Friday, July 1, 2022

ಮಾಣಿಯಲ್ಲಿ: ಕೋಮುಸಂಘರ್ಷಕ್ಕೆ ತಿರುಗಿದ ಅಪಘಾತ: ಲಘು ಲಾಠಿ ಪ್ರಹಾರ

ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ, ಇದೇ ವಿಚಾರವಾಗಿ ಭಿನ್ನ ಕೋಮಿನ ಮಧ್ಯೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಎಂಬಲ್ಲಿ ನಡೆದಿದೆ. ಸದ್ಯ ಪೊಲೀಸರು ಜನರನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.


ಕಲ್ಲಡ್ಕ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಮತ್ತು ಕಲ್ಲಡ್ಕ ಕಡೆಗೆ ಬರುತ್ತಿದ್ದ ಶಿಪ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದ ಬಗ್ಗೆ ಎರಡು ಕಾರಿಗೆ ಸಂಬಂಧಪಟ್ಟವರ ನಡುವೆ ವಾದವಿವಾದ ನಡೆದು ಮಾತಿನ ಚಕಮಕಿ ನಡೆದಿದೆ.

ಬಳಿಕ ಇತ್ತಂಡದವರು ಪರಸ್ಪರ ಹಲ್ಲೆಗೆ ಮುಂದಾಗಿದ್ದರು, ಇದೇ ವೇಳೆ ಸ್ಥಳದಲ್ಲಿ ನೂರಾರು ಜನ ಜಮಾಯಿಸಿ, ಅಪಘಾತ ಪ್ರಕರಣ ಕೋಮು ಸಂಘರ್ಷಕ್ಕೆ ತಿರುಗಿತು ಎಂದು ಪ್ರತ್ಯಕ್ಷಿ ದರ್ಶಿಗಳು ತಿಳಿಸಿದ್ದಾರೆ.
ಈ ಬಗ್ಗೆ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ವಿಟ್ಲ‌ ಪೊಲೀಸರು ನಿಯಂತ್ರಿಸಲು ಲಾಠಿ ಬೀಸಿದರು. ಬಳಿಕ ಜನರು ದಿಕ್ಕಾಪಾಲಾಗಿ ಓಡಿದರು. ಬಳಿಕ ಪೊಲೀಸರು ವಾಹನಗಳನ್ನು ವಶಕ್ಕೆ ಪಡೆದುಕೊಂಡು ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...