Connect with us

    DAKSHINA KANNADA

    ಕಂಬಳ ಕೂಟವನ್ನು ಮಾ. 2023 ರ ಒಳಗೆ ನಡೆಸಲು ಸಮಿತಿ ತೀರ್ಮಾನ

    Published

    on

    ಮೂಡಬಿದಿರೆ: ಕೋಣಗಳ ಆರೋಗ್ಯದ ಹಿತದೃಷ್ಟಿ ಸಹಿತ ವಿವಿಧ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ನವೆಂಬರ್‌ನಲ್ಲಿ ಆರಂಭವಾಗುವ ಕಂಬಳ ಕೂಟಗಳನ್ನು ಮುಂದಿನ ವರ್ಷದ ಮಾರ್ಚ್‌ನೊಳಗಡೆ ಮುಗಿಸಲು ಕಂಬಳ ಸಮಿತಿ ಸಮಾಲೋಚನೆ ಸಭೆಯಲ್ಲಿ‌ ಚಿಂತನೆ ನಡೆಸಲಾಗಿದೆ.


    ಸಮಾಜ ಮಂದಿರದಲ್ಲಿ ನಿನ್ನೆ ದ.ಕ, ಉಡುಪಿ, ಕಾಸರಗೋಡು ಜಿಲ್ಲೆಗಳನ್ನೊಳಗೊಂಡ ಕಂಬಳ ಸಮಿತಿಯ ಸಮಾಲೋಚನೆ ಸಭೆ ನಡೆದಿದ್ದು ಸಮಿತಿ ಅಧ್ಯಕ್ಷ ಎರ್ಮಾಳ್‌ ರೋಹಿತ್‌ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

    ಕಂಬಳವನ್ನು ಶಿಸ್ತುಬದ್ಧವಾಗಿ ನಿಗದಿತ ಸಮಯದಲ್ಲಿ ಮುಗಿಸುವ ಹೊಣೆ ಕೇವಲ ವ್ಯವಸ್ಥಾಪಕರದಲ್ಲ. ಇದಕ್ಕೆ ದುಡಿಯುವ ಪ್ರತಿಯೊಬ್ಬರೂ ಜವಾಬ್ದಾರಿ ಎಂದು ರೋಹಿತ್‌ ಹೆಗ್ಡೆ ಹೇಳಿದರು.

    ಸಮಿತಿಯ ಗೌರವ ಸಲಹೆಗಾರ ಭಾಸ್ಕರ್‌ ಎಸ್‌.ಕೋಟ್ಯಾನ್‌, ವಕ್ತಾರ ಗುಣಪಾಲ ಕಡಂಬ, ತೀರ್ಪುಗಾರ ಸಂಚಾಲಕ ಸುರೇಶ್‌ ಕೆ. ಪೂಜಾರಿ ರೆಂಜಾಳ ಮಾತನಾಡಿದರು.

    ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಜೈನ್‌, ಉಪಾಧ್ಯಕ್ಷರಾದ ರಶ್ಮಿತ್‌ ಶೆಟ್ಟಿ, ಚಂದ್ರಹಾಸ ಸನಿಲ್‌, ಕೇಶವ ಭಂಡಾರಿ, ವಕ್ತಾರ ರಾಜೀವ್‌ ಶೆಟ್ಟಿ ಎಡೂರು, ಕೋಶಾಧಿಕಾರಿ ಹರ್ಷವರ್ಧನ್‌ ಪಡಿವಾಳ್‌, ತೀರ್ಪುಗಾರ ಸುಧಾಕರ ಶೆಟ್ಟಿ ಮುಗರೋಡಿ, ರವೀಂದ್ರ ಕುಮಾರ್‌ ಕುಕ್ಕುಂದೂರು, ವಲೇರಿಯನ್‌ ಡೇಸ ಅಲ್ಲಿಪಾದೆ, ಪ್ರಮುಖರಾದ ಸತೀಶ್ಚಂದ್ರ ಸಾಲ್ಯಾನ್‌ ಇರುವೈಲು ಪಾಣಿಲ ಮತ್ತಿತರರು ಉಪಸ್ಥಿತರಿದ್ದರು.

    BIG BOSS

    ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

    Published

    on

    ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.

    ‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ‌. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು

    Continue Reading

    DAKSHINA KANNADA

    ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !

    Published

    on

    ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.

    ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
    ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
    ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.

     

    Continue Reading

    BIG BOSS

    ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ

    Published

    on

    ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್‌ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.

    ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

    ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

    Continue Reading

    LATEST NEWS

    Trending