Connect with us

    FILM

    ಖ್ಯಾತ ಮಲಯಾಳಂ ನಟಿ, ನಿರೂಪಕಿ ಸುಬಿ ಸುರೇಶ್‌ ನಿಧನ..!

    Published

    on

    ಖ್ಯಾತ ಮಲಯಾಳಂ ಹಾಸ್ಯ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್‌ ನಿಧನರಾಗಿದ್ದಾರೆ. 42 ವರ್ಷ ವಯಸ್ಸಿನ ಸುಬಿ ದೀರ್ಘ ಕಾಲದಿಂದ ಯಕೃತ್‌ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು.

    ಕೊಚ್ಚಿ: ಖ್ಯಾತ ಮಲಯಾಳಂ ಹಾಸ್ಯ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್‌ ನಿಧನರಾಗಿದ್ದಾರೆ. 42 ವರ್ಷ ವಯಸ್ಸಿನ ಸುಬಿ ದೀರ್ಘ ಕಾಲದಿಂದ ಯಕೃತ್‌ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು.

    ಇಂದು ಮುಂಜಾನೆ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರುಳೆದಿದ್ದಾರೆ.

    ತಮ್ಮ ವಾಕ್ಚಾತುರ್ಯ ಮತ್ತು ಹಾಸ್ಯಪ್ರಜ್ಞೆಗೆ ಹೆಸರು ಪಡೆದಿದ್ದ ಸುಬಿ ಓರ್ವ ನೃತ್ಯಗಾತಿ ಮತ್ತು ಕಾಮಿಡಿಯನ್‌ ಆಗಿ ವೃತ್ತಿಜೀವನ ಆರಂಭಿಸಿದ್ದರು.

    ಮುಂದೆ ಅವರು ಟಿವಿ ಶೋಗಳಾದ ಮಝವಿಲ್‌ ಮನೋರಮಾದ “ಮೇಡ್‌ ಫಾರ್‌ ಈಚ್‌ ಅದರ್”‌ ಮತ್ತು ಸೂರ್ಯ ಟಿವಿಯ “ಕುಟ್ಟಿ ಪಟ್ಟಲಂ” ನಲ್ಲಿ ನಿರೂಪಕಿಯಾಗಿದ್ದರು.

    ಸುಬಿ ಅವರು ಗೃಹನಾಥನ್,‌ ತಕ್ಸರ ಲಹಲ, ಎಲ್ಸಮ್ಮ ಎನ್ನ ಆಂಕುಟ್ಟಿ, ಡ್ರಾಮ, ಕಾರ್ಯಸ್ಥಾನ ಮುಂತಾದ ಚಲನಚಿತ್ರಗಳಲ್ಲಿ ನಟಿಸಿದ್ದರು.

    ಅವರು ಫಿಟ್ನೆಸ್‌ ತಜ್ಞೆಯೂ ಆಗಿದ್ದರಲ್ಲದೆ ಕೋವಿಡ್‌ ಲಾಕ್‌ಡೌನ್ ವೇಳೆ ಆಕೆ ಹೊರತಂದ ವರ್ಕೌಟ್‌ ವೀಡಿಯೋಗಳು ಬಹಳ ಜನಪ್ರಿಯವಾಗಿದ್ದರು.

    FILM

    ತೆಲಂಗಾಣ ಸರ್ಕಾರದಿಂದ ಟಾಲಿವುಡ್‌ಗೆ ಭಾರೀ ದೊಡ್ಡ ಹೊಡೆತ !!

    Published

    on

    ಮಂಗಳುರು/ ತೆಲಂಗಾಣ : ‘ಪುಷ್ಪ 2’ ಸಿನಿಮಾ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳು ಅ*ಪಘಾತದಿಂದ ಜೀ*ವ ಕಳೆದುಕೊಂಡ ಘಟನೆ ತೆಲಂಗಾಣದ ಸಂಧ್ಯಾ ಟಾಕೀಸ್ ಬಳಿ ನಡೆದಿದೆ.

    ಅ*ಪಘಾತದ ವೇಳೆ ತಾಯಿ ಹಾಗೂ ಮಗ ವಾಹನದಲ್ಲಿದ್ದರು. ತಾಯಿ ಮೃ*ತಪಟ್ಟಿದ್ದು, ಮಗ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃ*ತ ಮಹಿಳಯ ಕುಟುಂಬವನ್ನು ಭೇಟಿ ಮಾಡಿದ ತೆಲಂಗಾಣ ಸಿನಿಮಾಟೊಗ್ರಫಿ ಸಚಿವ ವೆಂಕಟ ರೆಡ್ಡಿ ಅವರಿಗೆ 25 ಲಕ್ಷ ಹಣ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೆಂಕಟ ರೆಡ್ಡಿ ‘ಪುಷ್ಪ 2’ ಸಿನಿಮಾ, ಅಲ್ಲು ಅರ್ಜುನ್ ಅನ್ನು ಟೀಕೆ ಮಾಡಿದ್ದಾರೆ. ತೆಲಂಗಾಣ ವಿಧಾನಸಭೆಯಲ್ಲಿಯೂ ಈ ಬಗ್ಗೆ ಮಾತನಾಡಿರುವ ಸಚಿವ ವೆಂಕಟ ರೆಡ್ಡಿ, ಚಿತ್ರರಂಗಕ್ಕೆ ನೀಡುತ್ತಿರುವ ಎಲ್ಲ ಸವಲತ್ತುಗಳನ್ನು ನಿಲ್ಲಿಸುತ್ತಿರುವದಾಗಿ ಘೋಷಣೆ ಮಾಡಿದ್ದಾರೆ.

    ಈ ಘಟನೆ, ತೆಲಂಗಾಣ ಸರ್ಕಾರ ತೆಲುಗು ಚಿತ್ರರಂಗಕ್ಕೆ ಭಾರಿ ಹೊಡೆತ ಕೊಟ್ಟಿದೆ. ಬಾಲಿವುಡ್ ನಂತರ ತೆಲುಗು ಚಿತ್ರರಂಗವೇ ಭಾರತದ ಅತ್ಯಂತ ದೊಡ್ಡ ಚಿತ್ರರಂಗ. ಬಾಕ್ಸ್ ಕಲೆಕ್ಷನ್​ ಲೆಕ್ಕಹಾಕಿ ನೋಡಿದರೆ ಇಡೀ ಭಾರತದಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡುವ ಚಿತ್ರರಂಗ ಟಾಲಿವುಡ್. ಆದರೆ ಈಗ ತೆಲಂಗಾಣ ಸರ್ಕಾರ ತೆಲುಗು ಚಿತ್ರರಂಗಕ್ಕೆ ಭಾರಿ ದೊಡ್ಡ ಹೊಡೆತ ನೀಡಿದೆ. ಹಾಗಾಗಿ ತೆಲುಗು ಚಿತ್ರರಂಗದ ದೊಡ್ಡ ನಿರ್ಮಾಪಕರು, ಸ್ಟಾರ್ ನಟರು ಚಿಂತಾಮಗ್ನರಾಗಿದ್ದಾರೆ. ತೆಲುಗು ರಾಜ್ಯಗಳಲ್ಲಿ ಸಿನಿಮಾ ಟಿಕೆಟ್ ದರಗಳು ಕಡಿಮೆ ಇವೆ. ಆದರೆ ಯಾವುದೇ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆಗುವ ಸಮಯದಲ್ಲಿ ನಿರ್ಮಾಪಕರು, ಸರ್ಕಾರದ ಬಳಿ ಮನವಿ ಮಾಡಿಕೊಂಡು ಟಿಕೆಟ್ ಬೆಲೆ ಹೆಚ್ಚಳ ಹಾಗೂ ಹೆಚ್ಚುವರಿ ಶೋ ಹಾಕಿಕೊಳ್ಳಲು ಅನುಮತಿ ಪಡೆದುಕೊಳ್ಳುತ್ತಾರೆ.

    “ಇಷ್ಟು ದಿನ ತೆಲುಗು ಸಿನಿಮಾಗಳಿಗೆ ನೀಡಲಾಗುತ್ತಿದ್ದ ವಿಶೇಷ ಸವಲತ್ತುಗಳು, ಬೆನಿಫಿಟ್ ಶೋಗಳನ್ನು ರದ್ದು ಮಾಡಲಾಗುತ್ತಿದೆ. ಮಾತ್ರವಲ್ಲದೆ ತೆಲುಗು ಸಿನಿಮಾಗಳಿಗೆ ನೀಡಲಾಗುತ್ತಿದ್ದ ಟಿಕೆಟ್ ದರ ಹೆಚ್ಚಳ ಸವಲತ್ತನ್ನು ಸಹ ಹಿಂಪಡೆಯಲಾಗಿದೆ” ಎಂದು ಸಚಿವ ವೆಂಕಟ ರೆಡ್ಡಿ ತೆಲಂಗಾಣ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಅಲ್ಲದೆ ತಮ್ಮ ಸ್ವಂತ ಖಾತೆಯಿಂದ 25 ಲಕ್ಷ ರೂಪಾಯಿ ಹಣವನ್ನು ಮೃ*ತ ಮಹಿಳೆಯ ಕುಟುಂಬಕ್ಕೆ ನೀಡುತ್ತಿರುವಾಗಿ ಹಾಗೂ ಐಸಿಯುನಲ್ಲಿರುವ ಬಾಲಕ ಶ್ರೀತೇಜ ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ನೋಡಿಕೊಳ್ಳುವುದಾಗಿ ಹೇಳಿದ್ದಾರೆ.

    ತೆಲಂಗಾಣ ಸರ್ಕಾರದ ಈ ನಿರ್ಣಯ ತೆಲುಗು ಚಿತ್ರರಂಗಕ್ಕೆ ಭಾರಿ ದೊಡ್ಡ ಪೆಟ್ಟು ನೀಡಲಿದೆ. ಟಿಕೆಟ್ ದರ ಹೆಚ್ಚಳ ಮತ್ತು ಹೆಚ್ಚುವರಿ ಶೋಗಳು ಇಲ್ಲದಿದ್ದರೆ ತೆಲುಗು ಸಿನಿಮಾಗಳು ಭಾರಿ ನಷ್ಟವನ್ನು ಎದುರಿಸಬೇಕಾಗುತ್ತದೆ. ತೆಲಂಗಾಣ ಸರ್ಕಾರದ ಈ ನಿರ್ಧಾರದಿಂದಾಗಿ ಬಿಗ್ ಬಜೆಟ್ ಸಿನಿಮಾಗಳು ಚಿಂತೆಗೆ ದೂಡಲ್ಪಟ್ಟಿವೆ. ಇದೀಗ ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾದ ಮೇಲೆ ಭಾರಿ ಪರಿಣಾಮ ಬೀರಲಿದೆ. ಸಂಕ್ರಾಂತಿಗೆ ಸಹ ಕೆಲವು ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆಗಲಿದ್ದು, ಅವುಗಳಿಗೂ ಸಹ ಸಮಸ್ಯೆ ಆಗಲಿದೆ.

    Continue Reading

    BIG BOSS

    ಸಾಕು ನಾಯಿಗೋಸ್ಕರ ಬ್ರೇಕಪ್ ಮಾಡಿಕೊಂಡ ‘ಬಿಗ್ ಬಾಸ್ ಸೀಸನ್ 10’ರ ಸ್ಪರ್ಧಿ !

    Published

    on

    ಮಂಗಳೂರು/ಬೆಂಗಳೂರು: ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಹಾಗೂ ಮಾಡೆಲ್ ಆಗಿರುವ ಪವಿ ಪೂವಪ್ಪ ಅವರು ‘ಬಿಗ್ ಬಾಸ್ ಸೀಸನ್ 10’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು. ಸದ್ಯ ಇವರ ಬ್ರೇಕಪ್ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ.

     

    ನಾನು ಏಕೆ ಬ್ರೇಕಪ್ ಮಾಡಿಕೊಂಡೆ ಅನ್ನುವ ವಿಚಾರವನ್ನು ಅವರು ತಿಳಿಸಿದ್ದಾರೆ. ಯುಟ್ಯೂಬ್ ಚಾನಲ್ ವೊಂದಕ್ಕೆ ನೀಡಿರುವ ಸಂದರ್ಶನವಿಗ ಸಖತ್ ವೈರಲ್ ಆಗುತ್ತಿದೆ. ಬಿಗ್ ಬಾಸ್ ಸಮಯದಲ್ಲಿ ತಮ್ಮ ಪ್ರೀತಿ ಬಗ್ಗೆ ಮಾತನಾಡಿದ್ದ ಪವಿ,’ನನ್ನ ಬಾಯ್ ಫ್ರೆಂಡ್ ಐರ್ ಲ್ಯಾಂಡ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶೀಘ್ರವೇ ನಾವಿಬ್ಬರು ಮದುವೆಯಾಗುತ್ತಿದ್ದೇವೆ’ ಅಂತಾ ಹೇಳಿದ್ದರು.

    ಹೌದು, ಡಿಜೆ ಮ್ಯಾಡಿ ಎಂಬುವವರ ಜೊತೆ ಪವಿ ಪೂವಪ್ಪ ಕಳೆದ ಐದು ವರ್ಷಗಳಿಂದ ರಿಲೇಷನ್ ಶಿಪ್ ನಲ್ಲಿದ್ದರು. ಈ ಜೋಡಿ ಶೀಘ್ರವೇ ಮದುವೆ ಆಗಲಿದೆ ಅಂತಾ ಅನೇಕರು ಅಂದುಕೊಂಡಿದ್ದರಂತೆ. ಆದರೆ ಇದು ಹುಸಿಯಾಗಿದ್ದು, ‘ನಮ್ಮಿಬ್ಬರ ನಡುವೆ ಬ್ರೇಕಪ್ ಆಗಿದೆ’ ಅಂತಾ ಸ್ವತಃ ಪವಿ ಅವರೇ ಯೂಟ್ಯೂಬ್ ಚಾನೆಲ್ ನ ಸಂದರ್ಶನದಲ್ಲಿ ಹೇಳಿದ್ದಾರೆ.

    ಇದನ್ನೂ ಓದಿ: ಟೀಂ ಇಂಡಿಯಾದ WTC ಫೈನಲ್ ಭವಿಷ್ಯ !

    ಈ ಬಗ್ಗೆ ಮಾತನಾಡಿರುವ ಪವಿ,”ನಾವು ಐದು ವರ್ಷಗಳಿಂದ ಜೊತೆಗಿದ್ದೇವೆ. ನಮ್ಮಿಬ್ಬರ ನಡುವೆ ಒಳ್ಳೆಯ ಹೊಂದಾಣಿಕೆ ಇತ್ತು. ಆದರೆ ಬರುಬರುತ್ತಾ ನನ್ನ ನಾಯಿ ಬಗ್ಗೆ ಅವರಿಗೆ ಸಮಸ್ಯೆ ಶುರುವಾಯಿತು. ಮದುವೆಯಾದ ಮೇಲೆ ಮನೆಯಲ್ಲಿ ನಾಯಿಯನ್ನು ಬಿಡುವುದಿಲ್ಲ ಅಂತಾ ಹೇಳಿದರು. ಇದರಿಂದಲೇ ನಮ್ಮಿಬ್ಬರ ನಡುವೆ ಸಮಸ್ಯೆ ಶುರುವಾಯ್ತು. ಸಣ್ಣಪುಟ್ಟ ವಿಚಾರಗಳಿಗೆ ಕಾರಣ ಕೊಡಲು ಶುರು ಮಾಡಿದರು. ಹೀಗಾಗಿ ನಾನು ಬ್ರೇಕಪ್ ತೀರ್ಮಾನಕ್ಕೆ ಬಂದೆ. ಇದರಿಂದ ನಾನೇ ಹಿಂದೆ ಸರಿದರೆ ಒಳ್ಳೆದು ಅನಿಸಿತು” ಅಂತಾ ಅವರು ಹೇಳಿಕೊಂಡಿದ್ದಾರೆ.

    ಐದು ವರ್ಷಗಳ ಕಾಲ ರಿಲೇಷನ್ ಶಿಪ್ ನಲ್ಲಿದ್ದ ಜೋಡಿ ಇದೀಗ ಬ್ರೇಕಪ್ ಮಾಡಿಕೊಂಡಿರುವುದು ಸಾಕಷ್ಟು ಚರ್ಚೆಯಲ್ಲಿದೆ.

    Continue Reading

    FILM

    ಚಿಕಿತ್ಸೆಗೆಂದು ಅಮೆರಿಕಕ್ಕೆ ತೆರಳುತ್ತಿರುವ ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ ಗಣ್ಯರು

    Published

    on

    ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ.

    ಕಿಚ್ಚ ಸುದೀಪ್ ಅವರು ಶಿವಣ್ಣ ಅವರ ನಿವಾಸಕ್ಕೆ ತೆರಳಿ ಅವರಿಗೆ ಶುಭ ಹಾರೈಸಿದ್ದಾರೆ. ಧೈರ್ಯ ತುಂಬವ ಕಾರ್ಯ ಮಾಡಿದ್ದಾರೆ. ಶಿವರಾಜ್ ಕುಮಾರ್ ಮತ್ತು ಸುದೀಪ್ ಹಲವು ವರ್ಷಗಳಿಂದ ಅಣ್ಣ ತಮ್ಮಂದಿರಂತೆ ಇದ್ದಾರೆ.

    ಮಾಜಿ ಸಚಿವ, ನಟ ಬಿಸಿ ಪಾಟೀಲ್ ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಹೂಗುಚ್ಛ ನೀಡಿ ಶೀಘ್ರ ಗುಣಮುಖವಾಗಿ ಮರಳುವಂತೆ ಶುಭ ಹಾರೈಸಿದ್ದಾರೆ.

    ಸಚಿವ ಮಧು ಬಂಗಾರಪ್ಪ ಅವರು ಸಹ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಶುಭ ಹಾರೈಸಿದ್ದಾರೆ. ಮಧು ಬಂಗಾರಪ್ಪ ಅವರು ಶಿವಣ್ಣ ಅವರ ಆಪ್ತ ಸಂಬಂಧಿ. ಗೀತಾ ಶಿವರಾಜ್ ಕುಮಾರ್ ಅವರ ಸಹೋದರ ಸಹ.

    ನಟ ವಿನೋದ್ ರಾಜ್​ ಕುಮಾರ್ ಅವರು ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರೊಟ್ಟಿಗೆ ಕೆಲ ಸಮಯ ಕಳೆದಿದ್ದಾರೆ. ಹಳೆಯ ಗೆಳೆಯರಾದ ಇಬ್ಬರೂ ತುಸು ಸಮಯ ಹರಟೆ ಹೊಡೆದಿದ್ದಾರೆ. ವಿನೋದ್ ತಮ್ಮ ತೋಟದಿಂದ ಹಣ್ಣು-ತರಕಾರಿಗಳನ್ನು ಶಿವಣ್ಣನಿಗೆ ನೀಡಿದ್ದಾರೆ.

     

    ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅಮೆರಿಕಕ್ಕೆ ಹೋಗುತ್ತಿದ್ದಾರೆ. ಇಂದು ರಾತ್ರಿ 8:30ಗೆ ಶಿವಣ್ಣ ತೆರಳಲಿದ್ದು, ಅವರೊಟ್ಟಿಗೆ ಪತ್ನಿ ಗೀತಾ ಮತ್ತು ಮಗಳು ನಿವೇದಿತಾ ಸಹ ತೆರಳುವ ಸಾಧ್ಯತೆ ಇದೆ.

    Continue Reading

    LATEST NEWS

    Trending