Thursday, March 23, 2023

ಉತ್ತರ ಪ್ರದೇಶದಲ್ಲಿ ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮೇಲ್ಛಾವಣಿ ಕುಸಿತ – 8 ಮಂದಿ ಮೃತ್ಯು..!

ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ (Uttar Pradesh) ಸಂಭಾಲ್ ಚಂದೌಸಿ ಪ್ರದೇಶದಲ್ಲಿ ನಡೆದಿದೆ.

ಲಕ್ನೋ: ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ (Uttar Pradesh) ಸಂಭಾಲ್ ಚಂದೌಸಿ ಪ್ರದೇಶದಲ್ಲಿ ನಡೆದಿದೆ.

ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮಾಲೀಕರನ್ನು ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಈ ಬಗ್ಗೆ ಮೊರಾಬಾದ್ ಡಿಐಜಿ ಶಲಭ್ ಮಾಥುರ್ ಮಾತನಾಡಿ, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 11 ಮಂದಿಯನ್ನು ರಕ್ಷಿಸಲಾಗಿದೆ.

ಕಟ್ಟಡದಲ್ಲಿ ನೆಲಮಾಳಿಗೆಯಿದ್ದು, ಅಲ್ಲಿಯೂ ಯಾರಾದರೂ ಸಿಲುಕಿಕೊಂಡಿದ್ದಾರಾ ಎಂದು ಹುಡುಕುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಅವಶೇಷಗಳಡಿ ಸಿಲುಕಿರುವ ಜನರನ್ನು ಹುಡುಕಲು ಅಧಿಕಾರಿಗಳು ಸ್ನಿಫರ್ ಡಾಗ್‍ಗಳನ್ನು ಬಳಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಘಟನೆಗೆ ಸಂಬಂಧಿಸಿ ಕೋಲ್ಡ್ ಸ್ಟೋರೇಜ್‍ನ ಮಾಲೀಕ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಜೊತೆಗೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಾಪತ್ತೆಯಾದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ

LEAVE A REPLY

Please enter your comment!
Please enter your name here

Hot Topics

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...