದ್ ಪ್ರಕರಣಗಳನ್ನು ಹತ್ತಿಕ್ಕದಿರುವುದು, ಹಿಂದೂ ಸಂಘಟನೆ ನಾಯಕರ ವಿರುದ್ಧ ಗಡೀಪಾರು ಪ್ರಕ್ರಿಯೆ ನಡೆಸುತ್ತಿರುವುದು ಸೇರಿದಂತೆ ರಾಜ್ಯದ ಕಾಂಗ್ರೆಸ್ ಸರಕಾರ ಕೆಲವೊಂದು ಹಿಂದು ವಿರೋಧಿ ನೀತಿಗಳನ್ನು ಕೈಗೊಂಡಿರುವುದು ಸರಿಯಲ್ಲ. ಇದನ್ನು ಇಡೀ ಸಂತ ಸಮುದಾಯ ಖಂಡಿಸುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಣಿಲ ಕ್ಷೇತ್ರದ ಮೋಹನ ದಾಸ ಸ್ವಾಮೀಜಿ, ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10ರ ಬಳಿಕ ನಮ್ಮ ಒಕ್ಕೊರೊಲ ಮನವಿಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ,ರಾಜ್ಯಪಾಲರಿಗೆ, ಗೃಹ ಸಚಿವರಿಗೆ ಸಲ್ಲಿಸುತ್ತೇವೆ.
ನಾವೆಲ್ಲರೂ ಸಂತ ಸಮುದಾಯದ ಒಟ್ಟು ಸೇರಿ ಅವರನ್ನು ಮುಖತಃ ಭೇಟಿ ಮಾಡಲಿದ್ದೇವೆ ಎಂದರು.
ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ನಾವೆಲ್ಲರೂ ಒಟ್ಟು ಸೇರಿ ಹಿಂದು ಸಮುದಾಯದ ಮೇಲೆ ಆಗುವ ಕೆಲವು ಸರಕಾರದ ನಿರ್ಣಯಗೊಳಿಂದ ಗೊಂದಲ ಆಗುವುದರಿಂದ ಸಂತರು ಎಲ್ಲಾ ಒಗ್ಗಟ್ಟಾಗಿ ಹೋರಾಟಕ್ಕೆ ಸಿದ್ಧತೆ ಮಾಡಿದ್ದಾರೆ ಎಂದರು.
ಸಮಾಜಕ್ಕೆ ತೊಂದರೆ ಆದಾಗ ಸಂತ ಸಮುದಾಯ ಒಗ್ಗಟ್ಟಾಗಿ ನಿಲ್ಲುತ್ತದೆ ಎಂದರು.
ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ ಮಾತನಾಡಿ, ಲವ್ ಜಿಹಾದ್‌ಗೆ ಸೂಕ್ತ ಕಡಿವಾಣ ಹಾಕಲು ಪೊಲೀಸರು ಮುಂದಾಬೇಕು.
ಆದರೆ ಆಂಟಿ ಕಮ್ಯೂನಲ್ ವಿಂಗ್ ಮೂಲಕ ಹಿಂದು ಯುವಕರನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ.
ವಿನಾಃ ಕಾರಣ ಹಿಂದೂ ಯುವಕರನ್ನು ಗಡೀಪಾರು ಮಾಡುವ ಬಗ್ಗೆಯೂ ನಮ್ಮ ಗಮನಕ್ಕೆ ಬಂದಿದೆ.
ವಿನಾಕಾರಣ ಹಿಂದು ಯುವಕರಿಗೆ ಕಿರುಕುಳ ನೀಡಿದರೆ ಈ ಬಗ್ಗೆಯೂ ನಾವೂ ತೀವ್ರ ಹೋರಾಟ ಮಾಡಲಿದ್ದೇವೆ ಎಂದರು.
ಸಮಾನ ನಾಗರಿಕ ಸಂಹಿತೆ ವಿಚಾರದಲ್ಲೂ ನಾವು ಜಾಗೃತಿ ಮೂಡಿಸುತ್ತಿದ್ದೇವೆ.
ಹಿಂದು ಸಮಾಜದ ಇಡೀ ನಿರ್ಣಯವನ್ನು ಮಾಡಿಕೊಂಡು ನಾವು ಸಂಘಟಿತರಾಗಿ ಹೋರಾಟ ಮಾಡಲಿದ್ದೇವೆ.
ಎಲ್ಲಾ ಮಠಾಧೀಶರನ್ನೂ ಭೇಟಿ ಮಾಡಿ ಒಕ್ಕೊರಳ ನಿರ್ಣಯ ಮಾಡಿ ಇಡೀ ಕರ್ನಾಟಕ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಸಂತ ಸಮುದಾಯ ಒಕ್ಕೊರಳ ನಿರ್ಣಯ ಮಾಡಿದ್ದೇವೆ ಎಂದರು.
ಹಿಂದುಗಳಿಗೆ ಅನ್ಯಾಯವಾಗುವ ಯಾವುದೇ ವಿಚಾರ ಬಂದಾಗಲೂ ಸಂತ ಸಮುದಾಯ ಒಗ್ಗಟ್ಟಿನಿಂದ ಹೋರಾಟವನ್ನು ಮಾಡಿದ್ದೇವೆ.
ನಮಗೆ ಸರಕಾರದಿಂದ ನ್ಯಾಯ ಸಿಗದೇ ಇದ್ದಲ್ಲಿ ನ್ಯಾಯಾಲಯದ ಮೆಟ್ಟಲೇರಲೂ ಸಂತ ಸಮುದಾಯ ಮುಂದಾಗಲಿದೆ ಎನ್ನುವ ನಿರ್ಣಯವನ್ನು ಮಾಡಿದ್ದೇವೆ ಎಂದರು.
ಕಣಿಯೂರು ಕ್ಷೇತ್ರದ ಮಹಾಬಲ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಪೀಠದ ಶ್ರೀಗಳು, ಈಶ ವಿಠಲದಾಸ ಸ್ವಾಮೀಜಿ, ವಿದ್ಯಾನಂದ ಸರಸ್ವತೀ ಸ್ವಾಮೀಜಿ, ಹಿಂದು ಮುಖಂಡರಾದ ಎಂ ಬಿ ಪುರಾಣಿಕ್, ಪ್ರಕಾಶ್ ಪಿ ಎಸ್ ಮೊದಲಾದವರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
DAKSHINA KANNADA
ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!
ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.
ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
DAKSHINA KANNADA
ಮನೆಯ ಯಜಮಾನನ್ನು ಕಟ್ಟಿ ಹಾಕಿ ನಗ, ನಗದು ದರೋಡೆ- 6 ಜನ ಬಂಧನ..!
ಪುತ್ತೂರು: ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ. 7ರಂದು ನಡೆದಿದ್ದು, ಇದೀಗ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.
ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದಾನೆ.
ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.
ನಸುಕಿನ ಜಾವ ಸುಮಾರು 2 ಗಂಟೆಗೆ ಮನೆಯ ಮುಂದಿನ ಬಾಗಿಲ ಮೂಲಕ ಮನೆಯೊಳಗೆ ನುಗ್ಗಿದ ಸುಮಾರು 8 ಜನರಿದ್ದ ಮುಸುಕುಧಾರಿಗಳ ತಂಡ ಗುರುಪ್ರಸಾದ್ ಅವರನ್ನು ಕಟ್ಟಿ ಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ನಷ್ಟು ಚಿನ್ನವನ್ನು ದರೋಡೆ ಮಾಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದರು.
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!