Saturday, February 4, 2023

‘ಮೊದಲ ಗಂಡ ಸಾಯ್ತಾನೆ’ ಅನ್ನೋ ಜ್ಯೋತಿಷಿ ಭವಿಷ್ಯಕ್ಕೆ ಲೌವರ್‌ನನ್ನೇ ಮುಗಿಸಿದ ಪ್ರೇಯಸಿ..!

ತಿರುವನಂತಪುರಂ: ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿಯ ಭಂಡ ಭವಿಷ್ಯ ನಂಬಿ ಯುವತಿಯೋರ್ವಳು ತನ್ನ ಪ್ರಿಯಕರನಿಗೆ ಕಷಾಯದಲ್ಲಿ ವಿಷ ಬೆರೆಸಿ ನೀಡಿ ಹತ್ಯೆಗೈದಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.

ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಎಂಬಾತ ಮೃತ ದುರ್ದೈವಿ.


ಗ್ರೀಷ್ಮಾ ಪ್ರಿಯಕರನನ್ನು ಕೊಂದ ಆರೋಪಿ ಯುವತಿ.


ಗ್ರೀಷ್ಮಾ ಮತ್ತು ಶರೋನ್ ಒಂದು ವರ್ಷದಿಂದ ಪ್ರೀತಿಯಲ್ಲಿ ಬಿದ್ದಿದ್ದರು. ಅಲ್ಲದೇ ಮನೆಯವರು ಗ್ರೀಷ್ಮಾಗೆ ಬೇರೆಯವರೊಂದಿಗೆ ಮದುವೆ ನಿಶ್ಚಯ ಮಾಡಿದ್ದರು.

ಫೆಬ್ರವರಿಯಿಂದ ಗ್ರೀಷ್ಮಾ ಹಾಗೂ ಶರೋನ್ ನಡುವೆ ಕೆಲವು ಮನಸ್ತಾಪಗಳು ಪ್ರಾರಂಭವಾಯಿತು. ಹೀಗಿದ್ದರೂ ಇಬ್ಬರೂ ರಿಲೇಶನ್ ಶಿಪ್ ಮಂದುವರೆಸಿದರು. ಆದರೆ ಇತ್ತೀಚೆಗೆ ಇವರಿಬ್ಬರ ನಡುವೆ ಮನಸ್ತಾಪ ಹೆಚ್ಚಾಗಿದ್ದರಿಂದ ಶರೋನ್ ಅನ್ನು ಬಿಡುವ ಸಲುವಾಗಿ, ವಿಷ ನೀಡಿ ಕೊಲ್ಲಲು ನಿರ್ಧರಿಸಿದಳು.

ಮೊದಲಿಗೆ ಸಮಾಧಾನದಿಂದ ಮೃದು ಸ್ವಭಾವದಿಂದ ಬ್ರೇಕ್ ಅಪ್ ಮಾಡಿಕೊಳ್ಳೋಣ ಎಂದು ತಿಳಿಸಿದಳು. ಆದರೆ ಇದಕ್ಕೆ ಶರೋನ್ ರಾಜ್ ನಿರಾಕರಿಸಿದ್ದಾನೆ.

ಅಲ್ಲದೇ ಜ್ಯೋತಿಷಿ ಒಬ್ಬರು ಗ್ರೀಷ್ಮಾ ಜಾತಕದ ಪ್ರಕಾರ, ಆಕೆಯ ಮೊದಲ ಪತಿ ಸಾಯುತ್ತಾನೆ ಎಂದು ಹೇಳಿದ್ದರು. ಇದರಿಂದ ಭಯಗೊಂಡು ಆತನೊಂದಿಗೆ ಬ್ರೇಕ್ ಮಾಡಿಕೊಳ್ಳಲು ಪ್ರಯತ್ನಿಸಿದಳು.

ಲವ್ ಬ್ರೇಕ್ ಅಪ್ ಮಾಡಿಕೊಳ್ಳುವುದಕ್ಕಾಗಿ ಶರೋನ್ ರಾಜ್ ಅನ್ನು ಕೊಂದಿರುವುದಾಗಿ ಸತ್ಯ ಬಾಯ್ಬಿಟ್ಟಿದ್ದಾಳೆ. ಕೊಲೆ ಮಾಡಲು ಮೊದಲೇ ಪ್ರೀ ಪ್ಲಾನ್ ಮಾಡಿದ್ದ ಗ್ರೀಷ್ಮಾ ಅಕ್ಟೋಬರ್ 14 ರಂದು ಶರೋನ್ ರಾಜ್ ಅನ್ನು ಮನೆಗೆ ಕರೆಸಿಕೊಂಡಿದ್ದಳು.

ಈ ವೇಳೆ ಕಷಾಯದೊಂದಿಗೆ ಕೀಟನಾಶಕವನ್ನು ಬೆರೆಸಿ ಕುಡಿಸಿದ್ದಾಳೆ. ಇದಾದ ಬಳಿಕ ಪ್ರಿಯಕರ ವಾಂತಿ ಮಾಡಿಕೊಳ್ಳಲು ಆರಂಭಿಸಿ, ಬಳಿಕ ಸ್ನೇಹಿತನೊಂದಿಗೆ ತೆರಳಿದನು.

ಶರೋನ್‍ಗೆ ಏನು ನೀಡಿದ್ದಾಳೆ ಎಂದು ತಿಳಿದುಕೊಳ್ಳಲು ಆತನ ಸಹೋದರ ಗ್ರೀಷ್ಮಾಗೆ ನಿರಂತರ ಕರೆ ಮಾಡುತ್ತಿದ್ದನು. ಆದರೆ ಭಯದಿಂದ ಏನನ್ನೂ ಕೂಡ ಆಕೆ ಹೇಳಿಕೊಳ್ಳಲಿಲ್ಲ. ಒಂದು ವೇಳೆ ಸತ್ಯ ತಿಳಿಸಿದ್ದರೆ ಆತನನ್ನು ಉಳಿಸಬಹುದಾಗಿತ್ತು.

ಅಕ್ಟೋಬರ್ 25 ರಂದು ಶರೋನ್ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟನು. ಆತನ ಸಾವಿಗೆ ಪ್ರೇಯಸಿಯೇ ಕಾರಣ ಎಂದು ಶರೋನ್ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಪ್ರಕರಣ ಸಂಬಂಧ ಅಕ್ಟೋಬರ್ 20 ರಂದು ಶರೋನ್ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಾನೂ ಯಾರ ಮೇಲೂ ಅನುಮಾನ ಹೊಂದಿಲ್ಲ ಎಂದು ತಿಳಿಸಿ ಕೊನೆಯುಸಿರೆಳೆದಿದ್ದಾನೆ.

ಇದೀಗ 8 ಗಂಟೆಗಳ ವಿಚಾರಣೆಯ ಬಳಿಕ ತಪ್ಪೊಪ್ಪಿಕೊಂಡ ಗ್ರೀಷ್ಮಾಳನ್ನು ತಿರುವನಂತಪುರಂನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ಟೋಬರ್ 25ರಂದು ಈತ ಮೃತಪಟ್ಟಿದ್ದಾನೆ. ಅಕ್ಟೋಬರ್ 31ರಂದು ಎಂಟು ಗಂಟೆಗಳ ಕಾಲ ನಡೆದ ವಿಚಾರಣೆ ಬಳಿಕ ಪ್ರೇಯಸಿಯೇ ತನ್ನ ಪ್ರಿಯಕರನನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ.

 

 

 

 

 

LEAVE A REPLY

Please enter your comment!
Please enter your name here

Hot Topics

ಮುಲ್ಕಿ : ಇಬ್ಬರ ಸಾವಿಗೆ ಕಾರಣರಾದ ತುಳು ಕಾಮಿಡಿಯನ್ ಅರ್ಪಿತ್ ಅರೆಸ್ಟ್..!

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರುಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ...

ಮಂಗಳೂರು ಮುಸ್ಲಿಂ ಯುವಕನನ್ನು ವರಿಸಿದ ನೆದರ್ಲೆಂಡ್ ಕ್ರೈಸ್ತ ಕನ್ಯೆ..!

ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ - ಪಂಗಡವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು, ಯಾರಿಗೆ, ಯಾವಾಗ, ಯಾರಮೇಲಾದರೂ ಎಲ್ಲಿ ಬೇಕಾದರೂ ಪ್ರೀತಿ ಹುಟ್ಟಬಹುದು. ಮಂಗಳೂರು: ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ - ಪಂಗಡವಿಲ್ಲ,...

ಮಂಗಳೂರು : ಸುರತ್ಕಲಿನಿಂದ ಕೆಲಸಕ್ಕೆ ತೆರಳಿದ್ದ ಯುವತಿ ಕಾವೇರಿ ಮಿಸ್ಸಿಂಗ್..!

ಮಂಗಳೂರು: ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿ ತಡಂಬೈಲ್‌ ಗ್ರಾಮದ ಜಯಶ್ರೀ ಶೆಟ್ಟಿ ಎಂಬವರ ಮಗಳು ಕಾವೇರಿ(19) ಎಂದು ತಿಳಿದು ಬಂದಿದೆ.ಜ.27ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು...