Thursday, March 23, 2023

ಕಾಲೇಜು ಬಸ್‌-ಕ್ಯಾಂಟರ್ ಅಪಘಾತ: ಇಬ್ಬರು ಸ್ಥಳದಲ್ಲೇ ಸ್ಪಾಟ್‌ ಡೆತ್‌, 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗಂಭೀರ

ಅಥಣಿ: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ‌ ಭೀಕರ ರಸ್ತೆ ಅಪಘಾತ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಇಬ್ಬರು ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದೆ.


ಇನ್ನೂ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಬಸ್​​ನಲ್ಲಿ 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ತಿಳಿಸಿದ್ದಾರೆ.


ಘಟನಾ ಸ್ಥಳಕ್ಕೆ ಈಗಾಗಲೇ ಅಥಣಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಬಸ್​ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೊರತೆಗೆಯುತ್ತಿದ್ದಾರೆ. ಈ ವೇಳೆ, ಭಯಗೊಂಡ ವಿದ್ಯಾರ್ಥಿಗಳು ಕಿರುಚಾಟ ನಡೆಸುತ್ತಿದ್ದಾರೆ.

ಅಪಘಾತದ ಸುದ್ದಿ ತಿಳಿದು ಕುಟುಂಬಸ್ಥರು ಕೂಡ ಆತಂಕ್ಕೆ ಒಳಗಾಗಿದ್ದಾರೆ. ಇದರಿಂದ ಸ್ಥಳದಲ್ಲೇ ಜನಜಂಗುಳಿ ತುಂಬಿದ್ದು, ಅವರನ್ನು ‌ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದ ಕುಮಟಾದ ಯುವತಿ ಡಿಡೀರ್ ನಾಪತ್ತೆ..! 

ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು...

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...