Saturday, July 2, 2022

ಒಂದು ಸಾವಿರ ರೂಪಾಯಿ ದಾಟಿದ ಗ್ಯಾಸ್‌ ದರ: ಅಡುಗೆ ಅನಿಲ ದರ 3.5 ರೂಪಾಯಿ ಏರಿಕೆ

ನವದೆಹಲಿ: ಕಳೆದ 12 ದಿನಗಳ ಹಿಂದೆ 50 ಏರಿಕೆ ಕಂಡಿದ್ದ ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಹಾಗೂ ವಾಣಿಜ್ಯ ಬೆಲೆಯ ಸಿಲಿಂಡರ್‌ಗಳ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ.


ಈ ಮೂಲಕ ಈ ಮೊದಲು 999.50 ರೂಪಾಯಿಗಳಿದ್ದ ಗೃಹಬಳಕೆಯ ಸಿಲಿಂಡರ್ ಬೆಲೆ ಇಂದಿನಿಂದ 1003 ರೂಪಾಯಿ ಆಗಿದೆ.

14.2 ಕೆಜಿ ಅಡುಗೆ ಅನಿಲ ಸಿಲಿಂಡರ್‌ ಬೆಲೆ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಸಾವಿರ ರೂಪಾಯಿ ಗಡಿಯನ್ನು ಮೀರಿದೆ.


ಒಂದು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆ ಏರಿಕೆಯಾಗುತ್ತಿರುವುದು ಇದು ಎರಡನೇ ಬಾರಿ.

ಈ ಹಿಂದೆ ಮೇ 8 ರಂದು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಮೇ 7 ರಂದು ಪ್ರತಿ ಸಿಲಿಂಡರ್‌ಗೆ 10 ರೂಪಾಯಿ ಹೆಚ್ಚಿಸಲಾಗಿತ್ತು.

LEAVE A REPLY

Please enter your comment!
Please enter your name here

Hot Topics

ಹೆಜಮಾಡಿ: ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ವೇಗದೂತ ಬಸ್‌

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ...

ಸುಳ್ಯ: ರಸ್ತೆ ಬದಿ ತ್ಯಾಜ್ಯ ಎಸೆದಿದ್ದ ವ್ಯಕ್ತಿಗೆ ದಂಡ ವಿಧಿಸಿ, ಆತನಿಂದಲೇ ಕಸ ತೆಗೆಸಿದ ಪಿಡಿಒ

ಸುಳ್ಯ: ರಸ್ತೆ ಬದಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದ ವ್ಯಕ್ತಿಗೆ 5 ಸಾವಿರ ದಂಡ ವಿಧಿಸಿ ಆತನಿಂದಲೇ ತ್ಯಾಜ್ಯ ತೆರವುಗೊಳಿಸಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ...

ಉಡುಪಿಯಲ್ಲಿ ಅಲೆಗಳ ಅಬ್ಬರಕ್ಕೆ ಸಮುದ್ರ ಪಾಲಾದ ತೆಂಗಿನಮರ, ಬಂಡೆ

ಉಡುಪಿ: ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದಂತೆ ಸಮುದ್ರದ ಅಲೆಗಳ ಅಬ್ಬರ ಜಾಸ್ತಿಯಾಗಿದ್ದು, ಕಡಲ್ಕೊರೆತ ಉಂಟಾಗಿದೆ.ಜಿಲ್ಲೆಯ ಪಡುಬಿದ್ರಿ, ಕಾಪು,ಪಡುಕೆರೆ, ಕುಂದಾಪುರದ ಕೋಡಿ ಪರಿಸರದಲ್ಲಿ ಸಮುದ್ರ ಕೊರೆತ ಹೆಚ್ಚಾಗಿ ಸಮುದ್ರದ ತೀರದಲ್ಲಿ ಇದ್ದಂತಹ ತೆಂಗಿನ ಮರಗಳು...