Connect with us

    LATEST NEWS

    ಜೆ.ಪಿ.ಹೆಗ್ಡೆಗೆ ಉಡುಪಿ-ಚಿಕ್ಕಮಗಳೂರು “ಕೈ” ಟಿಕೇಟ್.!!!

    Published

    on

    ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಯಾವುದೇ ಕಾರಣಕ್ಕೂ ಜಯಪ್ರಕಾಶ್ ಹೆಗ್ಡೆಗೆ ನೀಡಬಾರದು ಎಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೋ ಬ್ಯಾಕ್ ಜೆ.ಪಿ.ಹೆಗ್ಡೆ ಅಭಿಯಾನ ಮಾಡ್ತಾ ಇದ್ದಾರೆ. ಆದ್ರೆ ಈ ಗೋ ಬ್ಯಾಕ್‌ ಅಭಿಯಾನದ ನಡುವೆ ಜೆ.ಪಿ.ಹೆಗ್ಡೆ ಅವರು ಮಂಗಳವಾರ ಕಾಂಗ್ರೆಸ್ ಪಕ್ಷ ಸೇರುವುದರೊಂದಿಗೆ ಟಿಕೆಟ್ ಸಿಗುವುದು ಕೂಡಾ ಪಕ್ಕಾ ಎಂದು ಹೇಳಲಾಗುತ್ತಿದೆ.

    2017 ರಲ್ಲಿ ಬಿಜೆಪಿ ಜೊತೆ ಕೈ ಜೋಡಿಸಿದ್ದ ಜಯಪ್ರಕಾಶ್ ಹೆಗ್ಡೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾಗಿದ್ದರು. ಜಾತಿ ಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ವೇಳೆಗೆ ಅವರು ಮತ್ತೆ ಕಾಂಗ್ರೆಸ್‌ ಸೇರಲು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು. ಈ ಪ್ರಯತ್ನದೊಂದಿಗೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸೋ ಇಂಗಿತ ಕೂಡಾ ವ್ಯಕ್ತಿಪಡಿಸಿದ್ದರು. ಈ ನಡುವೆ ಚಿಕ್ಕಮಗಳೂರಿನಲ್ಲಿ ತನ್ನ ಸಾಧನೆಗಳ ಬಗ್ಗೆ ಪ್ರಚಾರ ಆರಂಭಿಸಿದ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ ಸೇರೋದು ಪಕ್ಕಾ ಎಂದಾದಾಗ ಚಿಕ್ಕಮಗಳೂರು ಕಾಂಗ್ರೆಸ್‌ನಲ್ಲಿ ಆಕ್ರೋಶ ಭುಗಿಲೆದ್ದಿದೆ. ಹೀಗಾಗಿ ಗೋ ಬ್ಯಾಕ್ ಜೆ.ಪಿ.ಹೆಗ್ಡೆ ಅಭಿಯಾನ ಆರಂಭಿಸಿದ ಕಾರ್ಯಕರ್ತರು ಸ್ಥಳೀಯ ಕಾಂಗ್ರೆಸ್‌ ಮುಖಂಡ ಸುಧೀರ್ ಕುಮಾರ್ ಮುರಳ್ಳಿ ಅವರಿಗೆ ಟಿಕೇಟ್ ನೀಡುವಂತೆ ಒತ್ತಡ ಹಾಕಿದ್ದಾರೆ.

    ವೃತ್ತಿಯಲ್ಲಿ ವಕೀಲರಾಗಿ, ರಾಜಕೀಯ ಜೀವನಕ್ಕೆ ಎಂಟ್ರಿ ಕೊಟ್ಟಿದ್ದ ಜಯಪ್ರಕಾಶ್ ಹೆಗ್ಡೆ ಬಳಿಕ ರಾಜಕೀಯದಲ್ಲಿ ಸಿಕ್ಕ ಅವಕಾಶಗಳಲ್ಲೆವನ್ನೂ ಉಪಯೋಗಿಸಿಕೊಂಡಿದ್ದಾರೆ. ಜನತಾದಳ, ಕಾಂಗ್ರೆಸ್‌, ಬಿಜೆಪಿ, ಹೀಗೇ ಎಲ್ಲಾ ಪಕ್ಷಗಳಿಗೆ ಹೋಗಿ ಅಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ಇದೀಗ ಬಿಜೆಪಿಯಿಂದ ಮತ್ತೆ ಕಾಂಗ್ರೆಸ್‌ಗೆ ಹಾರಿರುವ ಜಯಪ್ರಕಾಶ್ ಹೆಗ್ಡೆ ಜನತಾದಳದಿಂದ ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದ ಇವರು, ಬಳಿಕ ಪಕ್ಷೇತರರಾಗಿಯೂ ಬ್ರಹ್ಮಾವರ ಕ್ಷೇತ್ರದಲ್ಲಿ ಗೆಲುವ ಸಾಧಿಸಿದ್ದರು. 1994 ರಲ್ಲಿ ಜನತಾದಳದಿಂದ ಗೆದ್ದು ಆವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಕೂಡಾ ಆಗಿದ್ದರು. ಉಡುಪಿಯನ್ನು ಪ್ರತ್ಯೇಕ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಇವರ ಪರಿಶ್ರಮದ ಫಲವಾಗಿ 1997 ರಲ್ಲಿ ಉಡುಪಿ ಹೊಸ ಜಿಲ್ಲೆಯಾಗಿತ್ತು. ಇದಾದ ಬಳಿಕ 2008 ರಲ್ಲಿ ಕ್ಷೇತ್ರ ಪುನರ್ವಿಗಂಡಣೆಯಾಗಿ ಬ್ರಹ್ಮಾವರ ಕ್ಷೇತ್ರ ಕಣ್ಮರೆಯಾದ ಕಾರಣ ಕಾಂಗ್ರೆಸ್ ಪಕ್ಷ ಸೇರಿದ ಅವರು 2012 ರಲ್ಲಿ ಡಿ.ವಿ.ಸದಾನಂದ ಗೌಡರು ಮುಖ್ಯಮಂತ್ರಿಯಾದ ಹಿನ್ನಲೆಯಲ್ಲಿ  ಉಡುಪಿ – ಚಿಕ್ಕಮಗಳೂರು ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಸುನಿಲ್ ಕುಮಾರ್ ಅವರನ್ನು 45 ಸಾವಿರ ಮತಗಳ ಅಂತರದಿಂದ ಸೋಲಿಸಿ ಕಾಂಗ್ರೆಸ್‌ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಆದ್ರೆ 2014 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆಯವರ ಎದುರು ಸೋಲು ಅನುಭವಿಸಿದ್ದರು. ಬಳಿಕ 2017 ರಲ್ಲಿ ಬಿಜೆಪಿ ಸೇರಿದ್ದ ಜಯಪ್ರಕಾಶ್ ಹೆಗ್ಡೆ ಇದೀಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಈ ಬಗ್ಗೆ ಮಾತುಕತೆ ಮುಗಿದಿದ್ದು, ಈ ಭಾರಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಜಯಪ್ರಕಾಶ್ ಹೆಗ್ಡೆ ಸ್ಪರ್ಧೆ ಮಾಡೋದು ಖಚಿತವಾಗಿದೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending