ಬೆಳ್ತಂಗಡಿ: ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಹಿಂದೂ ಯುವಕರು ಹಾಗೂ ಓರ್ವ ಮುಸ್ಲಿಂ ಯುವಕ ಸೇರಿಕೊಂಡು ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್‌ನಲ್ಲಿ ಗೋದಲಿ ನಿರ್ಮಾಣ ಮಾಡಿರುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.
ಗೋದಲಿಯಲ್ಲಿ ದನಕರು, ಮೇಕೆಗಳು, ಮೊಲಗಳನ್ನು ಕಟ್ಟಿ ಹಾಕಿರುವುದರ ಜೊತೆಗೆ ಸಂಪೂರ್ಣ ನ್ಯಾಚುರಲ್ ವಸ್ತುಗಳನ್ನು ಬಳಸಿಕೊಂಡು ಅದ್ಭುತವಾಗಿ ಗೋದಲಿ ನಿರ್ಮಾಣ ಮಾಡಿದ್ದಾರೆ.
ಬೆಳ್ತಂಗಡಿ: ಯುವಕನೊಬ್ಬತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಸೇರಿ ಆತನನ್ನು ತಡೆದು ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರಿಂದ ನೋಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.22ರ ಶುಕ್ರವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್(21) ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಈತನ ವಿಡಿಯೋ ವೈರಲ್ ಆಗುತ್ತಲೇ, ತನ್ನ ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದ ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ ಎಂದು ತಿಳಿದು ಬಂದಿದೆ.
ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಹರಿದ ರೀತಿಯಲ್ಲಿತ್ತು. ಅದನ್ನು ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಮಾರುಕಟ್ಟೆಯಲ್ಲಿದ್ದ ಪಡ್ಡೆ ಹುಡುಗರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬಿರ್, ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರದ ನಿವಾಸಿ ಸಲೀಂ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ.
ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಶಾಹಿಲ್ ನ.21 ರಂದು ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು, ತಕ್ಷಣ ಮನೆಯವರು ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟಣೆ ಬಗ್ಗೆ ಸಾರ್ವಜನಿಕರು ಈ ಮೂವರನ್ನು ಪುಂಡರ ವಿರುದ್ಧ ಕಠಿನ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಮತ್ತು ಕುಟುಂಬದವರು ನ.21ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸಚಿವರ ಜತೆಯಲ್ಲಿ ಪತ್ನಿ ಪ್ರಮೀಳಾ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮೈಸೂರಿನ ಉದ್ಯಮಿ ಎಂ.ಕೆ.ಪೋತ್‌ರಾಜ್, ಉದ್ಯಮಿ ಕಲಬುರಗಿಯ ಸಂತೋಷ್ ಗುತ್ತೆದಾರ್, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಉಜಿರೆ, ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ನವೀನ್ ಗೌಡ ಸವಣಾಲು, ಕಾಂಗ್ರೆಸ್ ಮುಖಂಡ ರಾಘವೇಂದ್ರ ಪೂಜಾರಿ ಮತ್ತಿತರಿದ್ದರು.
ಬೆಳ್ತಂಗಡಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಮೊದಲಿಗೆ ಶ್ರೀ ಮಂಜುನಾಥನ ದರ್ಶನ ಪಡೆದು, ನಂತರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರಿಗೆ 600 ಕೋಟಿ ರೂ. ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್‌ತಿಳಿಸಿದ್ದಾರೆ.
ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ನಬಾರ್ಡ್ ಅಧ್ಯಕ್ಷ ಶಾಜಿ, ಕೆ.ವಿ. ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಶುಭಾಶಂಸನೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.